ಚಲಿಸುತ್ತಿದ್ದ ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು !

0 670

ಮೂಡಿಗೆರೆ : ಚಲಿಸುತ್ತಿದ್ದ ಟ್ರ್ಯಾಕ್ಟರ್ ಒಂದಕ್ಕೆ ಹಿಂಬದಿಯಿಂದ ಮಾರುತಿ 800 ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೂಡಿಗೆರೆ ತಾಲೂಕಿನ ಮುತ್ತಿಗೆಪುರ ಎಂಬಲ್ಲಿ ನಡೆದಿದೆ.

ಈ ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರು ಚಾಲಕನ ಸ್ಥಿತಿ ಗಂಭೀರವಾಗಿದೆ.

ಕಾರು ಚಾಲಕನನ್ನು ಕೀರ್ತಿ ಎಂದು ಗುರುತಿಸಿಲಾಗಿದೆ. ಕೀರ್ತಿ ಬೇಲೂರು ತಾಲ್ಲೂಕು ಚೀಕನಹಳ್ಳಿ ಮೂಲದವರು ಎಂದು ತಿಳಿದುಬಂದಿದೆ. ಅಪಘಾತದ ರಭಸಕ್ಕೆ ಚಾಲಕ ಕಾರೊಳಗೆ ಸಿಲುಕಿಕೊಂಡು ಹೊರತೆಗೆಯಲು ಸ್ಥಳೀಯರು ಮತ್ತು ಸ್ಥಳೀಯರು ಹರಸಾಹಸಪಟ್ಟರು.

ಗಾಯಾಳುವನ್ನು ಮೂಡಿಗೆರೆ ಎಂ.ಜಿ. ಎಂ. ಆಸ್ಪತ್ರೆಗೆ ರವಾನಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯಲಾಗಿದೆ.

KA34M1708 ನಂಬರಿನ ಮಾರುತಿ 800 ಕಾರು ಟ್ರ್ಯಾಕ್ಟರ್ ಒಂದಕ್ಕೆ ಡಿಕ್ಕಿ ಹೊಡೆದಿದೆ. ಮುತ್ತಿಗೆಪುರ ಪ್ರೌಢಶಾಲೆ ಬಳಿ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದೆ. ಯುವಕನ ಮುಖ, ಕುತ್ತಿಗೆ, ಕೈ ಕಾಲು ಭಾಗಕ್ಕೆ ಪೆಟ್ಟಾಗಿದ್ದು, ತೀವ್ರ ರಕ್ತಸ್ರಾವವಾಗಿದೆ.

ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.

error: Content is protected !!