ಆಪರೇಷನ್ ಕಮಲ ಸಕ್ಸಸ್ ಆಗಲ್ಲ ; ಸಿದ್ದರಾಮಯ್ಯ

0 48

ಮೂಡಿಗೆರೆ: ನಮ್ಮ ಸರ್ಕಾರ ಗಟ್ಟಿಯಾಗಿದೆ. ನಮ್ಮ ಶಾಸಕರನ್ನು ಸೆಳೆಯುವ ಬಿಜೆಪಿಯವರ ಪ್ರಯತ್ನ ಫಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.


ಮೂಡಿಗೆರೆಯಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್‌ ಶಾಸಕರನ್ನು ಬಿಜೆಪಿ ಬೆದರಿಸುತ್ತಿದೆ ಎಂದು ಗುಪ್ತಚರ ಇಲಾಖೆ ಮಾಹಿತಿ ಇದೆಯೇ ಎಂಬ ಪ್ರಶ್ನೆಗೆ ಆ ಇಲಾಖೆ ನನ್ನ ಕೈಕೆಳಗೆ ಕೆಲಸ ನಿರ್ವಹಿಸುತ್ತಿದೆ. ಈ ವಿಚಾರ ಮೊದಲು ನನಗೆ ತಿಳಿಯಬೇಕಲ್ಲವೇ ಇದೆಲ್ಲ ಸುಳ್ಳು ಎಂದು ಅಲ್ಲಗಳೆದರು.

ಮೂಡಿಗೆರೆ ತಾಲೂಕಿನಲ್ಲಿ ಕಾಡಾನೆ ತುಳಿತದಿಂದ ಮಹಿಳೆಯೊಬ್ಬರು ಮೃತಪಟ್ಟಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಕಾಡಾನೆಗಳನ್ನು ಕಾಡಿಗೆ ಅಟ್ಟುವ ಕೆಲಸ ಮಾಡಲಾಗುವುದು. ಅರಣ್ಯ ಇಲಾಖೆ ಸಚಿವ ಈಶ್ವರ್‌ ಖಂಡ್ರೆ ಅವರು ಚಿಕ್ಕಮಗಳೂರು ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ ಎಂದು ತಿಳಿಸಿದರು.

Leave A Reply

Your email address will not be published.

error: Content is protected !!