ಬಂಧಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಯತ್ನ ; ರೌಡಿಶೀಟರ್ ಕಾಲಿಗೆ ಪೊಲೀಸರಿಂದ ಫೈರಿಂಗ್

0 463

ಎನ್.ಆರ್.ಪುರ: ರೌಡಿಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ತಾಲೂಕಿನಲ್ಲಿ ನಡೆದಿದೆ.

ರೌಡಿಶೀಟರ್ ಪೂರ್ಣೇಶ್ ಎಂಬವರ ಮೇಲೆ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರು ಪೊಲೀಸರಿಂದ ಫೈರಿಂಗ್ ನಡೆದಿದೆ ಎನ್ನಲಾಗಿದೆ.

ವಾರಂಟ್ ಜಾರಿಯಾಗಿದ್ದರೂ ಕೋರ್ಟ್‌ಗೆ ಹೋಗದ ಪೂರ್ಣೇಶ್ ನನ್ನು ಬಂಧಿಸಲು ಹೋದಾಗ ಆತ ಪೊಲೀಸರ ಮೇಲೆಯೇ ಚಾಕುವಿಂದ ಹಲ್ಲೆಗೈದಾಗ ಪೊಲೀಸರು ಫೈರಿಂಗ್ ನಡೆಸಿದ್ದಾರೆ.

ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸಿದರೂ ಮಾತು ಕೇಳದ ಪೂರ್ಣೇಶ್ ಕಾಲಿಗೆ ಫೈರಿಂಗ್ ಮಾಡಿದ ಪಿ.ಎಸ್.ಐ.‌ ದಿಲೀಪ್ ಕುಮಾರ್.

ರೌಡಿಯಿಂದ ಹಲ್ಲೆಗೊಳಗಾದ ಪೇದೆ ಮಂಜುನಾಥ್ ಬಾಳೆಹೊನ್ನೂರು ಆಸ್ಪತ್ರೆಗೆ ದಾಖಲಾಗಿದ್ದು, ಆರೋಪಿ ಪೂರ್ಣೇಶ್ ನನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Leave A Reply

Your email address will not be published.

error: Content is protected !!