
ಬೆಳೆ ವಿಮೆ ವಿತರಣೆಯಲ್ಲಿ ಭಾರೀ ಗೋಲ್‌ಮಾಲ್: ರೈತರಿಗೆ ನ್ಯಾಯ ಒದಗಿಸಲು ಆಗ್ರಹಿಸಿ ಹೊಸನಗರದಲ್ಲಿ ಮನವಿ
ಹವಾಮಾನಾಧಾರಿತ ಬೆಳೆ ವಿಮೆ ಪರಿಹಾರ ವಿತರಣೆಯಲ್ಲಿ ವ್ಯಾಪಕ ತಾರತಮ್ಯ ಮತ್ತು ಲೋಪದೋಷಗಳು ನಡೆದಿವೆ ಎಂದು ಆರೋಪಿಸಿ ಸಹಕಾರಿ ಕ್ಷೇತ್ರದ ಪ್ರಮುಖರು ಹಾಗೂ ರೈತ ಮುಖಂಡರು ಹೊಸನಗರ ತಹಸೀಲ್ದಾರ್ ಭರತರಾಜ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.







