ರಿಪ್ಪನ್‌ಪೇಟೆ ; ಅಮೃತ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಶಿವಪುರ ಗ್ರಾಮದಲ್ಲಿ ಹಾಡಹಗಲೇ ಮನೆಯ ಹಿಂಬಾಗಲು ಮುರಿದು ಬಂಗಾರ ಮತ್ತು ನಗದನ್ನು ಕಳ್ಳತನ ಮಾಡಿಕೊಂಡು ಪರಾರಿಯಾದ ಘಟನೆ ನಡೆದಿದೆ.
ಸುಮಾರು 20 ಗ್ರಾಂನ ಎರಡು ಉಂಗುರ ಮತ್ತು 10 ಸಾವಿರ ರೂ. ಹಣವನ್ನು ಗಾಡ್ರೇಜ್ ಬೀರುವಿನ ಬೀಗ ಮುರಿದು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾರೆನ್ನಲಾಗಿದೆ. ಈ ಘಟನೆ ಸಂಬಂಧ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.