ಗ್ರಾಹಕರು ವಸ್ತು ಖರೀದಿಸುವಾಗ ಎಚ್ಚರದಿಂದರಬೇಕು

ಚಿಕ್ಕಮಗಳೂರು: ಗ್ರಾಹಕರು ಯಾವುದೇ ವಸ್ತು ಖರೀದಿಸುವಾಗ ವಸ್ತುವಿನ ಗುಣಮಟ್ಟ, ಸುರಕ್ಷತೆ, ವಸ್ತುವಿನ ಉತ್ಪಾದನೆ ಮತ್ತು ಅದರ ಕೊನೆಯ ಅವಧಿಯನ್ನು ಪರಿಶೀಲಿಸಿ ಖರೀದಿಸಬೇಕು ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಎನ್.ಆರ್. ಚನ್ನಕೇಶವ ತಿಳಿಸಿದರು.

ಜಿಲ್ಲಾಡಳಿತ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾನೂನು ಮಾಪನಶಾಸ್ತ್ರ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಹಾಗೂ ಶ್ರೀ ಶಾರದಾ ಸ್ಕೂಲ್ ಆಫ್ ಲಾ ಕಾಲೇಜ್ ಇವರ ವತಿಯಿಂದ ಇಂದು ನಗರದ ಬೈಪಾಸ್ ರಸ್ತೆಯಲ್ಲಿರುವ ಶ್ರೀ ಶಾರದಾ ಸ್ಕೂಲ್ ಆಫ್ ಲಾ ಕಾಲೇಜ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಗ್ರಾಹಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದೇಶದ ಪ್ರಥಮ ಪ್ರಜೆಯಿಂದ ಸಾಮಾನ್ಯ ಪ್ರಜೆಯ ವರೆಗೂ ಎಲ್ಲರು ಗ್ರಾಹಕರಾಗಿರುತ್ತಾರೆ. ಗ್ರಾಹಕರಾದವರು ಖರೀದಿಯಲ್ಲಿ ಮತ್ತು ವ್ಯವಹಾರಗಳಲ್ಲಿ ತಮಗಾಗುವ ತೊಂದರೆಗಳನ್ನು ಗ್ರಾಹಕರ ಆಯೋಗದ ಗಮನಕ್ಕೆ ತಂದು ಪರಿಹಾರ ಪಡೆದುಕೊಳ್ಳಬಹುದಾಗಿದೆ ಎಂದು ಅವರು ಅನ್ಯಾಯವಾದಾಗ ಅದನ್ನು ಕಡೆಗಣಿಸದೆ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ದೂರು ಸಲ್ಲಿಸಿ ನ್ಯಾಯ ಪಡೆದುಕೊಳ್ಳಲು ಮುಂದಾಗಬೇಕು ಎಂದು ಹೇಳಿದ ಅವರು. ತಮಗಾಗುವ ಮೋಸವನ್ನು ನಿರ್ಲಕ್ಷ್ಯದಿಂದ ಕಂಡರೆ ವರ್ತಕರನ್ನು ಪ್ರಚೋಧಿಸಿದಂತಾಗುತ್ತದೆ.

ವಂಚನೆಗೊಳಗಾದ ಗ್ರಾಹಕರು ಅಗತ್ಯ ದಾಖಲೆಗಳೊಂದಿಗೆ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿದರೆ ನ್ಯಾಯವನ್ನು ಕೊಡುತ್ತದೆ. ಪ್ರತಿಯೊಬ್ಬ ಗ್ರಾಹಕರು ಇದರ ಅರಿವು ಪಡೆದು ಎಚ್ಚರ ವಹಿಸುವಂತೆ ಅವರು ಹೇಳಿದರು.
ಗ್ರಾಹಕರು ಆನ್‌ಲೈನ್‌ನಲ್ಲಿ ವಸ್ತುಗಳನ್ನು ಖರೀದಿಸುವ ಸಂದರ್ಭದಲ್ಲಿ ಎಚ್ಚರದಿಂದ ಇರಬೇಕು. ಯಾವುದಾದರೂ ಲೋಪಗಳು ಕಂಡು ಬಂದಲ್ಲಿ ಅಥವಾ ಗ್ರಾಹಕರಿಗೆ ವ್ಯಾಪಾರಿಗಳಿಂದ ಅನ್ಯಾಯವಾದ ಸಂದರ್ಭದಲ್ಲಿ ಅಂತಹ ಗ್ರಾಹಕರು ತಕ್ಷಣ ಗ್ರಾಹಕರ ವೇದಿಕೆಗೆ ದೂರು ಸಲ್ಲಿಸಬೇಕು, ದೂರು ನೀಡಿದ ಮೂರು ತಿಂಗಳೊಳಗೆ ಪರಿಹಾರ ಪಡೆಯಬಹುದಾಗಿದೆ ಎಂದು ತಿಳಿಸಿದರು.

ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮಹಿಳಾ ಸದಸ್ಯೆರಾದ ಪ್ರೇಮ ಇ. ಮಾತನಾಡಿ ಗ್ರಾಹಕರ ಹಕ್ಕುಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯತೆ ಇದೆ. ಇಂದು ಆನ್ ಲೈನ್ ಸೇವೆಯನ್ನು ಈ ವ್ಯಾಪ್ತಿಗೆ ತರಲಾಗಿದೆ. ಆನ್ ಲೈನ್ ಖರೀದಿಯಲ್ಲಿ ಗ್ರಾಹಕರು ಹೆಚ್ಚು ವಂಚನೆಗೆ ಒಳಗಾಗುತ್ತಾರೆ. ಹೀಗೆ ಮೋಸಕ್ಕೆ ಒಳಗಾದ ಗ್ರಾಹಕರು ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ದೂರು ನೀಡಿ ಪರಿಹಾರ ಪಡೆಯಬಹುದಾಗಿದೆ ಎಂದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಸೋಮ ಎ.ಎಸ್.  ಮಾತನಾಡಿ ಪ್ರತಿ ವರ್ಷ ಮಾರ್ಚ್ 15 ರಂದು ವಿಶ್ವ ಗ್ರಾಹಕರ ಹಕ್ಕುಗಳ ದಿನವನ್ನು ಆಚರಣೆ ಮಾಡಲಾಗುತ್ತದೆ. ಗ್ರಾಹಕರಲ್ಲಿ ಅರಿವು ಮೂಡಿಸುವ ಸಲುವಾಗಿ ಈ ದಿನವನ್ನು ವಿಶ್ವದಾದ್ಯಂತ ಆಚರಣೆ ಮಾಡಲಾಗುತ್ತಿದ್ದು, ಭಾರತದಲ್ಲಿ ಗ್ರಾಹಕರ ಕುಂದು ಕೊರತೆಯನ್ನು ರಾಷ್ಟ್ರೀಯ ಗ್ರಾಹಕರ ವಿವಾದಗಳ ಪರಿಹಾರ ಆಯೋಗವು ಪರಿಹರಿಸುತ್ತದೆ. ಇದನ್ನು 1988ರಲ್ಲಿ ಗ್ರಾಹಕರ ಸಂರಕ್ಷಣಾ ಕಾಯ್ದೆಯಡಿಯಲ್ಲಿ ಜಾರಿಗೆ ತರಲಾಯಿತು. ಡಿಸೆಂಬರ್ 24, 1986ರಲ್ಲಿ ಅಧೀಕೃತವಾಗಿ ಭಾರತದಲ್ಲಿ ವಿಶ್ವ ಗ್ರಾಹಕರ ದಿನವನ್ನು ಆಚರಣೆಗೆ ತರಲಾಯಿತು. ಭಾರತದಲ್ಲಿ ಡಿಸೆಂಬರ್ 24 ನ್ನು ಗ್ರಾಹಕರ ಹಕ್ಕುಗಳ ದಿನವಾಗಿ ಆಚರಿಸಲಾಗುತ್ತಿದೆ ಎಂದು ಹೇಳಿದ ಅವರು ಗ್ರಾಹಕರ ಹಕ್ಕುಗಳು, ಗ್ರಾಹಕರ ರಕ್ಷಣೆ ಮತ್ತು ಸಬಲೀಕರಣದ ಬಗ್ಗೆ ಜಾಗೃತಿ ಮೂಡಿಸುವುದು ಇದರ ಉದ್ದೇಶವಾಗಿದೆ ಎಂದು ತಿಳಿಸಿದರು.

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕ ಯೋಗಾನಂದ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಶ್ರೀ ಶಾರದಾ ಸ್ಕೂಲ್ ಆಫ್ ಲಾ ಕಾಲೇಜಿನ ಪ್ರಾಂಶುಪಾಲರಾದ ಸೈಯದ್ ನಯೀಂ ಉರ್ ರೆಹಮಾನ್ ಮುಂತಾದವರಿದ್ದರು.

Malnad Times

Recent Posts

Rain Alert | ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…

7 days ago

Shivamogga Loksabha Constituency | ಮತದಾನಕ್ಕೆ ಸಕಲ ಸಿದ್ಧತೆ, ಮತಗಟ್ಟೆ ತಲುಪಿದ ಮತಯಂತ್ರಗಳು

ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…

1 week ago

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು !

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

1 week ago

ಮತದಾನಕ್ಕೆ ಕೌಂಟ್‌ಡೌನ್ | ಮತಗಟ್ಟೆಗಳಿಗೆ ಮತಯಂತ್ರ ಇತರ ಪರಿಕರಗಳೊಂದಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…

1 week ago

Arecanut Today Price | ಮೇ 5ರ ಅಡಿಕೆ ರೇಟ್

ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

1 week ago

ಕಾಂಗ್ರೆಸ್ ಮೀಸಲಾತಿ ಜಾರಿಗೊಳಿಸಿದ್ದರಿಂದ ಕೆಳ ವರ್ಗದವರಿಗೂ ಸರ್ಕಾರಿ ಉದ್ಯೋಗ ಲಭಿಸಿದೆ ; ಬೇಳೂರು ಗೋಪಾಲಕೃಷ್ಣ

ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…

1 week ago