ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಶನಿವಾರ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆ ಹಾಗೂ ಮಹಿಳಾ ಪೊಲೀಸ್ ಠಾಣೆಗೆ ಭೇಟಿ ನೀಡಿ, ಮಹಿಳೆಯರಿಗೆ ಲಭ್ಯವಿರುವ ಸೌಲಭ್ಯಗಳು ಮತ್ತು ಸುರಕ್ಷತಾ ಕ್ರಮಗಳ ಕುರಿತು ಪರಿಶೀಲನೆ ನಡೆಸಿದರು.
ಅಧಿಸೂಚಿತ ಅರಣ್ಯ ಪ್ರದೇಶಗಳ ವ್ಯಾಪ್ತಿಯಲ್ಲಿ ಕಂದಾಯ ಇಲಾಖೆಯಿಂದ ಜಮೀನು ಮಂಜೂರು ಪಡೆದುಕೊಂಡಿದ್ದ ರೈತರು ಇದೀಗ ತಮ್ಮ ಭೂಮಿಯ ಹಕ್ಕನ್ನು ಕಳೆದುಕೊಳ್ಳುವ ಆತಂಕ ಎದುರಾಗಿದೆ. ಈ ಜಮೀನುಗಳನ್ನು ಮರಳಿ ಅರಣ್ಯ ಇಲಾಖೆಯ ಸುಪರ್ದಿಗೆ ತಂದು, ಪಹಣಿ (ಆರ್‌ಟಿಸಿ) ಮತ್ತು ಮ್ಯುಟೇಷನ್ ದಾಖಲೆಗಳಲ್ಲಿ ಅರಣ್ಯ ಪ್ರದೇಶವೆಂದು ನಮೂದಿಸಲು ಹೈಕೋರ್ಟ್‌ನಲ್ಲಿ ಕಾನೂನು ಹೋರಾಟ ತೀವ್ರಗೊಂಡಿದೆ.
ಹೊಳೇಹೊನ್ನೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ರೂಪಿಸಿರುವ ರೋಡ್ ನೆಟ್‌ವರ್ಕ್ ಗ್ರಿಡ್ ಪ್ಲಾನ್ ವಿರುದ್ಧ ರೈತ ಸಂಘ ಹಾಗೂ ಹಸಿರು ಸೇನೆ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿದೆ. ಯೋಜನೆಯಿಂದ ಸಣ್ಣ ರೈತರ ಕೃಷಿ ಭೂಮಿಗೆ ಹಾನಿಯಾಗುವ ಆತಂಕ ವ್ಯಕ್ತಪಡಿಸಿ, ಅವೈಜ್ಞಾನಿಕ ಯೋಜನೆಯನ್ನು ಕೈಬಿಡುವಂತೆ ಮನವಿ ಸಲ್ಲಿಸಲಾಗಿದೆ.
ಕಸ್ತೂರಿ ರಂಗನ್ ಸಮಿತಿ ವರದಿಯಿಂದ ಜನವಸತಿ, ಕೃಷಿ ಭೂಮಿ ಮತ್ತು ವನವಾಸಿಗಳ ಪ್ರದೇಶಗಳನ್ನು ಹೊರಗಿಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲು ಶಿವಮೊಗ್ಗ ಜಿಲ್ಲಾ ಮಟ್ಟದ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಜಿಲ್ಲೆಯ 447 ಗ್ರಾಮಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಹಿನ್ನೆಲೆಯಲ್ಲಿ ವೈಜ್ಞಾನಿಕ ಮರುಸರ್ವೆ ನಡೆಸಲು ಸಂಸದ ಬಿ.ವೈ. ರಾಘವೇಂದ್ರ ಆಗ್ರಹಿಸಿದ್ದಾರೆ.
ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ ಕರೆ ನೀಡಿದ್ದ ಅಖಿಲ ಭಾರತ ಬ್ಯಾಂಕ್ ಮುಷ್ಕರಕ್ಕೆ ಶಿವಮೊಗ್ಗದಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಿ.ಹೆಚ್. ರಸ್ತೆಯ ಎಸ್‌ಬಿಐ ಶಾಖೆ ಎದುರು ಜಮಾಯಿಸಿದ 500ಕ್ಕೂ ಹೆಚ್ಚು ಬ್ಯಾಂಕ್ ನೌಕರರು ಗೋಪಿ ಸರ್ಕಲ್‌ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಶಾಲಾ ಶಿಕ್ಷಣ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅವರು ಶುಕ್ರವಾರ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ನೂತನ ಹೃದ್ರೋಗ ವಿಭಾಗ ಹಾಗೂ ಆಯನೂರಿನ ಸರ್ಕಾರಿ ಶಾಲೆಗೆ ಮುನ್ಸೂಚನೆ ನೀಡದೆ ದಿಢೀರ್ ಭೇಟಿ ನೀಡಿ ಸೌಲಭ್ಯಗಳ ಪರಿಶೀಲನೆ ನಡೆಸಿದರು.
ಕಸ್ತೂರಿ ರಂಗನ್ ವರದಿಯನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ನಾಯಕರು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಶಾಸಕ ಹಾಗೂ ಮಾಜಿ ಸಚಿವ ಆರಗ ಜ್ಞಾನೇಂದ್ರ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಹೆಚ್.ಸಿ. ಯೋಗೇಶ್ ಅವರನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿ ನೇಮಕ ಮಾಡಿದೆ. ಕಾಂಗ್ರೆಸ್ ಅಧ್ಯಕ್ಷರ ಅನುಮೋದನೆಯೊಂದಿಗೆ ಈ ನೇಮಕಾತಿ ತಕ್ಷಣದಿಂದಲೇ ಜಾರಿಗೆ ಬರಲಿದೆ.
ಶಿವಮೊಗ್ಗದ ಲಷ್ಕರ್ ಮೊಹಲ್ಲಾ ಪ್ರದೇಶದಲ್ಲಿ ಹರಿತವಾದ ಮಾರಕಾಸ್ತ್ರಗಳನ್ನು ಹಿಡಿದು ಓಡಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ ಕೋಟೆ ಠಾಣೆ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳ ಪತ್ತೆಗೆ ತನಿಖೆ ಮುಂದುವರಿದಿದೆ.
ಗಣೇಶ ಹಬ್ಬದ ಆಚರಣೆ ಮತ್ತು ಮೆರವಣಿಗೆಯ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ಸೆಪ್ಟೆಂಬರ್ 14ರಿಂದ ಅಕ್ಟೋಬರ್ 13ರವರೆಗೆ ಡಿಜೆ ಸಿಸ್ಟಂ, ಕಲರ್ ಪೇಪರ್ ಬ್ಲಾಸ್ಟಿಂಗ್, ಸಿಡಿಮದ್ದು ಸಿಡಿಸುವುದು ಮತ್ತು ಬೈಕ್ ರ‍್ಯಾಲಿಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ.