ಹೊಸನಗರ: ನಮ್ಮ ಮನೆ ಸುತ್ತಲಿನ ಪರಿಸರವನ್ನು ನಿರಂತರವಾಗಿ ಪರಿಶುದ್ಧವಾಗಿಟ್ಟುಕೊಳ್ಳುವುದು ಅತ್ಯಗತ್ಯ. ಮನೆಯ ಮುಂಭಾಗದ ರಸ್ತೆಗಳನ್ನು ನಾವೇ ಸ್ವಚ್ಛಗೊಳಿಸಿಕೊಳ್ಳುವುದರಿಂದ ಸಾಂಕ್ರಾಮಿಕ ರೋಗಗಳು ಹರಡುವುದನ್ನು ತಡೆಯಬಹುದು ಎಂದು ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸುಮಾ ಸುರೇಶ್ ತಿಳಿಸಿದರು.
ಹೊಸನಗರ : ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ಹೆಸರನ್ನು ನೋಂದಾಯಿಸಿಕೊಂಡು ತಮ್ಮ ಹಕ್ಕನ್ನು ಚಲಾಯಿಸಬೇಕು. ಯಾರೂ ಮತದಾನದ ಹಕ್ಕಿನಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಗ್ರಾಮ ಪಂಚಾಯತಿ ಹಾಗೂ ಹೋಬಳಿ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೊಸನಗರ ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ (ಇಒ) ನರೇಂದ್ರಕುಮಾರ್ ತಿಳಿಸಿದ್ದಾರೆ.
ರಿಪ್ಪನ್‌ಪೇಟೆ: ಗಣೇಶ ಚತುರ್ಥಿಯು ಯಾವುದೇ ನಿರ್ದಿಷ್ಟ ಜಾತಿ ಅಥವಾ ಧರ್ಮಕ್ಕೆ ಸೀಮಿತವಾಗದೆ, ಸಮಾಜವನ್ನು ಒಗ್ಗೂಡಿಸುವ ಪವಿತ್ರ ಹಬ್ಬವಾಗಿದೆ ಎಂದು ಕುಂದಾಪುರದ ಕವಿತಾ ಆಚಾರ್ಯ ಮುದೂರು ಅಭಿಪ್ರಾಯಪಟ್ಟರು.
ಹೊಸನಗರ: ಸಂಸ್ಥೆಗಳ ಸತತ ಪ್ರಗತಿ ಮತ್ತು ಭವಿಷ್ಯದ ಶ್ರೇಯಸ್ಸಿನಲ್ಲಿ ಷೇರುದಾರರ ಸಹಕಾರವೇ ಮೂಲಸ್ತಂಭ. ಸಾಲ ಪಡೆದ ಸದಸ್ಯರು ಸಮಯಕ್ಕೆ ಸರಿಯಾಗಿ ಕಂತುಗಳನ್ನು ಪಾವತಿಸಿದಾಗ ಮಾತ್ರ ಸಂಸ್ಥೆಗಳು ಸುಸ್ಥಿರವಾಗಿ ಬೆಳೆಯಲು ಸಾಧ್ಯ ಎಂದು ಹೊಸನಗರ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ (BEO) ಗಣೇಶ್ ವೈ. ಅಭಿಪ್ರಾಯಪಟ್ಟರು.
ರಿಪ್ಪನ್‌ಪೇಟೆ: ಇಲ್ಲಿನ ನಾಡಕಛೇರಿ ಹಿಂಭಾಗ ಹಾಗೂ ಬರುವೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಮೀಪ ರೆವಿನ್ಯೂ ಇನ್ಸ್‌ಪೆಕ್ಟರ್ (ಆರ್‌ಐ) ವಸತಿ ಗೃಹಕ್ಕಾಗಿ ಕಾಯ್ದಿರಿಸಿದ್ದ ಜಾಗವನ್ನು ಖಾಸಗಿ ವ್ಯಕ್ತಿಯೊಬ್ಬರು ಅಕ್ರಮವಾಗಿ ಒತ್ತುವರಿ ಮಾಡಿ, ತಂತಿ ಬೇಲಿ ಹಾಗೂ ಕಲ್ಲುಕಂಬಗಳನ್ನು ಅಳವಡಿಸಿದ್ದರು. ಈ ಕುರಿತು 'ಮಲ್ನಾಡ್ ಟೈಮ್ಸ್' ವರದಿ ಪ್ರಕಟಿಸುತ್ತಿದ್ದಂತೆ ಎಚ್ಚೆತ್ತ ಕಂದಾಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಅಕ್ರಮ ಬೇಲಿಯನ್ನು ತೆರವುಗೊಳಿಸಿದ್ದಾರೆ.
ರಿಪ್ಪನ್‌ಪೇಟೆ : ಇಲ್ಲಿನ ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಇಂದು ಪ್ರಧಾನಮಂತ್ರಿ ಮೋದಿಯವರ 76ನೇ ಜನ್ಮದಿನದ ಅಂಗವಾಗಿ ರಿಪ್ಪನ್‌ಪೇಟೆ ಕೆರೆಹಳ್ಳಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರು ಮತ್ತು ಅಭಿಮಾನಿಗಳೊಂದಿಗೆ ಮೋದಿಯವರ ಸೇವಾ ಸಂಕಲ್ಪ ಅಭಿಯಾನದಡಿ ವಿಶೇಷ ಪೂಜೆ ಸಲ್ಲಿಸಿ ಶುಭಕೋರಲಾಯಿತು.
ರಿಪ್ಪನ್‌ಪೇಟೆ : ನಾಡಕಛೇರಿ ಹಿಂಭಾಗದ ಬರುವೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಳಿ ಇರುವ, ರೆವಿನ್ಯೂ ಇನ್ಸ್ಪೆಕ್ಟರ್ ವಸತಿ ನಿವೇಶನಕ್ಕಾಗಿ ಮೀಸಲಿಟ್ಟ ಸರ್ಕಾರಿ ಜಾಗವನ್ನು ಪ್ರಭಾವಿ ವ್ಯಕ್ತಿಯೊಬ್ಬರು ಕಬಳಿಸಲು ಯತ್ನಿಸುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಹೊಸನಗರ: ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಕಸ್ತೂರಿ ರಂಗನ್ ವರದಿಯ ಸಾಧಕ-ಬಾಧಕಗಳ ಕುರಿತು ಸ್ಥಳೀಯ ರೈತರು ಮತ್ತು ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೆಪ್ಟೆಂಬರ್ 19ರಂದು ತೀರ್ಥಹಳ್ಳಿಗೆ ಭೇಟಿ ನೀಡಲಿದ್ದಾರೆ.
ಹೊಸನಗರ: ಸ್ಥಳೀಯ ತಾಲೂಕು ಕಚೇರಿಯಲ್ಲಿ ಕಳೆದ ಮೂರು ತಿಂಗಳಿಂದ ಬಂದ್ ಆಗಿರುವ ಆಧಾರ್ ನೋಂದಣಿ ಕೇಂದ್ರವನ್ನು ಒಂದು ವಾರದೊಳಗೆ ಮರುಆರಂಭಿಸದಿದ್ದರೆ ತಾಲೂಕು ಕಚೇರಿಯ ಎದುರು ಪಕ್ಷಾತೀತವಾಗಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಪಟ್ಟಣ ಪಂಚಾಯತಿ ಮಾಜಿ ಅಧ್ಯಕ್ಷ ಹಾಲಗದ್ದೆ ಉಮೇಶ್ ಎಚ್ಚರಿಸಿದ್ದಾರೆ.