ಶಾಖಾದ್ರಿ ಮನೆಯಲ್ಲಿ ಹುಲಿ, ಚಿರತೆ, ಜಿಂಕೆ ಚರ್ಮ ಪತ್ತೆ ; ಬಂಧನಕ್ಕೆ ಸಿದ್ದತೆ
ಚಿಕ್ಕಮಗಳೂರು : ವಿವಾದಿತ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದ ಶಾಖಾದ್ರಿ ಹಜರತ್ ಸೈಯದ್ ಗೌತ್ ಮೊಹಿದ್ದೀನ್ ಮನೆಯಲ್ಲಿ ಹುಲಿ, ಚಿರತೆ, ಜಿಂಕೆ ಚರ್ಮ ಪತ್ತೆಯಾದ ಹಿನ್ನೆಲೆಯಲ್ಲಿ ಶಾಖಾದ್ರಿ ವಿರುದ್ಧ ಅರಣ್ಯ ಸಂರಕ್ಷಣಾ ಕಾಯ್ದೆ 1972 ರ ಅಡಿ ಪ್ರಕರಣ ದಾಖಲಾಗಿದೆ. ಇದೀಗ ಅರಣ್ಯ ಇಲಾಖೆ ಸಿಬ್ಬಂದಿ ಶಾಖಾದ್ರಿ ಬಂಧನಕ್ಕೆ ಸಿದ್ಧತೆ ನಡೆಸಿದ್ದಾರೆ.

ಶಾಖಾದ್ರಿ ಮನೆಯಲ್ಲಿ ಹುಲಿ ಚರ್ಮ ಇಟ್ಟುಕೊಂಡಿದ್ದಾರೆಂದು ದೂರು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಶುಕ್ರವಾರ ನಗರದ ಮಹಾತ್ಮಾ ಗಾಂಧಿ ರಸ್ತೆಯಲ್ಲಿರುವ ನಿವಾಸದ ಮೇಲೆ ದಾಳಿ ಮಾಡಿದ್ದರು.
ಅರಣ್ಯ ಇಲಾಖೆಯ ಸಿಬ್ಬಂದಿಗಳ ಪರಿಶೀಲನೆ ವೇಳೆ ಚಿರತೆ, ಜಿಂಕೆ ಮತ್ತು ಚರ್ಮ ಪತ್ತೆಯಾಗಿತ್ತು. ಸದ್ಯ ಅರಣ್ಯ ಇಲಾಖೆ ಸಿಬ್ಬಂದಿ ಹುಲಿ ಚರ್ಮದ ಕುರಿತು ತನಿಖೆ ನಡೆಸುತ್ತಿದ್ದಾರೆ. ಇನ್ನು ಶಾಖಾದ್ರಿ ಶುಕ್ರವಾರದಿಂದ ಅಧಿಕಾರಿಗಳ ತನಿಖೆಗೆ ಸಹಕಾರ ನೀಡದೆ ನಾಪತ್ತೆಯಾಗಿದ್ದಾರೆ. ಚಿಕ್ಕಮಗಳೂರು ಉಪ ವಲಯ ಅರಣ್ಯಾಧಿಕಾರಿಗಳ ಕಚೇರಿಯಲ್ಲಿ ಪ್ರಕರಣ ಶಾಖಾದ್ರಿ ವಿರುದ್ಧ ಪ್ರಕರಣ ದಾಖಲಾಗಿದೆ.