ನಾಪತ್ತೆಯಾಗಿದ್ದ ವ್ಯಕ್ತಿ ನದಿಯಲ್ಲಿ ಶವವಾಗಿ ಪತ್ತೆ !

ಮೂಡಿಗೆರೆ : ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಹೇಮಾವತಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಮೂಡಿಗೆರೆ ತಾಲೂಕಿನ ಕಿತ್ತಲೆಗಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಿತ್ತಲೆಗಂಡಿ ಗ್ರಾಮದ ಕೂಲಿ ಕಾರ್ಮಿಕ ಶಂಕರ್‌ (36) ಎಂಬ ವ್ಯಕ್ತಿ ಗುರುವಾರದಿಂದ ನಾಪತ್ತೆಯಾಗಿದ್ದರು.
ಈ ಬಗ್ಗೆ ಅವರ ಪತ್ನಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಶನಿವಾರ ಬೆಳಗ್ಗೆ ಕಿತ್ತಲೆಗಂಡಿ ಹೇಮಾವತಿ ಸೇತುವೆಯಿಂದ ಸ್ವಲ್ಪ ಮೇಲ್ಭಾಗದಲ್ಲಿ ವ್ಯಕ್ತಿಯ ಶವವೊಂದು ಪತ್ತೆಯಾಗಿತ್ತು. ನಂತರ ಪರಿಶೀಲಿಸಿದ್ದಾಗ ಅದು ನಾಪತ್ತೆಯಾಗಿದ್ದ ಶಂಕರ್‌ ಅವರ ಮೃತದೇಹವೆಂದು ತಿಳಿದು ಬಂದಿದೆ.

ಮೂಡಿಗೆರೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಸ್ಥಳೀಯರ ಮತ್ತು ಸಮಾಜ ಸೇವಕ ಫಿಶ್‌ ಮೋಣು ತಂಡದವರ ಸಹಾಯದಿಂದ ಶವವನ್ನು ನದಿಯಿಂದ ಮೇಲಕ್ಕೆತ್ತಿದ್ದಾರೆ.

ಮೂಡಿಗೆರೆ ಎಂಜಿಎಂ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಮೃತದೇಹವನ್ನು ಕುಟುಂಬಸ್ಥರಿಗೆ ನೀಡಲಾಗಿದೆ.

ಮೃತ ಶಂಕರ್‌ ವಿವಾಹಿತರಾಗಿದ್ದು, ಪತ್ನಿ ಮತ್ತು ಇಬ್ಬರು ಮಕ್ಕಳಿದ್ದಾರೆ. ಇವರು ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು. ಈ ಸಾವು ಹೇಗೆ ಸಂಭವಿಸಿದೆ ಎಂಬುದರ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮೂಡಿಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Malnad Times

Share
Published by
Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

1 day ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

1 day ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

1 day ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

1 day ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

1 day ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 days ago