ಹೊಸನಗರ

ಹೂವಿನಕೋಣೆ ಶಾಲೆ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ಪ್ರಕರಣ ; ಇದು ಯಾವ ಭಯೋತ್ಪಾದಕ ಕೃತ್ಯಗಳಿಗೂ ಕಡಿಮೆಯಿಲ್ಲ – ಸಿಎಂ ಸಿದ್ದರಾಮಯ್ಯ

ಹೊಸನಗರ ; ಶಿವಮೊಗ್ಗ ಜಿಲ್ಲೆಯ ತಾಲ್ಲೂಕಿನ ಸರ್ಕಾರಿ ಶಾಲೆಯಲ್ಲಿ ಕುಡಿಯುವ ನೀರಿನ ಟ್ಯಾಂಕ್‌ಗೆ ಕಿಡಿಗೇಡಿಗಳು ಕೀಟನಾಶಕ ಬೆರೆಸಿರುವ ಪ್ರಕರಣ ಇದು ಯಾವ ಭಯೋತ್ಪಾದಕ ಕೃತ್ಯಗಳಿಗೂ ಕಡಿಮೆಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಿಎಂ, ‘ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಹೂವಿನಕೋಣೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ಗೆ ಕಿಡಿಗೇಡಿಗಳು ಕೀಟನಾಶಕ ಬೆರೆಸಿರುವ ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಲಾಗಿದೆ. ಹತ್ತಾರು ಎಳೆಯ ಮಕ್ಕಳ ಮಾರಣ ಹೋಮ ನಡೆಸುವ ದುರುದ್ದೇಶ ಹೊಂದಿದ್ದ ಇದು ಯಾವ ಭಯೋತ್ಪಾದಕ ಕೃತ್ಯಗಳಿಗೂ ಕಡಿಮೆಯಿಲ್ಲ ಎನ್ನುವುದು ನನ್ನ ಭಾವನೆ’ ಎಂದಿದ್ದಾರೆ.

ಅಡುಗೆ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದಾಗಿ ಘಟಿಸಬಹುದಾಗಿದ್ದ ಬಹುದೊಡ್ಡ ದುರಂತವೊಂದು ತಪ್ಪಿದೆ. ಶಾಲೆಯ ಅಡುಗೆ ಸಿಬ್ಬಂದಿಯನ್ನು ಅಭಿನಂದಿಸುತ್ತೇನೆ. ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ಕೃತ್ಯ ಎಸಗಿರುವ ದುರುಳರನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!