Ripponpete

ಸಿಎಂ ಆಗಿ ಡಿಕೆಶಿ ಪ್ರಮಾಣವಚನ ; ರಿಪ್ಪನ್‌ಪೇಟೆಯಲ್ಲಿ ಸಂಭ್ರಮಾಚರಣೆ

ರಿಪ್ಪನ್‌ಪೇಟೆ ; ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಇಲ್ಲಿನ ವಿನಾಯಕ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

WhatsApp Group Join Now
Telegram Group Join Now
Instagram Group Join Now

ಕಾಂಗ್ರೆಸ್ ಕಾರ್ಯಕರ್ತರು ಅಭಿಮಾನಿಗಳು ಇಲ್ಲಿನ ವಿನಾಯಕ ವೃತ್ತದಲ್ಲಿ ಜಮಾಯಿಸಿ ತಮ್ಮ ನಾಯಕ ಡಿ.ಕೆ.ಶಿವಕುಮಾರ್ ಪರ ಜಯಘೋಷ ಕೂಗಿ ಕುಣಿದು ಕುಪ್ಪಳಿಸಿ ಸಂಭ್ರಮಸಿದರು.

ಕಾಂಗ್ರೆಸ್ ಮುಖಂಡರಾದ ಎಂ.ಬಿ.ಲಕ್ಷ್ಮಣಗೌಡ, ಗಣಪತಿ ಗವಟೂರು, ಹೆಚ್.ವಿ.ಈಶ್ವರಪ್ಪಗೌಡ, ಆಸಿಫ್, ಆರ್.ವಿ.ನಿರೂಪ್ ಕುಮಾರ್, ಪ್ರಮೀಳಾ ಎಲ್.ಗೌಡ, ಸುಮಂಗಳ ಹರೀಶಗೌಡ, ನವೀನ್ ಕುಮಾರ್, ನೇಮಪ್ಪ, ಶ್ರೀಧರ, ಪ್ರಕಾಶ್ ಪಾಲೇಕರ್, ಜಯಪ್ರಕಾಶ ಹಾಲುಗುಡ್ಡೆ, ಕೇಶವ ಆರ್. ಇನ್ನಿತರರು, ಪಕ್ಷದ ಮುಖಂಡರು ಪಾಲ್ಗೊಂಡಿದರು.


ನೂತನ ಸರ್ಕಾರದಲ್ಲಿ ಮಹಿಳೆಯರಿಗೆ ಅವಮಾನ : ಜೆಡಿಎಸ್ ಖಂಡನೆ

ರಿಪ್ಪನ್‌ಪೇಟೆ : ಈ ದಿನ ನಡೆದ ನೂತನ ಸರ್ಕಾರದ ಸಂಪುಟ ವಿಸ್ತರಣೆ ಮಹಿಳಾ ವಿರೋಧಿ ಸಂಪುಟ ಎಂದು ಜೆಡಿಎಸ್ ಮುಖಂಡ ಆರ್.ಎ.ಚಾಬುಸಾಬ್ ಖಂಡಿಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಮಹಿಳಾ ಸದಸ್ಯರನ್ನು ಸಂಪುಟಕ್ಕೆ ಸೇರಿಸಿಕೊಳ್ಳದೆ ಮಹಿಳಾ ಶಾಸಕರಿಗೆ ಅಗೌರವವನ್ನು ಕಾಂಗ್ರೆಸ್ ಪಕ್ಷ ಮಾಡಿದೆ. ಬಹುಮುಖ್ಯವಾಗಿ ಲೋಕಸಭಾ ಸದಸ್ಯೆ ಪ್ರಿಯಾಂಕ ವಾದ್ರರನ್ನು ಸಹ ಸಮಾರಂಭಕ್ಕೆ ಆಹ್ವಾನಿಸದೆ ಮಹಿಳಾ ಕುಲಕ್ಕೆ ಅವಮಾನಿಸಿರುತ್ತಾರೆ.

ಈ ಸಂಪುಟದಲ್ಲಿ ಯಾವುದೇ ಮಹಿಳಾ ಶಾಸಕರಿಗೆ ಮೊದಲ ಆದ್ಯತೆ ನೀಡಬೇಕಾಗಿತ್ತು. ಆದರೆ ಈ ಸಂಪುಟದಲ್ಲಿ ಯಾವುದೇ ಮಹಿಳೆಯರಿಗೆ ಅವಕಾಶ ನೀಡದೆ ಇರುವುದು ಮಹಿಳಾ ವರ್ಗಕ್ಕೆ ಅನ್ಯಾಯ ಮಾಡಿದಂತಾಗಿದೆ. ಇದಕ್ಕೆ ರಾಜ್ಯದ ಎಲ್ಲರ ಪರವಾಗಿ ಕ್ಷಮೆಯಾಚಿಸಬೇಕು ಎಂದು ಆರ್.ಎ.ಚಾಬುಸಾಬ್ ನೂತನ ಸರ್ಕಾರದ ಕ್ರಮವನ್ನು ಖಂಡಿಸಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]