
ಶಾಲಾ ಸಮಯಕ್ಕೆ ಬಾರದ ಬಸ್ : ತೀರ್ಥಹಳ್ಳಿಯಲ್ಲಿ ರಸ್ತೆ ತಡೆದು ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ
ಶಾಲಾ-ಕಾಲೇಜುಗಳಿಗೆ ತೆರಳಲು ಸೂಕ್ತ ಸಮಯಕ್ಕೆ ಬಸ್ ಸೌಕರ್ಯವಿಲ್ಲದೆ ಬೇಸತ್ತ ವಿದ್ಯಾರ್ಥಿಗಳು ತೀರ್ಥಹಳ್ಳಿ ತಾಲೂಕಿನ ಕೊಂಡ್ಲೂರು ಬಳಿ ದಿಢೀರ್ ರಸ್ತೆ ತಡೆದು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ಶಾಲಾ-ಕಾಲೇಜುಗಳಿಗೆ ತೆರಳಲು ಸೂಕ್ತ ಸಮಯಕ್ಕೆ ಬಸ್ ಸೌಕರ್ಯವಿಲ್ಲದೆ ಬೇಸತ್ತ ವಿದ್ಯಾರ್ಥಿಗಳು ತೀರ್ಥಹಳ್ಳಿ ತಾಲೂಕಿನ ಕೊಂಡ್ಲೂರು ಬಳಿ ದಿಢೀರ್ ರಸ್ತೆ ತಡೆದು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ಬೆಟ್ಟಮಕ್ಕಿಯಲ್ಲಿರುವ 110/11 ಕೆವಿ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ ಸೆ.8ರ ಮಂಗಳವಾರ ಬೆಳಿಗ್ಗೆ 9:30 ರಿಂದ ಸಂಜೆ 6:00 ಗಂಟೆಯವರೆಗೆ ತೀರ್ಥಹಳ್ಳಿ ತಾಲೂಕಿನ ಹಲವು ಭಾಗಗಳಲ್ಲಿ ವಿದ್ಯುತ್ ಪೂರೈಕೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಮೆಸ್ಕಾಂ ಇಲಾಖೆ ತಿಳಿಸಿದೆ.

ಮಲೆನಾಡು ಭಾಗದ ಜನರ ಬದುಕು ಹಾಗೂ ಕೃಷಿಗೆ ಕಂಟಕವಾಗಿರುವ ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಜಾರಿಗೊಳಿಸಲು ಬಿಡುವುದಿಲ್ಲ. ಮಲೆನಾಡಿನ ಪ್ರತಿಯೊಂದು ಮನೆಯ ಹಿತರಕ್ಷಣೆಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.

ಕಸ್ತೂರಿ ರಂಗನ್ ವರದಿ ಕರಡು ಅಧಿಸೂಚನೆ ರದ್ದಾಗುವವರೆಗೆ ಹೋರಾಟ ಮುಂದುವರೆಯಲಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ. ತೀರ್ಥಹಳ್ಳಿಯಲ್ಲಿ ಮಾತನಾಡಿದ ಅವರು, ವರದಿ ಜಾರಿಯಾದರೆ ಮಲೆನಾಡಿನ ರೈತರು, ಶರಾವತಿ ಸಂತ್ರಸ್ತರು ಮತ್ತು ಜನಸಾಮಾನ್ಯರ ಬದುಕಿಗೆ ತೊಂದರೆ ಆಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ತೀರ್ಥಹಳ್ಳಿ ತಾಲ್ಲೂಕಿನ ಶ್ರೀ ಚೌಡೇಶ್ವರಿ–ಸಯ್ಯಿದ್ ಸಾದತ್ ದರ್ಗಾದ ಕಾಣಿಕೆ ಹುಂಡಿ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಭಕ್ತರಿಂದ ₹1,01,73,650 ನಗದು ಸಂಗ್ರಹವಾಗಿದೆ. ಚಿನ್ನ ಮತ್ತು ಬೆಳ್ಳಿಯ ಆಭರಣಗಳೂ ಕಾಣಿಕೆಯಾಗಿ ಬಂದಿದ್ದು, ನಗದು ಮೊತ್ತವನ್ನು ನಿಯಮಾನುಸಾರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ.

ತೀರ್ಥಹಳ್ಳಿ ಉಪವಿಭಾಗದ ನೂತನ ಡಿವೈಎಸ್ಪಿಯಾಗಿ ಐಪಿಎಸ್ ಅಧಿಕಾರಿ ಡಾ. ಭಾನುಪ್ರಕಾಶ್ ಅವರು ಅಧಿಕಾರ ಸ್ವೀಕರಿಸಿದರು. ಶಿವಮೊಗ್ಗ ಡಿವೈಎಸ್ಪಿ ಸಂಜೀವ್ ಕುಮಾರ್ ಅವರು ಅಧಿಕಾರ ಹಸ್ತಾಂತರಿಸಿದ್ದು, ಪಿಎಸ್‌ಐ ಸುಷ್ಮಾ ಅವರು ನೂತನ ಡಿವೈಎಸ್ಪಿಯನ್ನು ಬರಮಾಡಿಕೊಂಡರು.

ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್ಪಿ ಹುದ್ದೆಗೆ ಐಪಿಎಸ್ ಅಧಿಕಾರಿ ಭಾನುಪ್ರಕಾಶ್ ಜೆ. ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಅರವಿಂದ ಕಲಗುಜ್ಜಿ ನಿವೃತ್ತಿಯಾದ ಬಳಿಕ ಖಾಲಿಯಾಗಿದ್ದ ಹುದ್ದೆಗೆ ಯುವ ಐಪಿಎಸ್ ಅಧಿಕಾರಿಯನ್ನು ನಿಯೋಜಿಸಲಾಗಿದ್ದು, ಪೊಲೀಸ್ ಆಡಳಿತಕ್ಕೆ ಚುರುಕು ಬರಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಹೊಸನಗರ ತಾಲೂಕಿನ ಸಮಟಗಾರು ಶಾಲೆಯ ಶಿಕ್ಷಕಿ ರತ್ನಕುಮಾರಿ ಅವರು ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿರುವುದು ತೀರ್ಥಹಳ್ಳಿ ಕ್ಷೇತ್ರದ ಗೌರವವನ್ನು ಹೆಚ್ಚಿಸಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಅಭಿನಂದನೆ ಸಲ್ಲಿಸಿದ್ದಾರೆ.

ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀಪ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಿಂದ ಟೈರ್ ಕಳಚಿ ಬಿದ್ದ ಘಟನೆ ನಡೆದಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಭಾರಿ ದುರಂತ ತಪ್ಪಿದೆ. ಉಡುಪಿಯಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಬಸ್‌ನಲ್ಲಿ ಈ ತಾಂತ್ರಿಕ…

ತೀರ್ಥಹಳ್ಳಿ: ಮಲೆನಾಡಿನಲ್ಲಿ ಸುರಿದ ಭಾರಿ ಮಳೆಯ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ಇಂದಿರಾನಗರದಲ್ಲಿ ಸಂಭವಿಸಿದ ಗುಡ್ಡ ಕುಸಿತದ ದುರಂತ ಸ್ಥಳಕ್ಕೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು…