ಕೊಲನಪಾಕ ಸುಕ್ಷೇತ್ರದಲ್ಲಿ ಶ್ರೀ ರಂಭಾಪುರಿ ಜಗದ್ಗುರುಗಳವರ 68ನೇ ಜನ್ಮ ದಿನಾಚರಣೆ

0 217

ಎನ್.ಆರ್.ಪುರ: ಶ್ರೀ ಜಗದ್ಗುರು ರೇಣುಕಾಚಾರ್ಯರು ಆವಿರ್ಭವಿಸಿದ ತೆಲಂಗಾಣ ರಾಜ್ಯದ ಯಾದಾದ್ರಿ ಭುವನಗಿರಿ ಜಿಲ್ಲೆಯ ಅಲೇರುಮಂಡಲದ ಕೊಲನುಪಾಕ (ಕೊಲ್ಲಿಪಾಕಿ) ಶ್ರೀ ಚಂಡಿಕಾಂಬಾ ಸಮೇತ ಸ್ವಯಂಭು ಶ್ರೀ ಸೋಮೇಶ್ವರ ದೇವಸ್ಥಾನದ ಪರಿಸರದಲ್ಲಿ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ 68ನೇ ಜನ್ಮ ದಿನೋತ್ಸವ ಜ. 7 ಭಾನುವಾರದಂದು ಜರುಗುವುದು.

ಇದರ ಅಂಗವಾಗಿ ಜನವರಿ 3ರಿಂದ 7ರ ವರೆಗೆ ಶ್ರೀ ರಂಭಾಪುರಿ ಜಗದ್ಗುರುಗಳವರ ಇಷ್ಟಲಿಂಗ ಮಹಾಪೂಜೆ ಹಾಗೂ ಶ್ರೀ ಸ್ವಯಂಭು ಶ್ರೀ ಸೋಮೇಶ್ವರ ಮಹಾಲಿಂಗಕ್ಕೆ ಮಹಾರುದ್ರಾಭಿಷೇಕ, ವಿಶೇಷ ಪೂಜೆ, ಸಹಸ್ರ ಪುಷ್ಪಾರ್ಚನೆ ಹಾಗೂ ಶ್ರೀ ಚಂಡಿಕಾಂಬಾ ದೇವಿಗೆ ಕುಂಕುಮಾರ್ಚನೆ ನಡೆಯುವುದು.

ಜ.7ರಂದು ನಾಡಿನ ಶಿವಾಚಾರ್ಯರ ಮತ್ತು ಧರ್ಮಾಭಿಮಾನಿಗಳ ಉಪಸ್ಥಿತಿಯಲ್ಲಿ ಶ್ರೀಮದ್ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳವರ 68ನೇ ವರ್ಷದ ಜನ್ಮ ದಿನೋತ್ಸವ ಆಚರಣೆ ನಡೆಯುವುದು ಎಂದು ಶ್ರೀ ಕೊಲ್ಲಿಪಾಕಿ ಸೋಮೇಶ್ವರ ಜಗದ್ಗುರು ರೇಣುಕಾಚಾರ್ಯ ಡೆವೆಲಪಮೆಂಟ್ & ಚಾರಿಟೇಬಲ್ ಟ್ರಸ್ಟ್(ರಿ) ನವರು ತಿಳಿಸಿದ್ದಾರೆ. ಧರ್ಮಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕೋರಿದೆ.

Leave A Reply

Your email address will not be published.

error: Content is protected !!