ಚಿಕ್ಕಮಗಳೂರು ; ನಾಳೆಯಿಂದ 6 ದಿನ ಜಿಲ್ಲಾದ್ಯಂತ 144 ಸೆಕ್ಷನ್ ಜಾರಿ ; ಯಾಕೆ ?

0 280

ಚಿಕ್ಕಮಗಳೂರು : ಕಳೆದ ಅಕ್ಟೋಬರ್ 13ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ಹಿನ್ನೆಲೆಯಲ್ಲಿ ಇಡೀ ಜಿಲ್ಲಾದ್ಯಂತ 144 ಸೆಕ್ಷನ್ ಜಾರಿ ಮಾಡಲಾಗಿತ್ತು. ಇದೀಗ ಚಿಕ್ಕಮಗಳೂರಿನಲ್ಲೂ ಕೂಡ ಮಹಿಷ ದಸರಾ ಆಚರಣೆ ಹಿನ್ನೆಲೆಯಲ್ಲಿ ನಾಳೆಯಿಂದ 6 ದಿನ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಹಿಷ ದಸರ ಆಚರಣೆ ವಿಚಾರವಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಯಾವುದೇ ರೀತಿಯಾದ ಅಹಿತಕರ ಘಟನೆ ನಡೆಯಬಾರದೆಂದು 144 ಸೆಕ್ಷನ್ ಜಾರಿ ಮಾಡಲಾಗಿದೆ.

ನಾಳೆ ಚಿಕ್ಕಮಗಳೂರಿನಲ್ಲಿ ದಲಿತ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಮಹಿಷ ದಸರಾ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಈ ಸಂಘಟನೆಗಳಿಂದ ಮಹಿಷ ದಸರಾ ಆಯೋಜನೆ ಮಾಡಿತ್ತು. ಮುಖ್ಯ ಅತಿಥಿಯಾಗಿ ಆ ಕಾರ್ಯಕ್ರಮಕ್ಕೆ ಪ್ರೊ. ಕೆಎಸ್ ಭಗವಾನ್ ಆಗಮಿಸಲಿದ್ದರು. ಆದರೆ ಒಕ್ಕಲಿಗ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ಹಿನ್ನೆಲೆಯಲ್ಲಿ ಪ್ರೊ. ಕೆ.ಎಸ್ ಭಗವಾನ್ ಆಗಮನಕ್ಕೆ ಜಿಲ್ಲಾದ್ಯಂತ ಭಾರಿ ವಿರೋಧ ವ್ಯಕ್ತವಾಗುತ್ತಿದೆ.

ಮುಂಜಾಗ್ರತಾ ಅಕ್ರಮವಾಗಿ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜರಿಂದ ಆದೇಶ ಹೊರಡಿಸಿದ್ದಾರೆ.

Leave A Reply

Your email address will not be published.

error: Content is protected !!