ಪರವಾನಗಿ ಇಲ್ಲದೆ ನಾಡ ಬಂದೂಕು ಇಟ್ಟುಕೊಂಡಿದ್ದ ವ್ಯಕ್ತಿ ಬಂಧನ

0 301

ಮೂಡಿಗೆರೆ: ಅಕ್ರಮವಾಗಿ ಪರವಾನಗಿ ಇಲ್ಲದ ನಾಡ ಬಂದೂಕನ್ನು ಇಟ್ಟುಕೊಂಡಿದ್ದ ವ್ಯಕ್ತಿಯನ್ನು ಬಂಧಿಸಿರುವ ಘಟನೆ ತಾಲೂಕಿನ ಬಣಕಲ್ ಹೋಬಳಿಯಲ್ಲಿ ನಡೆದಿದೆ.

ಬಣಕಲ್ ಹೋಬಳಿಯ ಬಸನಿ ಹೆಗ್ಗುಡ್ಲು ಗ್ರಾಮದ ಲೋಕೇಶ್ (41) ಬಂಧಿತ ಆರೋಪಿ. ಈತ ಮನೆಯಲ್ಲಿ ಯಾವುದೇ ಪರವಾನಗಿ ಇಲ್ಲದೇ ಅಕ್ರಮವಾಗಿ ನಾಡ ಬಂದೂಕು ಮತ್ತು ಚರೆಯನ್ನು ಇಟ್ಟುಕೊಂಡಿದ್ದ ಖಚಿತ ಮಾಹಿತಿ ಪಡೆದ ಬಣಕಲ್ ಪೊಲೀಸರು ದಾಳಿ ನಡೆಸಿ ಒಂಟಿ ನಳಿಕೆಯ ನಾಡ ಬಂದೂಕು ಹಾಗೂ 12 ಚರೆಯನ್ನು ವಶಪಡಿಸಿಕೊಂಡು ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ ಅಡಿಯಲ್ಲಿ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Leave A Reply

Your email address will not be published.

error: Content is protected !!