ಮೂಡಿಗೆರೆ: ಗೃಹಿಣಿಯೋರ್ವಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಮೃತಳ ಪೋಷಕರು ಪತಿ ವಿರುದ್ಧ ಕೊಲೆ (Murder) ಶಂಕೆ ವ್ಯಕ್ತಪಡಿಸಿರುವ ಘಟನೆ ಮೂಡಿಗೆರೆ (Mudigere) ತಾಲೂಕಿನ ದೇವವೃಂದದಲ್ಲಿ ನಡೆದಿದೆ.
ಶ್ವೇತಾ (31) ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಗೃಹಿಣಿ. ಮೂರು ವರ್ಷದ ಹಿಂದೆ ಶ್ವೇತಾ ಮತ್ತು ದರ್ಶನ್ ಎಂಬುವವರನ್ನು ವಿವಾಹವಾಗಿದ್ದರು. ದರ್ಶನ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದು, ಪಾಯಿಸನ್ ಇಂಜೆಕ್ಷನ್ ಚುಚ್ಚಿ ಕೊಲೆ ಮಾಡಿದ್ದಾನೆ ಎಂದು ಶ್ವೇತಾಳ ಪೋಷಕರು ಆರೋಪಿಸಿದ್ದಾರೆ.
ದರ್ಶನ್ ಮನೆಯವರು ತರಾತುರಿಯಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಿದ್ದು, ಮೃತಳ ಪೋಷಕರು ಅಂತ್ಯಕ್ರಿಯೆ ತಡೆದು ಮೃತದೇಹವನ್ನು ಮರಣೊತ್ತರ ಪರೀಕ್ಷೆಗೆ ಆಸ್ಪತ್ರೆಗೆ ಸಾಗಿಸಿದ್ದಾರೆ. ದರ್ಶನ್ ವಿರುದ್ಧ ಅನೈತಿಕ ಸಂಬಂಧದ ಆರೋಪವಿದ್ದು, ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತ್ನಿಗೆ ಇಂಜೆಕ್ಷನ್ ನೀಡಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಶ್ವೇತಾ ಮೃತದೇಹವನ್ನು ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಕುರಿತು ಗೋಣಿಬೀಡು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…