ಜಿಲ್ಲಾಧಿಕಾರಿಗಳ ಜನತಾ ದರ್ಶನ | ತಾಲ್ಲೂಕಿನಲ್ಲಿ ಸಮಸ್ಯೆಗಳನ್ನು ಬಗೆಹರಿಸಲು ಒತ್ತು – ಡಿಸಿ ಮೀನಾ ನಾಗರಾಜ್

ಚಿಕ್ಕಮಗಳೂರು: ಸಾರ್ವಜನಿಕ ಅಹವಾಲುಗಳನ್ನು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಆಲಿಸಿ ಸೂಕ್ತ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳು ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳುವುದು ಹಾಗೂ ಜಿಲ್ಲಾಧಿಕಾರಿಗಳು ಪ್ರತಿ 15 ದಿನಗಳಿಗೊಮ್ಮೆ ತಮ್ಮ ಜಿಲ್ಲಾ ವ್ಯಾಪ್ತಿಯ ಒಂದು ತಾಲ್ಲೂಕುನ್ನು ಆಯ್ಕೆ ಮಾಡಿಕೊಂಡು ತಾಲ್ಲೂಕು ಮಟ್ಟದಲ್ಲಿ ಜನತಾ ದರ್ಶನ ಕಾರ್ಯಕ್ರಮವನ್ನು ನಡೆಸುವ ಕುರಿತು ಸರ್ಕಾರದ ನಿರ್ದೇಶನದಂತೆ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡು ಜನರ ಸಮಸ್ಯೆಗಳಿಗೆ ಆದಷ್ಟು ಸ್ಥಳದಲ್ಲಿಯೇ ಪರಿಹಾರ ಒದಗಿಸಲು ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.


ಕಳಸ ತಾಲ್ಲೂಕಿನ ಕಳಸೇಶ್ವರ ದೇವಸ್ಥಾನದ ಸಭಾಭವನದಲ್ಲಿ ಇಂದು ಕಳಸ ತಾಲ್ಲೂಕಿನ ಜನತಾ ದರ್ಶನದಲ್ಲಿ ಅವರು ಮಾತನಾಡಿ, ಸಹಜವಾಗಿ ಒಂದು ತಾಲ್ಲೂಕು ರಚನೆಯಾದ ಮೇಲೆ ಅದನ್ನು ಕಾರ್ಯರೂಪಕ್ಕೆ ತರಲು ಹಲವಾರು ಸವಾಲುಗಳಿರುತ್ತವೆ. ಜಿಲ್ಲೆಯಲ್ಲಿ ಅಜ್ಜಂಪುರ, ಕಳಸ ತಾಲ್ಲೂಕುಗಳು ಹೊಸದಾಗಿ ರಚನೆಯಾಗಿದ್ದು, ಈ ತಾಲ್ಲೂಕುಗಳಿಗೆ ಕಳೆದ ನಾಲ್ಕು ತಿಂಗಳಿನಿಂದ ಕಂದಾಯ ಇಲಾಖೆ, ಜಿಲ್ಲಾ ಪಂಚಾಯಿತಿಯಿಂದ ಸಮಸ್ಯೆಗಳ ಇತ್ಯರ್ಥಕ್ಕೆ ಕ್ರಮ ವಹಿಸಲಾಗುತ್ತಿದ್ದು, ಆದರೂ ಪರಿಪೂರ್ಣವಾಗಿ ಎಲ್ಲವೂ ಬಗೆಹರಿದಿದೆ ಎಂದು ಹೇಳುವುದಿಲ್ಲ. ಮುಂದೆ ಹಂತ ಹಂತವಾಗಿ ಕ್ರಮ ವಹಿಸಲಾಗುವುದು ಎಂದರು.


