Accident

ಹೊಸ ವರ್ಷದ ಕುಡಿದ ಮತ್ತಿನಲ್ಲಿ ಘಟನೆ ; ಬೈಕ್‌ಗೆ ಡಿಕ್ಕಿ ಹೊಡೆದ ಕಾರು, ಸವಾರ ಸ್ಥಳದಲ್ಲೇ ಸಾವು !

SHIVAMOGGA ; ಚೇಸ್ ಮಾಡಲು ಹೋಗಿ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಸಿದ್ದಯ್ಯ ರೋಡ್ ಸರ್ಕಲ್ ಬಳಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಹೇಗಾಯ್ತು ಘಟನೆ ?

📢 Stay Updated! Join our WhatsApp Channel Now →

ಹೊಸ ವರ್ಷದ ಮತ್ತಿನಲ್ಲಿ ಕಾರಿಗೆ ಕಲ್ಲು ಹೊಡೆದು ಬೈಕ್ ಸವಾರ ಪರಾರಿಯಾಗುತ್ತಿದ್ದ. ಇದರಿಂದ ಸಿಟ್ಟಗೆದ್ದ ಕಾರು ಚಾಲಕ ಬೈಕ್ ಚೇಸ್ ಮಾಡಿಕೊಂಡು ಬಂದಿದ್ದ. ಈ ವೇಳೆ ಗಾಯತ್ರಿ ಶಾಲೆ ಬಳಿ ಹಂಪ್ ಕಾಣದೆ ಇಬ್ಬರು ಸವಾರರು ಕಾರು ಮತ್ತು ಬೈಕ್‌ನ್ನು ಹಾರಿಸಿದ್ದರು. ಈ ಹಿನ್ನೆಲೆ ಕಾರು ಪಲ್ಟಿಯಾಗಿ ಬೈಕ್‌ಗೆ ಡಿಕ್ಕಿ ಹೊಡೆದಿದೆ.‌ಘಟನೆಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.

ಕಾರಿನಲ್ಲಿದ್ದ ಇಬ್ಬರು ಹುಡುಗಿಯರು ಅಪಾಯದಿಂದ ಪಾರಾಗಿದ್ದಾರೆ. ಕಾರು ಚಾಲಕನಿಗೆ ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ. ಸದ್ಯ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ
ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>