ದೇಶದ ಅಭಿವೃದ್ಧಿಗೆ ಯುವ ಜನತೆಯೇ ಆಧಾರ ಸ್ತಂಭ

0 134

ಚಿಕ್ಕಮಗಳೂರು: ದೇಶದ ಅಭಿವೃದ್ಧಿಗೆ ಯುವಜನತೆಯು ಆಧಾರ ಸ್ತಂಭ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗೋಪಾಲಕೃಷ್ಣ ಹೇಳಿದರು.

ನಗರದ ಡಿಎಸಿಜಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇಂದು ನಡೆದ ಜಿಲ್ಲಾ ಮಟ್ಟದ ನೆರೆಹೊರೆ ಯುವ ಸಂಸತ್ತು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ಯುವಜನತೆಯು ದೇಶದ ಸಂಪತ್ತು ದೇಶದ ಅಭಿವೃದ್ಧಿಯಲ್ಲಿ ಯುವಜನತೆಯು ಆಧಾರ ಸ್ತಂಭವಾಗಿದ್ದಾರೆ ಯುವಜನತೆಯ ವಿದ್ಯಾರ್ಥಿ ದಿನಗಳಲ್ಲಿ ದೇಶಕ್ಕಾಗಿ ಶ್ರಮಿಸಿದ ಮಹಾನ್ ವ್ಯಕ್ತಿಗಳ ಆದರ್ಶ, ವಿಚಾರಧಾರೆಗಳನ್ನು ಮೈಗೂಡಿಸಿಕೊಂಡು ದೇಶಪ್ರೇಮವನ್ನು ಬೆಳೆಸಿಕೊಳ್ಳಬೇಕು ಸಂವಿಧಾನದ ವಿಚಾರಗಳನ್ನು ಅರಿತು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಹೊರಹೊಮ್ಮಬೇಕು ಯುವಶಕ್ತಿಯು ಅಣುಶಕ್ತಿ ಇದ್ದಂತೆ, ಅಷ್ಟು ಶ್ರೇಷ್ಠತೆಯನ್ನು ಹೊಂದಿದೆ ಎಂದ ಅವರು ತಮ್ಮ ಶಕ್ತಿಯನ್ನು ಉತ್ತಮ ರೀತಿಯಲ್ಲಿ ಬಳಸಿಕೊಂಡು ದೇಶದ ಅಭಿವೃದ್ಧಿಗೆ ಸಹಕಾರಿಯಾಗಿ ಆಗಬೇಕೆಂದು ಅವರು ತಿಳಿಸಿದರು.

ಸಾಹಿತಿ ಹಾಗೂ ನಿವೃತ್ತ ಉಪನ್ಯಾಸಕ ತಿಪ್ಪೇರುದ್ರಪ್ಪ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿ ಯುವ ಜನತೆಯಲ್ಲಿ ದೇಶ ಪ್ರೇಮವು ಕುಂಠಿತವಾಗುತ್ತಿದೆ ಯುವ ಜನತೆಯು ಪಾಶ್ಚಾತ್ಯ ಸಂಸ್ಕೃತಿಗೆ ಮಾರುಹೋಗುತ್ತಿದ್ದಾರೆ ಭಾರತ ದೇಶದ ಸಂಸ್ಕೃತಿಯು ಶ್ರೀಮಂತಯುತವಾದದ್ದು ದೇಶದ ಸಂಸ್ಕೃತಿ, ಆಚಾರ ವಿಚಾರಗಳನ್ನು ತಮ್ಮಲ್ಲಿ ಅಳವಡಿಸಿಕೊಂಡು ಇತರರಿಗೆ ಪರಿಚಯಿಸಬೇಕು ಯುವಜನತೆಯು ನಿಂತ ನೀರಾಗದೆ ಹರಿಯುವ ನದಿಯಂತೆ ಸದಾ ಚಲನಶೀಲರಾಗಿರಬೇಕು ಯುವಶಕ್ತಿಗಿಂತ ದೊಡ್ಡ ಶಕ್ತಿ ದೇಶದಲ್ಲಿ ಮತ್ತೊಂದಿಲ್ಲ, ಯುವಜನತೆಯು ವಿದ್ಯಾರ್ಥಿ ಜೀವನದಲ್ಲಿ ವಿಚಲಿತರಾಗದೆ ತಮ್ಮ ಗುರಿಯತ್ತ ಮುಖ ಮಾಡಿ ನಡೆದರೆ ದೇಶವು ಅಭಿವೃದ್ಧಿಯತ್ತ ಸಾಗುತ್ತದೆ ಸರ್ವರನ್ನು ಗೌರವಿಸುತ್ತಾ ವಿವಿಧತೆಯಲ್ಲಿ ಏಕತೆಯನ್ನು ಕಾಣುತ್ತಾ ಸಮಾಜದ ಶಾಂತಿ ಸುವ್ಯವಸ್ಥೆ ಕಾಪಾಡುವುದು ಯುವಜನತೆಯ ಪಾತ್ರವಾಗಿದೆ ಎಂದು ಅವರು ಹೇಳಿದರು.

ನೆಹರು ಯುವ ಕೇಂದ್ರ ಜಿಲ್ಲಾ ಯುವ ಅಧಿಕಾರಿ ಅಭಿಷೇಕ್ ಚವರೆ ಪ್ರಾಸ್ತವಿಕ ನುಡಿಗಳಾಡಿದರು.

ಡಿ.ಎ.ಸಿ.ಜಿ. ಸರ್ಕಾರಿ ಪಾಲಿಟೆಕ್ನಿಕ್ ಪ್ರಾಚಾರ್ಯರು ಎಂ. ಪುಟ್ಟಸ್ವಾಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ವಿಭಾಗಾಧಿಕಾರಿ ಹೆಚ್.ಆರ್. ಶ್ರೀಧರ್, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟಗಳ ಜಿಲ್ಲಾಧ್ಯಕ್ಷ ಇಮ್ರಾನ್ ಅಹಮ್ಮದ್ ಬೇಗ್, ಹಾಸನ ಎ.ವಿ. ಕಾಂತಮ್ಮ ಮಹಿಳಾ ಕಾಲೇಜಿನ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕ ಡಾ. ಎಸ್.ಸಿ. ಯತೀಶ್ವರ ಉಪಸ್ಥಿತರಿದ್ದರು.

Leave A Reply

Your email address will not be published.

error: Content is protected !!