CHIKKAMAGALURU | ಸರ್ಕಾರಿ ಬಸ್ (KSRTC BUS) ಹತ್ತುವ ವೇಳೆ ಬಾಗಿಲಿನ ಲಾಕ್ ತುಂಡಾದ ಪರಿಣಾಮ ಬಸ್‌ನಿಂದ ಕೆಳಗೆ ಬಿದ್ದು ಮಹಿಳೆ (Women) ಗಂಭೀರ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಐದಳ್ಳಿ ಗ್ರಾಮದ ಬಳಿ ಮಂಗಳವಾರ ನಡೆದಿದೆ.
ಐದಳ್ಳಿ ಗ್ರಾಮದ ಶಕುಂತಲಮ್ಮ ಎಂಬ ಮಹಿಳೆಗೆ ಗಂಭೀರ ಗಾಯಯವಾಗಿದ್ದು ಅವರನ್ನು ಆಲ್ದೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಬಸ್ ಚಿಕ್ಕಮಗಳೂರಿನಿಂದ ಶೃಂಗೇರಿಗೆ ತೆರಳುತ್ತಿದ್ದು ಶಕುಂತಳಮ್ಮ ಬಾಳೆಹೊನ್ನೂರಿಗೆ ತೆರಳಲು ಬಸ್ ಹತ್ತುವಾಗ ಬಸ್‌ನ ಬಾಗಿಲಿನ ಲಾಕ್ ತುಂಡಾಗಿದೆ ಪರಿಣಾಮ ಬಾಗಿಲು ಹಿಡಿದ್ದಿದ್ದ ಮಹಿಳೆ ಏಕಾಏಕಿ ಬಸ್‌ನಿಂದ ಹೊರಗೆ ಬಿದ್ದು ಗಾಯಗೊಂಡಿದ್ದಾರೆ.
ಬಸ್ ಸರಿಯಾದ ನಿರ್ವಹಣೆ ಇಲ್ಲದೆ ಈ ರೀತಿ ಆಗಿದೆ ಎಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದು ಘಟನೆ ಸಂಬಂಧ ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
REad More
Malenadu Rain | ಕಳೆದ 24 ಗಂಟೆಗಳಲ್ಲಿ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ದಾಖಲಾದ ಮಳೆ ವಿವರ
HOSANAGARA RAIN | ಕಳೆದ 24 ಗಂಟೆಗಳಲ್ಲಿ ಹುಲಿಕಲ್ಲಿನಲ್ಲಿ ರಾಜ್ಯದಲ್ಲೇ ಅತ್ಯಧಿಕ ಮಳೆ !
ಹೊಸನಗರ ತಾಲೂಕಿನ ಎಲ್ಲ ಶಾಲೆಯ ಮುಖ್ಯ ಶಿಕ್ಷಕರಿಗೆ ಬಿಇಒ ಸೂಚನೆ ನೀಡಿದ್ದಾರೆ ಏನದು ?

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.