ಇಂದಿನ ಜನತಾ ದರ್ಶನದಲ್ಲಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಅವರು ಜನರ ಅಹವಾಲು, ಸಮಸ್ಯೆಗಳನ್ನು ಸಹನೆ, ಕಾಳಜಿಯಿಂದ ಆಲಿಸಿ, ಜನರ ಪ್ರತಿಯೊಂದು ಮನವಿಗೂ ಸಕಾರಾತ್ಮಕವಾಗಿ ಸ್ಪಂದಿಸಿ, ಉತ್ತಮ ಆಡಳಿತ ಮತ್ತು ಸಮಸ್ಯೆ ಪರಿಹಾರದ ಭರವಸೆ ಮೂಡಿಸಿದರು.
ಜಿಲ್ಲಾಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗೋಪಾಲಕೃಷ್ಣ, ಚಿಕ್ಕಮಗಳೂರು ಉಪ ವಿಭಾಗದ ಉಪ ವಿಭಾಗಾಧಿಕಾರಿ ರಾಜೇಶ್ ಸಾಥ್ ನೀಡಿ, ಸಮಸ್ಯೆಗಳ ತ್ವರಿತ ಪರಿಹಾರಕ್ಕೆ ಸಲಹೆ ಸೂಚನೆ ನೀಡಿದರು.


ಜನತಾ ದರ್ಶನದಲ್ಲಿ ಸುಮಾರರು 65ಕ್ಕೂ ಹೆಚ್ಚು ಅರ್ಜಿಗಳನ್ನು ಜಿಲ್ಲಾಧಿಕಾರಿಗಳು ಸ್ವೀಕರಿಸಿ ಸ್ಥಳೀಯವಾಗಿ ಪರಿಹರಿಸಬಹುದಾದ ಸಮಸ್ಯೆಗಳಿಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಕ್ರಮ ವಹಿಸುವಂತೆ ಸೂಚಿಸಿದ ಅವರು ಉಳಿದ ಅಹವಾಲುಗಳನ್ನು ನಿಯಮಾನುಸಾರ ಪರಿಶೀಲಿಸಿ ಹಂತ ಹಂತವಾಗಿ ಪರಿಹರಿಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದ ಅವರು ಹೆಚ್ಚು ಅರ್ಜಿಗಳು ಕಂದಾಯ ಇಲಾಖೆ, ಕುಡಿಯುವ ನೀರು, ರಸ್ತೆಗಳ ದುರಸ್ಥಿಗೆ, ವಿದ್ಯುತ್ ಸಮಸ್ಯೆಗೆ, ಹಕ್ಕುಪತ್ರ ವಿತರಣೆಗೆ, ವೈದ್ಯರುಗಳ ನೇಮಕಕ್ಕೆ ಸಂಬಂಧಿಸಿದ್ದವು, ಸರಕಾರದ ಮಟ್ಟದಲ್ಲಿ ನಿರ್ಣಯವಾಗಬೇಕಾದ ಅರ್ಜಿಗಳನ್ನು ಸೂಕ್ತ ಶಿಫಾರಸ್ಸುಗಳೊಂದಿಗೆ ಸಂಬಂಧಿಸಿದ ಇಲಾಖೆಗಳಿಗೆ ಕಳುಹಿಸಲಾಗುವುದು ಎಂದರು.


ವಿವಿಧ ಇಲಾಖೆಗಳ ಕುಂದು ಕೊರತೆಗಳ ಅರ್ಜಿಗಳನ್ನು ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲಾಯಿತು. ನೋಂದಣಿ ಮಾಡಿಕೊಂಡ ಬಳಿಕ ಅರ್ಜಿದಾರರ ಮೊಬೈಲ್ ಸಂಖ್ಯೆಗೆ ಅರ್ಜಿಯ ಸಂಖ್ಯೆ ಹಾಗೂ ಇತರೆ ಮಾಹಿತಿಯ ಸಂದೇಶ ಬರುತ್ತದೆ. ಮುಂದಿನ 24 ಗಂಟೆಗಳೊಳಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ಲಾಗಿನ್‌ಗೆ ಅಹವಾಲುದಾರರ ಅರ್ಜಿ ತಲುಪುತ್ತದೆ. ಅಧಿಕಾರಿಗಳು ಅರ್ಜಿಯನ್ನು ಪರಿಶೀಲಿಸಿ ಸಮಸ್ಯೆ ಬಗೆಹರಿಸಲು ಕ್ರಮ ವಹಿಸುವರು.


