ಇನ್ನೆರಡು ವರ್ಷಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿಸಲು ಕ್ರಮ ; ಸಚಿವ ಮಧು ಬಂಗಾರಪ್ಪ

0 253

ಚಿಕ್ಕಮಗಳೂರು: ವರ್ಷದಿಂದ ವರ್ಷಕ್ಕೆ ಸರ್ಕಾರಿ (Government) ಶಾಲೆಗಳ (Schools) ವಿದ್ಯಾರ್ಥಿಗಳು (Students) ಗಣನೀಯವಾಗಿ ಕಡಿಮೆಯಾಗುತ್ತಿರುವುದಕ್ಕೆ ಸಚಿವ ಮಧು ಬಂಗಾರಪ್ಪ (Madhu Bangarappa) ಶಿಕ್ಷಣ ಇಲಾಖೆ (Education department) ಅಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನೆರಡು ವರ್ಷಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲು ಸೂಚಿಸಲಾಗಿದೆ.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಅವರು ನಡೆಸಿದರು, ಕಳೆದ ವರ್ಷಕ್ಕೆ ಪ್ರಸಕ್ತ ವರ್ಷ 500 ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳಿಂದ ವಿಮುಖರಾಗಿದ್ದಾರೆ. ಇದೇ ವೇಳೆಗೆ ಖಾಸಗಿ ಶಾಲೆಗಳು ದಾಖಲಾತಿ ಸಂಖ್ಯೆಯಾಗಿದೆ. ಹೀಗಾಗಿ ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯ ಹೆಚ್ಚಿಸಿ ವಿದ್ಯಾರ್ಥಿಗಳನ್ನು ಸೆಳೆಯಲು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.

ಇನ್ನು ಶಾಲಾ ಕಟ್ಟಡಗಳ ಬಗ್ಗೆ ಮಾಹಿತಿ ಪಡೆದ ಸಚಿವ ಮಧು ಬಂಗಾರಪ್ಪ, ಮಲೆನಾಡು ಭಾಗದ ಶಾಲಾ ಕಟ್ಟಡಗಳ ಬಗ್ಗೆ ಸಾಕಷ್ಟು ದೂರುಗಳು ಬರುತ್ತವೆ. ಹೀಗಾಗಿ ಶಾಲಾ ಕಟ್ಟಡಗಳ ನಿರ್ಮಾಣಕ್ಕೆ ಶೀಘ್ರವೇ ಕ್ರಮ ಕೈಗೊಳ್ಳಬೇಕು. ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ನಡೆಸಬೇಕು. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ನಿರಂತರವಾಗಿ ಪರಿಶೀಲನೆ ನಡೆಸಬೇಕು.

ವಿಧಾನಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನಿವಾರಿಸಲು ಹೊಸದಾಗಿ ಶಿಕ್ಷಕರನ್ನು ನೇಮಿಸಿಕೊಳ್ಳಬೇಕು ಎಂದು ಸಲಹೆ ನೀಡಿ. ಇದಕ್ಕೆ ಪ್ರತಿಕ್ರಿಯೆ ನೀಡಿದ ಪ್ರಭಾರ ಡಿಡಿಪಿಐ ಕೆ ಎಸ್ ಪ್ರಕಾಶ್, ಜಿಲ್ಲೆಯಲ್ಲಿ ಅಷ್ಟಾಗಿ ಶಿಕ್ಷಕರ ಸಮಸ್ಯೆ ಇಲ್ಲ ಶಿಕ್ಷಕರ ಸಮಸ್ಯೆ ಇಲ್ಲ. ಸಮಸ್ಯೆ ಇದ್ದಲ್ಲಿ ಹೆಚ್ಚುವರಿ ಶಿಕ್ಷಕರನ್ನು ನಿಯೋಜನೆ ಮಾಡಿ ಸಮಸ್ಯೆ ಪರಿಹರಿಸಲಾಗುತ್ತಿದೆ ಎಂದು ಸಭೆಗೆ ಮಾಹಿತಿ ನೀಡಲಾಗಿದೆ.

ಜಿಲ್ಲೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳ ದಾಖಲಾತಿ ಕಡಿಮೆ ಆಗಲು ಸಚಿವ ಮಧು ಬಂಗಾರಪ್ಪ ಅಸಮಾಧಾನ ವ್ಯಕ್ತಪಡಿಸಿದರು. ಎಲ್ಲ ಕೆಪಿಎಸ್ ಶಾಲೆಗಳಿಗೆ ಹೆಚ್ಚಿನ ಬೇಡಿಕೆ ಇದೆ ಆದರೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೆಪಿಎಸ್ ಶಾಲೆಗಳಲ್ಲಿ ದಾಖಲಾತಿ ಕಡಿಮೆಯಾಗಿದೆ. ಮುಂದಿನ ದಿನಗಳಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 5 ರಿಂದ 6 ಕೆಪಿಎಸ್ ಶಾಲೆಗಳನ್ನು ಆಯ್ಕೆ ಮಾಡಿಕೊಳ್ಳಿ. ಹೀಗಾಗಿ ಕೆಪಿಎಸ್ ಶಾಲೆಯ ಬಗ್ಗೆ ಅಧಿಕಾರಿಗಳು ಹೆಚ್ಚಿನ ಗಮನಹರಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಜಿಪಂ ಸಿಇಒ ಡಾ.ಬಿ.ಗೋಪಾಲಕೃಷ್ಣ, ಶಿಕ್ಷಣ ಸಚಿವರ ಆಪ್ತ ಕಾರ್ಯದರ್ಶಿ ಕಿಶೋರ್ ಸೇರಿದಂತೆ ಶಿಕ್ಷಣ ಇಲಾಖೆ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Leave A Reply

Your email address will not be published.

error: Content is protected !!