ಮಾಜಿ ಸಚಿವ ಡಿ.ಬಿ.ಚಂದ್ರೇಗೌಡರ ಅಗಲಿಕೆಗೆ ಶ್ರೀ ರಂಭಾಪುರಿ ಜಗದ್ಗುರುಗಳ ಸಂತಾಪ

0 5,389

ಎನ್.ಆರ್.ಪುರ: ಸರಳ ಸಜ್ಜನಿಕೆಯ ವ್ಯಕ್ತಿತ್ವದ ಹಿರಿಯ ರಾಜಕಾರಣಿ ಡಿ.ಬಿ.ಚಂದ್ರೇಗೌಡರ ಅಗಲಿಕೆಗೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ತಮ್ಮ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.


ಶಾಸಕರಾಗಿ, ವಿಧಾನ ಪರಿಷತ್ ಸದಸ್ಯರಾಗಿ, ಸಂಸದರಾಗಿ, ರಾಜ್ಯ ಸಭಾಸದಸ್ಯರಾಗಿ ಸಚಿವರಾಗಿ ಸೇವೆ ಸಲ್ಲಿಸಿದ ಡಿ.ಬಿ.ಚಂದ್ರೇಗೌಡರು ಸದಾ ಸಮಾಜದ ಹಿತ ಚಿಂತನೆ ಮಾಡುವವರಾಗಿದ್ದರು. ಶ್ರೀ ಜಗದ್ಗುರು ರಂಭಾಪುರಿ ಮಹಾಪೀಠದೊಂದಿಗೆ ಅತ್ಯಂತ ಆತ್ಮೀಯ ಸಂಬಂಧ ಹೊಂದಿದ ಅವರು ಶ್ರೀ ಪೀಠದ ಮೂವರು ಜಗದ್ಗುರುಗಳವರೊಡನೆ ನಿಕಟ ಸಂಪರ್ಕ ಹೊಂದಿದವರಾಗಿದ್ದರು. ಪ್ರಸ್ತುತ ಜಗದ್ಗುರುಗಳ ಹಲವಾರು ಸಮಾರಂಭಗಳಲ್ಲಿ ಪಾಲ್ಗೊಂಡಿದ್ದ ಅವರ ಅಗಲಿಕೆ ತಮ್ಮ ಮನಸ್ಸಿಗೆ ನೋವನ್ನುಂಟು ಮಾಡಿದೆ. ಅವರ ಅಗಲಿದ ಪವಿತ್ರ ಆತ್ಮಕ್ಕೆ ದಯಾಘನನಾದ ಪರಮಾತ್ಮನು ಚಿರಶಾಂತಿಯನ್ನು ಅನುಗ್ರಹಿಸಲಿ ಹಾಗೂ ಅವರ ಕುಟುಂಬ ವರ್ಗದವರಿಗೆ ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿ ನೀಡಲಿ ಎಂದು ಶ್ರೀ ರಂಭಾಪುರಿ ಜಗದ್ಗುರುಗಳು ತಮ್ಮ ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ.

Leave A Reply

Your email address will not be published.

error: Content is protected !!