ಶಿವಮೊಗ್ಗ

ಸಚಿವ ರಾಯರೆಡ್ಡಿ ಹೇಳಿಕೆಗೆ ಶಾಸಕ ಚನ್ನಬಸಪ್ಪ ತಿರುಗೇಟು: ಮೆಕ್ಕಾಗೆ ಹೋಗುವ ಆಸೆಯಿದ್ದರೆ ಹೋಗಿ ಬರಲಿ

ಅವಕಾಶ ಸಿಕ್ಕರೆ ಮೆಕ್ಕಾಗೆ ಹೋಗುವುದಾಗಿ ಸಚಿವ ಬಸವರಾಜ ರಾಯರೆಡ್ಡಿ ನೀಡಿದ ಹೇಳಿಕೆಗೆ ಶಿವಮೊಗ್ಗ ಶಾಸಕ ಎಸ್.ಎನ್. ಚನ್ನಬಸಪ್ಪ ತಿರುಗೇಟು ನೀಡಿದ್ದಾರೆ. ಮೆಕ್ಕಾಗೆ ಹೋಗುವ ಆಸೆಯಿದ್ದರೆ ಹೋಗಿ ಬರಲಿ, ಆದರೆ ಬಹಿರಂಗ ಓಲೈಕೆ ರಾಜಕಾರಣ ಬೇಡ ಎಂದು ಅವರು ಹೇಳಿದ್ದಾರೆ.

ಸಚಿವ ರಾಯರೆಡ್ಡಿ ಹೇಳಿಕೆಗೆ ಶಾಸಕ ಚನ್ನಬಸಪ್ಪ ತಿರುಗೇಟು: ಮೆಕ್ಕಾಗೆ ಹೋಗುವ ಆಸೆಯಿದ್ದರೆ ಹೋಗಿ ಬರಲಿ – channi mla
ಚಿತ್ರ: Mahesh hindlemane

ಶಿವಮೊಗ್ಗ: ಅವಕಾಶ ಸಿಕ್ಕರೆ ಮೆಕ್ಕಾಗೆ ಹೋಗುವುದಾಗಿ ಸಚಿವ ಬಸವರಾಜ ರಾಯರೆಡ್ಡಿ ನೀಡಿರುವ ಹೇಳಿಕೆಗೆ ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಸಚಿವ ಬಸವರಾಜ ರಾಯರೆಡ್ಡಿ ಅವರ ಹೇಳಿಕೆ ಅಚ್ಚರಿ ಮೂಡಿಸುವುದಿಲ್ಲ. ಇದು ಓಲೈಕೆ ರಾಜಕಾರಣದ ಮುಂದುವರಿದ ಭಾಗ ಎಂದು ಟೀಕಿಸಿದರು.

“ಅವರಿಗೆ ಮೆಕ್ಕಾಗೆ ಹೋಗುವ ಆಸೆಯಿದ್ದರೆ ಹೋಗಿ ಬರಲಿ. ಅದನ್ನು ಬಹಿರಂಗವಾಗಿ ಹೇಳುವ ಅಗತ್ಯವಿಲ್ಲ. ಅದೇ ರೀತಿ ಹಿಂದೂ ಧರ್ಮದ ವಿಚಾರದಲ್ಲೂ ಅನಗತ್ಯವಾಗಿ ಮಾತನಾಡುವ ಅವಶ್ಯಕತೆ ಇಲ್ಲ” ಎಂದು ಚನ್ನಬಸಪ್ಪ ಹೇಳಿದರು.

ಮೆಕ್ಕಾ ಬಗ್ಗೆ ಮಾತನಾಡುವ ರಾಯರೆಡ್ಡಿ ಅವರು ಅಯೋಧ್ಯೆ, ಮಥುರಾ ಮತ್ತು ಕಾಶಿ ಮುಂತಾದ ಧಾರ್ಮಿಕ ಕ್ಷೇತ್ರಗಳ ಬಗ್ಗೆಯೂ ಮಾತನಾಡಲಿ. ಒಂದು ಧರ್ಮದ ಹೆಸರಿನಲ್ಲಿ ರಾಜಕೀಯ ಓಲೈಕೆ ಮಾಡುವುದು ಸರಿಯಲ್ಲ ಎಂದು ಅವರು ಅಭಿಪ್ರಾಯಪಟ್ಟರು.

ತಾವು ಯಾವುದೇ ಸಮುದಾಯದ ವಿರೋಧಿಯಲ್ಲ ಎಂದು ಸ್ಪಷ್ಟಪಡಿಸಿದ ಚನ್ನಬಸಪ್ಪ, “ನನಗೂ ಮುಸ್ಲಿಂ ಸಮುದಾಯದಲ್ಲಿ ಆತ್ಮೀಯ ಸ್ನೇಹಿತರಿದ್ದಾರೆ. ಆದರೆ ಸಚಿವ ಸ್ಥಾನದಲ್ಲಿರುವವರು ಒಂದು ಧರ್ಮವನ್ನು ಓಲೈಸುವ ರೀತಿಯಲ್ಲಿ ಮಾತನಾಡುವುದು ಸರಿಯಲ್ಲ. ಈ ರೀತಿಯ ಹೇಳಿಕೆ ಯಾವ ಪಕ್ಷದವರಿಂದ ಬಂದರೂ ಅದು ತಪ್ಪೇ” ಎಂದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಈ ಹಿಂದೆ ಭದ್ರಾವತಿ ಶಾಸಕ ಸಂಗಮೇಶ್ ಕೂಡ ಇದೇ ರೀತಿಯ ಹೇಳಿಕೆ ನೀಡಿದ್ದರು. ಈಗ ಸಚಿವ ಬಸವರಾಜ ರಾಯರೆಡ್ಡಿ ಕೂಡ ಅದೇ ಹಾದಿಯಲ್ಲಿ ಮಾತನಾಡುತ್ತಿದ್ದಾರೆ ಎಂದು ಚನ್ನಬಸಪ್ಪ ಟೀಕಿಸಿದರು.

ಧಾರ್ಮಿಕ ವಿಚಾರಗಳನ್ನು ರಾಜಕೀಯ ಹೇಳಿಕೆಗಳಾಗಿ ಬಳಸುವುದರಿಂದ ಸಮಾಜದಲ್ಲಿ ಅನಗತ್ಯ ಚರ್ಚೆ ಮತ್ತು ಗೊಂದಲ ಉಂಟಾಗುತ್ತದೆ. ಸಾರ್ವಜನಿಕ ಜೀವನದಲ್ಲಿರುವವರು ಜವಾಬ್ದಾರಿಯುತವಾಗಿ ಮಾತನಾಡಬೇಕು ಎಂದು ಅವರು ಹೇಳಿದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650