ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ ಕರೆ ನೀಡಿದ್ದ ಅಖಿಲ ಭಾರತ ಬ್ಯಾಂಕ್ ಮುಷ್ಕರಕ್ಕೆ ಶಿವಮೊಗ್ಗದಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಿ.ಹೆಚ್. ರಸ್ತೆಯ ಎಸ್‌ಬಿಐ ಶಾಖೆ ಎದುರು ಜಮಾಯಿಸಿದ 500ಕ್ಕೂ ಹೆಚ್ಚು ಬ್ಯಾಂಕ್ ನೌಕರರು ಗೋಪಿ ಸರ್ಕಲ್‌ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಶಾಲಾ ಶಿಕ್ಷಣ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅವರು ಶುಕ್ರವಾರ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ನೂತನ ಹೃದ್ರೋಗ ವಿಭಾಗ ಹಾಗೂ ಆಯನೂರಿನ ಸರ್ಕಾರಿ ಶಾಲೆಗೆ ಮುನ್ಸೂಚನೆ ನೀಡದೆ ದಿಢೀರ್ ಭೇಟಿ ನೀಡಿ ಸೌಲಭ್ಯಗಳ ಪರಿಶೀಲನೆ ನಡೆಸಿದರು.
ಕಸ್ತೂರಿ ರಂಗನ್ ವರದಿಯನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ನಾಯಕರು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಶಾಸಕ ಹಾಗೂ ಮಾಜಿ ಸಚಿವ ಆರಗ ಜ್ಞಾನೇಂದ್ರ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಹೆಚ್.ಸಿ. ಯೋಗೇಶ್ ಅವರನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿ ನೇಮಕ ಮಾಡಿದೆ. ಕಾಂಗ್ರೆಸ್ ಅಧ್ಯಕ್ಷರ ಅನುಮೋದನೆಯೊಂದಿಗೆ ಈ ನೇಮಕಾತಿ ತಕ್ಷಣದಿಂದಲೇ ಜಾರಿಗೆ ಬರಲಿದೆ.
ಶಿವಮೊಗ್ಗದ ಲಷ್ಕರ್ ಮೊಹಲ್ಲಾ ಪ್ರದೇಶದಲ್ಲಿ ಹರಿತವಾದ ಮಾರಕಾಸ್ತ್ರಗಳನ್ನು ಹಿಡಿದು ಓಡಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ ಕೋಟೆ ಠಾಣೆ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳ ಪತ್ತೆಗೆ ತನಿಖೆ ಮುಂದುವರಿದಿದೆ.
ಗಣೇಶ ಹಬ್ಬದ ಆಚರಣೆ ಮತ್ತು ಮೆರವಣಿಗೆಯ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ಸೆಪ್ಟೆಂಬರ್ 14ರಿಂದ ಅಕ್ಟೋಬರ್ 13ರವರೆಗೆ ಡಿಜೆ ಸಿಸ್ಟಂ, ಕಲರ್ ಪೇಪರ್ ಬ್ಲಾಸ್ಟಿಂಗ್, ಸಿಡಿಮದ್ದು ಸಿಡಿಸುವುದು ಮತ್ತು ಬೈಕ್ ರ‍್ಯಾಲಿಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ.
ಶಿವಮೊಗ್ಗದ ಆರ್.ಎಂ.ಎಲ್. ನಗರದ ಕಿಣಿ ಲೇಔಟ್‌ನಲ್ಲಿ ಹಿರಿಯ ಪತ್ರಕರ್ತ ಶಿ.ಜು.ಪಾಶಾ ಅವರ ಮನೆಯಲ್ಲಿ ಕಳ್ಳತನ ನಡೆದಿದೆ. ಕುಟುಂಬಸ್ಥರು ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಬೀಗ ಮುರಿದು ಒಳನುಗ್ಗಿದ ಕಳ್ಳರು, ಚಿನ್ನಾಭರಣ, ಬೆಳ್ಳಿ ವಸ್ತುಗಳು ಮತ್ತು ₹1.50 ಲಕ್ಷ ನಗದು ಸೇರಿ ಸುಮಾರು ₹6.57 ಲಕ್ಷ ಮೌಲ್ಯದ ಸ್ವತ್ತುಗಳನ್ನು ದೋಚಿದ್ದಾರೆ.
ಪ್ರತಿ ವರ್ಷದಂತೆ ಈ ಬಾರಿಯೂ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ (ರಿ.) ಹಾಗೂ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶಿವಮೊಗ್ಗ ಶಾಖೆಯ ಸಂಯುಕ್ತಾಶ್ರಯದಲ್ಲಿ 'ದಸರಾ ರಾಜ್ಯ ಮಟ್ಟದ ಕವಿಗೋಷ್ಠಿ'ಯನ್ನು ಆಯೋಜಿಸಲಾಗಿದ್ದು, ನಾಡಿನ ಕವಿಗಳಿಂದ ಕವನಗಳನ್ನು ಆಹ್ವಾನಿಸಲಾಗಿದೆ.
ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡ ಆರೋಪ ಎದುರಿಸುತ್ತಿದ್ದ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರ ಆಪ್ತ ಸಹಾಯಕನಿಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ಒದಗಿಸಿದೆ.