ಶಿವಮೊಗ್ಗ : ಪಶ್ಚಿಮಘಟ್ಟ ರಕ್ಷಣೆ ಹಾಗೂ ಕಸ್ತೂರಿ ರಂಗನ್ ವರದಿ ಜಾರಿಯಿಂದ ಮಲೆನಾಡಿನ ರೈತರು ಮತ್ತು ಸಾರ್ವಜನಿಕ ಮೇಲಾಗುವ ಪರಿಣಾಮಗಳ ಕುರಿತು ಮಾಹಿತಿ ಸಂಗ್ರಹಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೆಪ್ಟೆಂಬರ್ 19 ರಂದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಗೆ ಭೇಟಿ ನೀಡಲಿದ್ದಾರೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ತಿಳಿಸಿದ್ದಾರೆ.
ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಬಿಜೆಪಿ ವತಿಯಿಂದ ಸೆಪ್ಟೆಂಬರ್ 17ರಿಂದ ಅಕ್ಟೋಬರ್ 17ರವರೆಗೆ ತಿಂಗಳ ಕಾಲ ‘ಸೇವಾ ಸಂಕಲ್ಪ ಅಭಿಯಾನ’ ಹಮ್ಮಿಕೊಳ್ಳಲಾಗುತ್ತಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.
ಮಾಹಿತಿ ತಂತ್ರಜ್ಞಾನ ಮತ್ತು ಕೈಗಾರಿಕಾ ಹೂಡಿಕೆಗೆ ಶಿವಮೊಗ್ಗವನ್ನು ಪ್ರಮುಖ ತಾಣವನ್ನಾಗಿ ಅಭಿವೃದ್ಧಿಪಡಿಸಬೇಕು ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಒತ್ತಾಯಿಸಿದ್ದಾರೆ. ಬೆಂಗಳೂರಿನಾಚೆ ಕೈಗಾರಿಕಾ ಬೆಳವಣಿಗೆ ಯೋಜನೆಗಳಲ್ಲಿ ಶಿವಮೊಗ್ಗಕ್ಕೂ ಆದ್ಯತೆ ನೀಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.
ಶಿವಮೊಗ್ಗ: ನಗರದಲ್ಲಿನ ಹೋಟೆಲ್‌ಗಳು ಮತ್ತು ಜ್ಯೂಸ್ ಸೆಂಟರ್‌ಗಳಲ್ಲಿ ಆಹಾರ ಗುಣಮಟ್ಟ, ಸ್ವಚ್ಛತೆ ಹಾಗೂ ಪರವಾನಗಿ ನಿಯಮಗಳ ಪಾಲನೆ ಪರಿಶೀಲಿಸಲು ಶಿವಮೊಗ್ಗ ಉಪವಿಭಾಗಾಧಿಕಾರಿ ಡಾ. ಮೈತ್ರಿ ನೇತೃತ್ವದಲ್ಲಿ ಮಂಗಳವಾರ ದಿಢೀರ್ ತಪಾಸಣೆ ನಡೆಸಲಾಗಿದೆ. ನಗರದ…
ಶಿವಮೊಗ್ಗ: ಮಂಗಳವಾರದಂದು ಬೆಳಗ್ಗೆ ತಾಳಗುಪ್ಪದಿಂದ ಬೆಂಗಳೂರಿಗೆ ಹೊರಟಿದ್ದ ರೈಲಿನ (ಗಾಡಿ ಸಂಖ್ಯೆ 20652) ಮಾರ್ಗಮಧ್ಯೆ ಅರಸಾಳು ಸಮೀಪ ರೈಲ್ವೆ ಹಳಿಯ ಮೇಲೆ ಆನೆಯೊಂದು ಮರವನ್ನು ಉರುಳಿಸಿದ್ದರಿಂದ ರೈಲು ಸಂಚಾರದಲ್ಲಿ ದಿಢೀರ್ ವ್ಯತ್ಯಯ ಉಂಟಾಗಿತ್ತು.
ಕುವೆಂಪು ವಿಶ್ವವಿದ್ಯಾಲಯದ ಯುಯುಸಿಎಂಎಸ್ ವ್ಯವಸ್ಥೆಯಲ್ಲಿ ಅಧಿಕಾರಿಗಳ ಡಿಜಿಟಲ್ ಸಹಿ ಹಾಗೂ ಒಟಿಪಿ ದುರ್ಬಳಕೆ ಮಾಡಿಕೊಂಡು ಫೇಲ್ ವಿದ್ಯಾರ್ಥಿಯ ಅಂಕಗಳನ್ನು ‘ಪಾಸ್’ ಎಂದು ಬದಲಾಯಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಒಂದು ವಿಷಯದ ಅಂಕ ಬದಲಿಸಲು ₹10 ಸಾವಿರ ಕೇಳಲಾಗಿತ್ತು ಎಂಬ ಆರೋಪವೂ ದೂರಿನಲ್ಲಿ ಉಲ್ಲೇಖವಾಗಿದೆ.
ಹಾರನಹಳ್ಳಿಯಲ್ಲಿ ನಡೆದ ಪ್ರಜಾಸೇವಾ ಆಂದೋಲನ ಸಭೆಯಲ್ಲಿ ಶಾಸಕಿ ಶಾರದಾ ಪೂರ್ಯಾ ನಾಯ್ಕ್, ಸಾರ್ವಜನಿಕರನ್ನು ಅನಗತ್ಯವಾಗಿ ಅಲೆದಾಡಿಸದೆ ತಾಳ್ಮೆಯಿಂದ ಸೇವೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮಳೆ ಕೊರತೆ ಹಿನ್ನೆಲೆ ಕೆರೆಗಳನ್ನು ತ್ವರಿತವಾಗಿ ತುಂಬಿಸಲು ಕ್ರಮ ಕೈಗೊಳ್ಳುವಂತೆ ನೀರಾವರಿ ಇಲಾಖೆಗೆ ಸಲಹೆ ನೀಡಿದರು.
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಔಷಧಿ ಲಭ್ಯತೆ, ಡಯಾಲಿಸಿಸ್, ಕುಡಿಯುವ ನೀರು ಮತ್ತು ಸ್ವಚ್ಛತೆ ಕುರಿತು ರೋಗಿಗಳಿಂದ ನೇರವಾಗಿ ಮಾಹಿತಿ ಪಡೆದರು. ಹೊರಗಿನಿಂದ ಔಷಧಿ ತರಿಸುವ ಪರಿಸ್ಥಿತಿ ಇರಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಅಕ್ರಮ ಗೋ ಸಾಗಾಟ ಪ್ರಕರಣಗಳು ಮರುಕಳಿಸುತ್ತಿರುವ ಬಗ್ಗೆ ಶಾಸಕ ಆರಗ ಜ್ಞಾನೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗೋ ಸಾಗಾಟಗಾರರ ವಿರುದ್ಧ ಬಲವಾದ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ.