CHIKKAMAGALURU ; ಹಾಸನಾಂಬೆ ದರ್ಶನಕ್ಕೆ ಹೊರಟಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದು, ಮಹಿಳೆ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕಲ್ಕೆರೆ ಗ್ರಾಮದಲ್ಲಿ ಅ.30ರ ಬುಧವಾರ ನಡೆದಿದೆ.

ಚಿಕ್ಕಮಗಳೂರು ತಾಲೂಕಿನ ಗವನಹಳ್ಳಿ ಗ್ರಾಮದ ಮಂಜು-ವನಿತಾ ದಂಪತಿ ಪ್ರಯಾಣಿಸುತ್ತಿದ್ದ ಕಾರು ಬುಧವಾರ ಬೆಳಗಿನಜಾವ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.
ಮಂಜು ಪತ್ನಿ ವನಿತಾ (38) ಮೃತಪಟ್ಟವರು. ಕಾರು ಚಲಾಯಿಸುತ್ತಿದ್ದ ಮಂಜು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರು ಕೆರೆಗೆ ಬಿದ್ದ ಕೂಡಲೇ ಸ್ಥಳಿಯರಿಂದ ರಕ್ಷಣಾ ಕಾರ್ಯ ನಡೆದಿದ್ದು, ಕಾರಿಗೆ ಹಗ್ಗ ಕಟ್ಟಿ ಕಲ್ಕೆರೆ ಗ್ರಾಮಸ್ಥರು ಎಳೆದು ರಕ್ಷಣಾ ಕಾರ್ಯಾಚರಣೆ ಮಾಡಿದ್ದರು. ಕಾರು ಕೆರೆಗೆ ಬಿದ್ದು, ವನಿತಾ ನೀರು ಕುಡಿದಿದ್ದರಿಂದ ಆಕೆಯನ್ನು ಬದುಕಿಸುವ ಗ್ರಾಮಸ್ಥರ ಹರಸಾಹಸ ಫಲ ನೀಡಲಿಲ್ಲ.

ಬೇಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.