ರಿಪ್ಪನ್‌ಪೇಟೆ ; ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಇಲ್ಲಿನ ಹೊಸನಗರ ರಸ್ತೆಯಲ್ಲಿರುವ ತಾವರೆಕೆರೆಗೆ ಉರುಳಿಬಿದ್ದ ಘಟನೆ ಇಂದು ಮಧ್ಯಾಹ್ನ ಸಂಭವಿಸಿದೆ.
ಹಾಸನದಿಂದ ಕೊಲ್ಲೂರಿಗೆ ತೆರಳುತ್ತಿದ್ದ ಮಾರುತಿ ಆಲ್ಟೋ ಕಾರು ತಾವರೆಕೆರೆ ಬಳಿಯಲ್ಲಿ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದೆ. ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರು ಏಕಾಏಕಿ ಕೆರೆಗೆ ಉರುಳುತ್ತಿದ್ದಂತೆ ಸ್ಥಳೀಯರು ಸಹಾಯಕ್ಕೆ ಧಾವಿಸಿ ಕಾರಲ್ಲಿದ್ದವರನ್ನು ಸುರಕ್ಷಿತವಾಗಿ ಮೇಲಕ್ಕೆತ್ತಿದ್ದಾರೆ ಎಂದು ತಿಳಿದುಬಂದಿದೆ.
ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





