ಹುಲಿ ಉಗುರಿನ ಡಾಲರ್ ಧರಿಸಿದ್ದ ಇಬ್ಬರ ಬಂಧನ !
ಮೂಡಿಗೆರೆ: ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದ ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ಈಗ ಜೈಲು ಪಾಲಾಗಿದ್ದಾರೆ. ವನ್ಯಜೀವಿ ಸಂರಕ್ಷಣೆ ಕಾಯ್ದೆಯಡಿ ಬಂಧನವಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಈ ಪ್ರಕರಣ ಬೆನ್ನಲ್ಲೇ ಚಿಕ್ಕಮಗಳೂರಿನಲ್ಲಿಯೂ ಅಂಥದ್ದೇ ಪ್ರಕರಣ ಹೊರಬಿದ್ದಿದೆ. ಮೂಡಿಗೆರೆ ಅರಣ್ಯ ಇಲಾಖೆ ಸಿಬ್ಬಂದಿಯಿಂದ ಹುಲಿ ಉಗುರಿನ ಡಾಲರ್ ಧರಿಸಿದ್ದ ಇಬ್ಬರನ್ನು ಬಂಧಿಸಿದ್ದು, ಮತ್ತಿಬ್ಬರು ಎಸ್ಕೇಪ್ ಆಗಿದ್ದಾರೆ.
ಭಾರತಿಬೈಲು ಬಳಿಯ ಕುಂಡ್ರ ಗ್ರಾಮದ ನಿವಾಸಿಯಾದ ಸತೀಶ್ ಹಾಗೂ ಹಲ್ಲೇಮನೆ ಕುಂದೂರು ನಿವಾಸಿ ಕೆ.ಎಸ್.ರಂಜಿತ್ ಬಂಧಿತ ಆರೋಪಿಗಳು.

ಮೂಡಿಗೆರೆ ತಾಲೂಕಿನ ಕುಂಡ್ರ, ಹಲ್ಲೇಮನೆ ಗ್ರಾಮದಲ್ಲಿ ಹುಲಿ ಉಗುರು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳು ಪರಾರಿ ಆಗಿದ್ದಾರೆ. ಹುಲಿ ಉಗುರಿನ ಒಂದು ಡಾಲರ್ ಅನ್ನು ಅರಣ್ಯ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದಾರೆ.