
ಕಡವೆ ಬೇಟೆ ಪ್ರಕರಣ: ಅರಣ್ಯಾಧಿಕಾರಿಗಳ ದಾಳಿ, ಮೂವರು ಬಂಧನ
ಭದ್ರಾವತಿಯ ಎಂ.ಸಿ. ಹಳ್ಳಿ ಶಾಖೆ ವ್ಯಾಪ್ತಿಯಲ್ಲಿ ಕಡವೆ ಬೇಟೆಯಾಡಿ ಮಾಂಸ ಕತ್ತರಿಸುತ್ತಿದ್ದ ಆರೋಪದ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ಮೂವರನ್ನು ಬಂಧಿಸಿದ್ದಾರೆ. ಸುಮಾರು 70 ಕೆ.ಜಿ. ಕಡವೆ ಮಾಂಸ, ನಾಡಬಂದೂಕು, ದ್ವಿಚಕ್ರ ವಾಹನ ಹಾಗೂ ಇತರೆ ವಸ್ತುಗಳನ್ನು ವಶಕ್ಕೆ ಪಡೆದು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.









