Hosanagara

ಕಸ್ತೂರಿ ರಂಗನ್ ವರದಿ ಜಾರಿ ವಿಷಯದಲ್ಲಿ ಕೇಂದ್ರ ಸರ್ಕಾರದ ಪಾತ್ರವಿಲ್ಲ : ಆರಗ ಜ್ಞಾನೇಂದ್ರ

InShot 20260828 194516158

ಹೊಸನಗರ : ಸುಮಾರು 13 ವರ್ಷಗಳಲ್ಲಿ ಕಸ್ತೂರಿ ರಂಗನ್ ವರದಿಯನ್ನು ಜಾರಿ ಮಾಡಬೇಕು ಎಂದು ಪರಿಸರವಾದಿಗಳು ಸುಪ್ರೀಂಕೋರ್ಟ್ ಮೇಟ್ಟಿಲೇರಿದ್ದು ಸತತ 6 ಬಾರಿ ಇದರ ಬಗ್ಗೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್ ನೋಟಿಸ್ ನೀಡಿದ್ದು ಸುಪ್ರೀಂಕೋರ್ಟ್ ಆದೇಶದ ಅನ್ವಯ 7ನೇ ಬಾರಿಗೆ ಪುನಃ ನೋಟಿಸ್ ನೀಡಿದೆ ಯಾವುದೇ ಕಾರಣಕ್ಕೂ ಕಸ್ತೂರಿ ರಂಗನ್ ವರದಿ ಜಾರಿಗೆ ಕೇಂದ್ರ ಸರ್ಕಾರದ ಒಪ್ಪಿಗೆಯಿಲ್ಲ ಎಂದು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಇಲ್ಲಿನ ಗಾಯತ್ರಿ ಮಂದಿರದಲ್ಲಿ ಪತ್ರಿಕಾಘೋಷ್ಠಿ ನಡೆಸಿ ಮಾತನಾಡಿದ ಅವರು, ಈಗಾಗಲೇ ಕೇಂದ್ರ ಸರ್ಕಾರ ಸುಪ್ರೀಂಕೋಟ್ ಆದೇಶದನ್ವಯ 7ನೇ ಬಾರಿಗೆ ನೋಟಿಸ್ ಜಾರಿ ಮಾಡಿದೆ ಸುಪ್ರೀಂಕೋರ್ಟ್‌ಗೆ ಎಲ್ಲರೂ ತಲೆ ಬಾಗಲೇ ಬೇಕಾಗಿರುವುದರಿಂದ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ನ್ಯಾಯಾವಾದಿಯನ್ನು ನೇಮಿಸಿ ನಮಗೆ ಕಸ್ತೂರಿ ರಂಗನ್ ವರದಿಯಿಂದ ಆಗುವ ತೊಂದರೆಗಳನ್ನು ವಾದಿಸಬೇಕು‌. ಅದನ್ನು ಕೋರ್ಟ್‌ಗೆ ಮನವರಿಕೆಯಾಗುವಂತಿರಬೇಕು‌. ಆಗ ಮಾತ್ರ ನಮ್ಮ ಸುತ್ತ-ಮುತ್ತಲಿನ ಪ್ರದೇಶಗಳನು ಉಳಿಸಿಕೊಳ್ಳಬಹುದು ಎಂದರು.

