ಒಂಟಿ ಮಹಿಳೆಯರೆ ಈ ಕಾಮುಕನ ಟಾರ್ಗೆಟ್, ಗ್ರಾಮಸ್ಥರಿಂದ ಬಿತ್ತು ಹಿಗ್ಗಾಮುಗ್ಗಾ ಗೂಸಾ !

Written by Mahesha Hindlemane

Published on:

CHIKKAMAGALURU | ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಪೀಡಿಸುತ್ತಿದ್ದ ಭೂಪನಿಗೆ ಗ್ರಾಮಸ್ಥರು ಹಿಗ್ಗಾಮುಗ್ಗಾ ಗೂಸಾ ನೀಡಿ ಪೊಲೀಸರಿಗೊಪ್ಪಿಸಿದ ಘಟನೆ ತಾಲೂಕಿನ ವಸ್ತಾರೆ ಗ್ರಾಮದಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

SHIVAMOGGA RAIN |  ಇಂದು ಬೆಳಗ್ಗೆಯಿಂದ ರಾತ್ರಿವರೆಗೆ ಸೊನಲೆಯಲ್ಲಿ ದಾಖಲಾಯ್ತು ರಾಜ್ಯದಲ್ಲೇ ಅತಿ ಹೆಚ್ಚು ಮಳೆ ! ಮತ್ತೆಲ್ಲೆಲ್ಲಿ ಎಷ್ಟಾಗಿದೆ ಮಳೆ ?

📢 Stay Updated! Join our WhatsApp Channel Now →

ಮಾವಿನಹಳ್ಳಿ ಮಂಜು ಗ್ರಾಮಸ್ಥರಿಂದ ಧರ್ಮದೇಟು ತಿಂದ ಯುವಕ. ಈತ ಗ್ರಾಮದ ಮಹಿಳೆಯರು ಒಂಟಿಯಾಗಿ ಎಲ್ಲಿಗಾದರೂ ಹೋಗುವಾಗ ಅವರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ. ಬೆಳಗ್ಗೆ ವಾಕಿಂಗ್ ಹೋಗುವ ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡುತ್ತಾ ತೋಟಕ್ಕೆ ಹೋಗುವ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಎನ್ನಲಾಗಿದೆ.

ಅಂಗನವಾಡಿ ಕಾರ್ಯಕರ್ತೆ ಜೊತೆ ದುರ್ವರ್ಥನೆ ತೋರಿ ತೋಟದಲ್ಲಿ ಅವಿತು ಕುಳಿತ್ತಿದ್ದ ಕಾಮುಕ ವ್ಯಕ್ತಿಯನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ.

ಬೆಳಗ್ಗೆ ವಾಕಿಂಗ್ ಬರುವ ಮಹಿಳೆಯರಿಗೆ ಕೀಟಲೆ ಮಾಡುತ್ತಿದ್ದ. ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಹಿಂಸೆ ಕೊಡುತ್ತಿದ್ದ ಈ ಭೂಪನಿಗೆ ಗ್ರಾಮಸ್ಥರು ಧರ್ಮದೇಟು ನೀಡಿದ್ದಾರೆ.

ಕಾಫಿತೋಟದಲ್ಲಿ ಅವಿತು ಕುಳಿತ್ತಿದ್ದ ಈತನನ್ನ ಕರೆತಂದು ರಸ್ತೆ ಮಧ್ಯೆಯೇ ಹಿಗ್ಗಾಮುಗ್ಗಾ ಬಾರಿಸಿ ಆಲ್ದೂರು ಪೊಲೀಸರಿಗೆ ಒಪ್ಪಿಸಿ ದೂರು ನೀಡಿದ್ದಾರೆ. ಘಟನೆ ಸಂಬಂಧ ಆಲ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Malenadu Rain | ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಯಾವೆಲ್ಲ ಪ್ರದೇಶದಲ್ಲಿ ಎಷ್ಟು ಮಳೆಯಾಗಿದೆ ?

Leave a Comment