Bangalore ರಾಜ್ಯದಲ್ಲಿ ಹೆಚ್ಚಿದ ಡೆಂಗ್ಯೂ, ಚಿಕೂನ್‌ಗುನ್ಯಾ ; ಯಾವ ಜಿಲ್ಲೆಯಲ್ಲಿ ಎಷ್ಟೆಷ್ಟು ಪ್ರಕರಣಗಳಿವೆ ?

Written by malnadtimes.com

Published on:

Bangalore | ರಾಜ್ಯದಲ್ಲಿ ಮಳೆ ಆರಂಭಗೊಂಡ ಬೆನ್ನಲ್ಲೇ ಡೆಂಗ್ಯೂ, ಚಿಕೂನ್‌ಗುನ್ಯಾ ಪ್ರಕರಣಗಳು ಸಹ ಹೆಚ್ಚ ತೊಡಗಿದೆ.

WhatsApp Group Join Now
Telegram Group Join Now
Instagram Group Join Now

ಹೌದು, ಕಳೆದೊಂದು ತಿಂಗಳ ಅವಧಿಯಲ್ಲಿ ರಾಜ್ಯದಲ್ಲಿ ಬರೋಬ್ಬರಿ 2 ಸಾವಿರಕ್ಕೂ ಅಧಿಕ ಮಂದಿಯಲ್ಲಿ ಡೆಂಗ್ಯೂ ಪ್ರಕರಣ ಕಾಣಿಸಿಕೊಂಡಿದ್ದು, ಹವಾಮಾನ ವೈಪರೀತ್ಯದಿಂದ ಈ ರೋಗ ಮತ್ತಷ್ಟು ಉಲ್ಬಣಗೊಂಡಿದೆ‌.banglore

ಈವರೆಗೆ ವರದಿಯಾದ ಒಟ್ಟು ಡೆಂಗ್ಯೂ ಪ್ರಕರಣಗಳ ಸಂಖ್ಯೆ 4,886ಕ್ಕೆ ತಲುಪಿದ್ದು, ಕಳೆದ ತಿಂಗಳು ಈ ವೇಳೆ ಒಟ್ಟು 2,877 ಪ್ರಕರಣಗಳು ವರದಿಯಾಗಿದ್ದವು.

ಈ ವರ್ಷ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಡೆಂಗ್ಯೂ ಪ್ರಕರಣಗಳು ದೃಢಪಟ್ಟಿವೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 4,063 ಮಂದಿಯ ರಕ್ತದ ಮಾದರಿಯನ್ನು ಪರೀಕ್ಷೆ ಮಾಡಲಾಗಿದ್ದು, ಅವರಲ್ಲಿ 1,230 ಮಂದಿಯಲ್ಲಿ ಈ ಜ್ವರ ದೃಢಪಟ್ಟಿದೆ.

ಎಲ್ಲೆಲ್ಲಿ ಎಷ್ಟೆಷ್ಟು ?

  • ಮೈಸೂರು : 377
  • ಚಿಕ್ಕಮಗಳೂರು : 346
  • ಹಾವೇರಿ : 272
  • ಶಿವಮೊಗ್ಗ : 236
  • ಚಿತ್ರದುರ್ಗ : 229
  • ದಕ್ಷಿಣ ಕನ್ನಡ : 211

Read More: Hosanagara ಹೊಸನಗರದ ಸಾರ್ವಜನಿಕ ಆಸ್ಪತ್ರೆಯ ಒಳ ರೋಗಿಗಳಿಗೆ ಊಟದ ವ್ಯವಸ್ಥೆ ಯಾವಾಗ ?

ಹಗಲಿನಲ್ಲಿ ಕಚ್ಚುವ ಈಡಿಸ್ ಜಾತಿಯ ಸೊಳ್ಳೆಯಿಂದ ಡೆಂಗ್ಯೂ ಜ್ವರ ಬರುತ್ತದೆ. ಸೊಳ್ಳೆ ಕಚ್ಚಿದ ನಾಲ್ಕರಿಂದ ಹತ್ತು ದಿನಗಳ ಒಳಗೆ ರೋಗ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ. ಈ ಜ್ವರ ಇದ್ದರೆ ದೇಹದ ತಾಪಮಾನ ವಿಪರೀತವಾಗಿ ಹೆಚ್ಚಾಗುತ್ತದೆ. ರೋಗ ಲಕ್ಷಣಗಳಿಗೆ ಅನುಸಾರ ಚಿಕಿತ್ಸೆ ನೀಡಲಾಗುತ್ತದೆ. ಹಾಗಾಗಿ ನಿರ್ಲಕ್ಷ್ಯ ಮಾಡದೆ ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕು ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಚಿಕೂನ್‌ಗುನ್ಯಾ ಏರಿಕೆ :

ರಾಜ್ಯದಲ್ಲಿ 28 ಸಾವಿರಕ್ಕೂ ಅಧಿಕ ಮಂದಿ ಚಿಕೂನ್‌ಗುನ್ಯಾ ಸೋಂಕಿತರನ್ನು ಗುರುತಿಸಿ, ತಪಾಸಣೆಗೆ ಒಳಪಡಿಸಲಾಗಿದೆ. 12 ಸಾವಿರಕ್ಕೂ ಅಧಿಕ ಮಂದಿಯ ರಕ್ತ ಪರೀಕ್ಷೆ ನಡೆಸಲಾಗಿದ್ದು, 813 ಮಂದಿಯಲ್ಲಿ ಜ್ವರ ದೃಢಪಟ್ಟಿದೆ.

ಎಲ್ಲೆಲ್ಲಿ ಎಷ್ಟೆಷ್ಟು ?

  • ಬೆಂಗಳೂರು : 123
  • ಶಿವಮೊಗ್ಗ : 147
  • ವಿಜಯಪುರ : 98
  • ಮೈಸೂರು : 82

Read More: Bakrid 2024 | ಸೌಹಾರ್ಧಯುತವಾಗಿ ಬಕ್ರೀದ್ ಹಬ್ಬ ಆಚರಿಸಲು ಶಿವಮೊಗ್ಗ ಡಿಸಿ ಗುರುದತ್ತ ಹೆಗಡೆ ಮನವಿ

Leave a Comment