ಈ ಕುರಿತು ಮಾಹಿತಿ ಸಂದೇಶವು ಅಹವಾಲುದಾರರ ದೂರವಾಣಿ ಸಂಖ್ಯೆಗೆ ಬರುತ್ತದೆ. ಸಾರ್ವಜನಿಕರ ಅರ್ಜಿ ಸ್ವೀಕರಿಸಲು ಕಳಸ ತಹಸೀಲ್ದಾರರ ನೇತೃತ್ವದ ವಿವಿಧ ಅಧಿಕಾರಿ ಸಿಬ್ಬಂದಿಗಳು ಆನ್‌ಲೈನ್ ಎಂಟ್ರಿ ಹಾಗೂ ಆಯಾ ಇಲಾಖೆ ಅಧಿಕಾರಿಗಳಿಗೆ ತಲುಪಿಸಲು ಕ್ರಮ ವಹಿಸಿದರು.
ಜನತಾ ದರ್ಶನದಲ್ಲಿ ಸಲ್ಲಿಕೆಯಾದ ಅಹವಾಲುಗಳ ಅರ್ಜಿ ಹೊಸಮನೆ ಎಸ್ಟೇಟ್‌ನ ಗಿರಿಜನ ಕಾಲೋನಿಗೆ ರಸ್ತೆಗೆ ಡಾಂಬರು ಹಾಕುವಂತೆ, 2022ರಲ್ಲಿ ಮಂಜೂರಾಗಿದ್ದ ಅನುದಾನವನ್ನು ಬೇರೆಡೆಗೆ ವರ್ಗಾಹಿಸಲಾಗಿದೆ. ರಸ್ತೆ ಹಾಳಾಗಿದ್ದು ಓಡಾಡಲು ಸಮಸ್ಯೆಯಾಗಿದೆ. ಜಿಲ್ಲಾಧಿಕಾರಿಗಳು ಮಾತನಾಡಿ, ರಸ್ತೆಗೆ ಡಾಂಬರು ಹಾಕಲು ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾ ಪಂಚಾಯಿತಿ ಅಧಿಕಾರಿಗೆ ಸೂಚಿಸಿದರು.


ಕಳಸದ ಕಾಲ ಬೈರವ, ವಶಿಷ್ಟಿ ದೇವಾಲಯದ ಅತಿಕ್ರಮಣ ತಡೆಯುವಂತೆ, ಕಳಸ ಹೋಬಳಿ ಇಡಕಲ್ ಗ್ರಾಮಕ್ಕೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಮ್ಯುಟೇಷನ್ ಸರಿಪಡಿಸುವಂತೆ, ಸಾಗುವಳಿ ಚೀಟಿ ನೀಡುವ ಕುರಿತಂತೆ ಹಲವಾರು ಅರ್ಜಿಗಳನ್ನು ಸ್ವೀಕರಿಸಿ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಕ್ರಮ ವಹಿಸುವಂತೆ ಸೂಚಿಸಿದರು.
ಮೂಡಿಗೆರೆ ತಾಲ್ಲೂಕು ಪಂಚಾಯಿತಿಯ ಕಾರ್ಯ ನಿರ್ವಾಹಕ ಅಧಿಕಾರಿ, ಕಳಸ ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

Malnad Times

Recent Posts

Shivamogga Loksabha Constituency | ಮತದಾನಕ್ಕೆ ಸಕಲ ಸಿದ್ಧತೆ, ಮತಗಟ್ಟೆ ತಲುಪಿದ ಮತಯಂತ್ರಗಳು

ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…

4 hours ago

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು !

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

5 hours ago

ಮತದಾನಕ್ಕೆ ಕೌಂಟ್‌ಡೌನ್ | ಮತಗಟ್ಟೆಗಳಿಗೆ ಮತಯಂತ್ರ ಇತರ ಪರಿಕರಗಳೊಂದಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…

5 hours ago

Arecanut Today Price | ಮೇ 5ರ ಅಡಿಕೆ ರೇಟ್

ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

1 day ago

ಕಾಂಗ್ರೆಸ್ ಮೀಸಲಾತಿ ಜಾರಿಗೊಳಿಸಿದ್ದರಿಂದ ಕೆಳ ವರ್ಗದವರಿಗೂ ಸರ್ಕಾರಿ ಉದ್ಯೋಗ ಲಭಿಸಿದೆ ; ಬೇಳೂರು ಗೋಪಾಲಕೃಷ್ಣ

ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…

1 day ago

ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರಿಂದ ಭರ್ಜರಿ ರೋಡ್ ಷೋ

ರಿಪ್ಪನ್‌ಪೇಟೆ : ನಾಡಿದ್ದು ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರು ಇಂದು ಭರ್ಜರಿ…

1 day ago