CHIKKAMAGALURU | ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಪೀಡಿಸುತ್ತಿದ್ದ ಭೂಪನಿಗೆ ಗ್ರಾಮಸ್ಥರು ಹಿಗ್ಗಾಮುಗ್ಗಾ ಗೂಸಾ ನೀಡಿ ಪೊಲೀಸರಿಗೊಪ್ಪಿಸಿದ ಘಟನೆ ತಾಲೂಕಿನ ವಸ್ತಾರೆ ಗ್ರಾಮದಲ್ಲಿ ನಡೆದಿದೆ.
SHIVAMOGGA RAIN | ಇಂದು ಬೆಳಗ್ಗೆಯಿಂದ ರಾತ್ರಿವರೆಗೆ ಸೊನಲೆಯಲ್ಲಿ ದಾಖಲಾಯ್ತು ರಾಜ್ಯದಲ್ಲೇ ಅತಿ ಹೆಚ್ಚು ಮಳೆ ! ಮತ್ತೆಲ್ಲೆಲ್ಲಿ ಎಷ್ಟಾಗಿದೆ ಮಳೆ ?
ಮಾವಿನಹಳ್ಳಿ ಮಂಜು ಗ್ರಾಮಸ್ಥರಿಂದ ಧರ್ಮದೇಟು ತಿಂದ ಯುವಕ. ಈತ ಗ್ರಾಮದ ಮಹಿಳೆಯರು ಒಂಟಿಯಾಗಿ ಎಲ್ಲಿಗಾದರೂ ಹೋಗುವಾಗ ಅವರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ. ಬೆಳಗ್ಗೆ ವಾಕಿಂಗ್ ಹೋಗುವ ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡುತ್ತಾ ತೋಟಕ್ಕೆ ಹೋಗುವ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಎನ್ನಲಾಗಿದೆ.
ಅಂಗನವಾಡಿ ಕಾರ್ಯಕರ್ತೆ ಜೊತೆ ದುರ್ವರ್ಥನೆ ತೋರಿ ತೋಟದಲ್ಲಿ ಅವಿತು ಕುಳಿತ್ತಿದ್ದ ಕಾಮುಕ ವ್ಯಕ್ತಿಯನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ.

ಬೆಳಗ್ಗೆ ವಾಕಿಂಗ್ ಬರುವ ಮಹಿಳೆಯರಿಗೆ ಕೀಟಲೆ ಮಾಡುತ್ತಿದ್ದ. ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಹಿಂಸೆ ಕೊಡುತ್ತಿದ್ದ ಈ ಭೂಪನಿಗೆ ಗ್ರಾಮಸ್ಥರು ಧರ್ಮದೇಟು ನೀಡಿದ್ದಾರೆ.
ಕಾಫಿತೋಟದಲ್ಲಿ ಅವಿತು ಕುಳಿತ್ತಿದ್ದ ಈತನನ್ನ ಕರೆತಂದು ರಸ್ತೆ ಮಧ್ಯೆಯೇ ಹಿಗ್ಗಾಮುಗ್ಗಾ ಬಾರಿಸಿ ಆಲ್ದೂರು ಪೊಲೀಸರಿಗೆ ಒಪ್ಪಿಸಿ ದೂರು ನೀಡಿದ್ದಾರೆ. ಘಟನೆ ಸಂಬಂಧ ಆಲ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Malenadu Rain | ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಯಾವೆಲ್ಲ ಪ್ರದೇಶದಲ್ಲಿ ಎಷ್ಟು ಮಳೆಯಾಗಿದೆ ?

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.