ಪ್ರಸ್ತುತ ವರದಿಯಲ್ಲಿ ಸೂಕ್ಷ್ಮ ಎಂದು ಪರಿಗಣಿಸಲ್ಪಟ್ಟ ಪ್ರದೇಶಗಳಲ್ಲಿ ಉಪಗ್ರಹ ಸರ್ವೆ ಬದಲು ಮ್ಯಾನುಯಲ್ ಸರ್ವೆ ಮೂಲಕ ಅಗತ್ಯ ಮಾಹಿತಿ ಸಂಗ್ರಹಿಸಲಿ. ಸಾವಿರಾರು ರೈತರು ಇಲ್ಲಿ ನೆಲೆ ಕಂಡುಕೊಂಡಿದ್ದಾರೆ. ಬದುಕು ಕಟ್ಟಿಕೊಂಡಿದ್ದಾರೆ. ವೈಜ್ಞಾನಿಕ ಅಧ್ಯಯನ ನಡೆಸದೇ ಏಕಾಏಕಿ ವರದಿ ಜಾರಿಗೊಳಿಸಿದಲ್ಲಿ ಇಲ್ಲಿ ವಾಸ ಮಾಡುತ್ತಿರುವ ನಾಗರಿಕರ ಬದುಕು ಡೋಲಾಯಮಾನ ಸ್ಥಿತಿಗೆ ತಲುಪುವುದರಲ್ಲಿ ಅನುಮಾನ ಬೇಡ. ದೆಹಲಿಯಲ್ಲಿ ಕುಳಿತುಕೊಂಡು ಕಸ್ತೂರಿ ರಂಗನ್ ವರದಿಯನ್ನು ತಯಾರಿಸುವ ಬದಲು ರೈತರ, ಜನಗಳ ಸಮೀಪ ಬಂದು ವರದಿ ರಚಿಸುವಂತೆ ಮನವರಿಕೆ ಮಾಡಬೇಕಾಗಿದೆ ಎಂದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ

ಕಸ್ತೂರಿ ರಂಗನ್ ವರದಿಯಲ್ಲಿ ಹೊಸನಗರ 119, ತೀರ್ಥಹಳ್ಳಿಯ 157 ಹಾಗೂ ಸಾಗರ ತಾಲೂಕಿನ 115 ಗ್ರಾಮಗಳಿಗೆ ತೊಂದರೆಯಾಗುತ್ತದೆ. ಯಾವುದೇ ಕಾರಣಕ್ಕೂ ಕಸ್ತೂರಿರಂಗನ್ ಈಗಿರುವ ವರದಿ ಜಾರಿಯಾಗಲು ಬಿಡುವುದಿಲ್ಲ. ಸೂಕ್ತವಾದ ಪ್ರದೇಶವನ್ನು ಜಾರಿಗೊಳಿಸುವುದರಲ್ಲಿ ನಮ್ಮದೇನು ಅಭ್ಯಂತರವಿಲ್ಲ ಎಂದರು.

ಪ್ರಾದಯಾತ್ರೆಗೆ ನಮ್ಮ ಬೆಂಬಲ : ಹರತಾಳು ಹಾಲಪ್ಪ

ಆಗಸ್ಟ್ 29ರಂದು ಕಾರಣಗಿರಿಯಿಂದ ಹೊಸನಗರದ ಪಟ್ಟಣದವರೆಗೆ ಸಹಕಾರಿ ಧುರೀಣರು ಪಾದಯಾತ್ರೆ ಕೈಗೊಂಡಿದ್ದಾರೆ. ಈ ಹೋರಾಟಕ್ಕೆ ನಮ್ಮ ಬಿಜೆಪಿ ಪಕ್ಷ ಸಂಪೂರ್ಣ ಬೆಂಬಲ ಸೂಚಿಸಲಾಗಿದ್ದು ನಾನು ಮತ್ತು ತೀರ್ಥಹಳ್ಳಿಯ ಶಾಸಕರು ಪಾದಾಯಾತ್ರೆಯಲ್ಲಿ ಭಾಗವಹಿಸಲಿದ್ದೇವೆ ಎಂದು ಸಾಗರ-ಹೊಸನಗ ಕ್ಷೇತ್ರದ ಮಾಜೀ ಶಾಸಕ ಹರತಾಳು ಹಾಲಪ್ಪ ಹೇಳಿದರು.

ಈ ಪತ್ರಿಕಾಘೋಷ್ಠಿಯಲ್ಲಿ ಮಂಡಲದ ಅಧ್ಯಕ್ಷ ಸತೀಶ್, ಎನ್.ಆರ್ ದೇವಾನಂದ್, ಉಮೇಶ್ ಕಂಚುಗಾರ್, ಎ.ವಿ. ಮಲ್ಲಿಕಾರ್ಜುನ್, ಯುವರಾಜ್, ಶ್ರೀಪತಿರಾವ್, ಮಂಡಾನಿ ಮೋಹನ್, ಶಿವಾನಂದ್, ಚಾಲುಕ್ಯ ಬಸವರಾಜ್, ಇನ್ನೂ ಮುಂತಾದವರು ಉಪಸ್ಥಿತರಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>