ಚಿಕ್ಕಮಗಳೂರು ಜಿಲ್ಲೆಗೆ ಸಂಸದೆ ಶೋಭಾ ಕರಂದ್ಲಾಜೆ 10 ವರ್ಷದ ಕೊಡುಗೆ ಏನು ? ಪ್ರಶ್ನೆ ಮಾಡಿದ ಹೇಮಂತ್‌ಕುಮಾರ್

0 209

ಚಿಕ್ಕಮಗಳೂರು : ಉಡುಪಿ-ಚಿಕ್ಕಮಗಳೂರು ಸಂಸದರಾಗಿ ಎರಡು ಅವಧಿಯಲ್ಲೂ ಅಧಿಕಾರ ನಡೆಸಿರುವ ಶೋಭಾ ಕರಂದ್ಲಾಜೆ ಅವರು ಜಿಲ್ಲೆಗೆ ಶೂನ್ಯ ಕೊಡುಗೆ ನೀಡಿರುವುದೇ ದೊಡ್ಡ ಸಾಧನೆ ಎಂದು ಎಎಪಿ ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಎಂ.ಎಸ್.ಹೇಮಂತ್‌ಕುಮಾರ್ ಹೇಳಿದ್ದಾರೆ.

ಈ ಕುರಿತು ಸೋಮವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಳೆದ ಒಂದು ದಶಕಗಳ ಕಾಲ ಸಂಸದೆಯಾಗಿ ಹಾಗೂ ಕೇಂದ್ರದ ಕೃಷಿ ಸಚಿವೆಯಾಗಿರುವ ಶೋಭಾ ಕರಂದ್ಲಾಜೆ ಜನಸಾಮಾನ್ಯರು ಹಾಗೂ ಕೃಷಿಕರಿಗೂ ಯಾವುದೇ ಗುರುತರವಾದ ಕೊಡುಗೆ ನೀಡದೇ ಅಭಿವೃಧ್ದಿ ಕಡೆಗಣಿಸಲಾಗಿದೆ ಎಂದು ದೂರಿದ್ದಾರೆ.

ಚಿಕ್ಕಮಗಳೂರು, ಹಾಸನ ಹಾಗೂ ಕೊಡುಗು ಜಿಲ್ಲೆಗಳಲ್ಲಿ ಹಲವಾರು ದಿನಗಳಿದ ಕಾಡು ಪ್ರಾಣಿಗಳ ಹಾವಳಿಯಿಂದ ಕಾಫಿ ಬೆಳೆಗಾರರು ಹಾಗೂ ರೈತರು ಸಂಕಷ್ಟದ ಸ್ಥಿತಿಗೆ ಸಿಲುಕಿದ್ದು ಇಲ್ಲಿಯವರೆಗೂ ಸ್ಥಳ ಪರಿಶೀಲನೆ ನಡೆಸಿ ಪರಿಹಾರ ಒದಗಿಸುವ ಬಗ್ಗೆ ಚಿಂತನೆಯೇ ನಡೆಸಿಲ್ಲ ಎಂದು ಹೇಳಿದ್ದಾರೆ.

ನಾಡಿನಾದ್ಯಂತ ಬರದಛಾಯೆ ಆವರಿಸಿರುವ ಹಿನ್ನೆಲೆಯಲ್ಲಿ ಬೆಳೆಗಳು ಒಣಗಿ ಹೋಗುತ್ತಿವೆ. ಕೇಂದ್ರದಿಂದ ಬರ ಪರಿಸ್ಥತಿ ಬಗ್ಗೆ ಅಧ್ಯಯನ ನಡೆಸಿರುವ ಅಧಿಕಾರಿಗಳ ಜೊತೆ ಮಾತುಕತೆ ನಡೆಸದೇ ಮೌನವಾಗಿರುವ ಜೊತೆಗೆ ಪರಿಹಾರ ಒದಗಿಸಲು ಶ್ರಮವಹಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಸಂಸದರ ನಿಧಿಯ ಅನುದಾನದಲ್ಲಿ ನಗರ ಮತ್ತು ಗ್ರಾಮಾಂತರ ರಸ್ತೆ, ಸಮುದಾಯ ಭವನಗಳನ್ನು ನಿರ್ಮಿಸಿರುವುದಿಲ್ಲ. ಇದೀಗ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಓಡಾಟ ನಡೆಸಲಾಗುತ್ತಿದೆಯೇ ಹೊರತು ಯಾವ ನೈತಿಕತೆ ಮೇಲೆ ಜನತೆಯ ಮತ ಕೇಳುವ ಅಧಿಕಾರವಿದೆ ಎಂದು ಪ್ರಶ್ನಿಸಿದ್ದಾರೆ.


ಜಿಲ್ಲೆಗೆ ಚುನಾವಣೆ ವೇಳೆಯಲ್ಲಿ ಮಾತ್ರ ಧಾವಿಸುವ ಶೋಭಾ ಕರಂದ್ಲಾಜೆ ಅವರಿಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜನತೆ ತಮ್ಮ ಅಮೂಲ್ಯವನ್ನು ಜಿಲ್ಲೆಗೆ ಶ್ರಮಿಸುವ ವ್ಯಕ್ತಿಗೆ ನೀಡುವ ಮೂಲಕ ಗೋಬ್ಯಾಕ್ ಶೋಭಾ ಎನ್ನುವ ನೀತಿ ಅನಸರಿಸಬೇಕಿದೆ ಎಂದು ಹೇಳಿದ್ದಾರೆ.

Leave A Reply

Your email address will not be published.

error: Content is protected !!