ಪುತ್ರನ ಪಾಲಿನ ಪಿತ್ರಾರ್ಜಿತ ಆಸ್ತಿಯಲ್ಲಿ ತಾಯಿಯೂ ಮೊದಲನೇ ವರ್ಗದ ವಾರಸುದಾರರಾಗಲು ಅರ್ಹ ; ಕೋರ್ಟ್ ಆದೇಶ

ಬೆಂಗಳೂರು/ಚಿಕ್ಕಮಗಳೂರು : ಮೃತ ಪುತ್ರನ ಪಾಲಿನ ಪಿತ್ರಾರ್ಜಿತ ಆಸ್ತಿಯಲ್ಲಿ ತಾಯಿಯೂ ಮೊದಲನೇ ವರ್ಗದ ವಾರಸುದಾರರಾಗುತ್ತಾರೆ. ಹಾಗಾಗಿ ಮಗನ ಆಸ್ತಿಯಲ್ಲಿ ಪಾಲು ಪಡೆಯಲು ತಾಯಿ ಅರ್ಹರಾಗುತ್ತಾರೆ ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.

ಮೃತಪಟ್ಟಿರುವ ಪುತ್ರನ ಪಾಲಿನ ಆಸ್ತಿಯಲ್ಲಿ ಪಾಲು ಪಡೆಯಲು ತಾಯಿ ಹಕ್ಕು ಹೊಂದಿಲ್ಲ ಎಂದು ಚಿಕ್ಕಮಗಳೂರು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಟಿ.ಎನ್. ಸುಶೀಲಮ್ಮ ಎನ್ನುವವರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆಯು ನ್ಯಾಯಮೂರ್ತಿ ಹೆಚ್.ಪಿ.ಸಂದೇಶ್ ಅವರಿದ್ದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠದಲ್ಲಿ ನಡೆಯಿತು.

ವಿಚಾರಣೆ ವೇಳೆ ಪ್ರತಿವಾದ ಮಂಡಿಸಿದ ಪ್ರತಿವಾದಿಗಳ ಪರ ವಕೀಲರು, ಸೆಷನ್ಸ್ ನ್ಯಾಯಾಲಯದ ತೀರ್ಪನ್ನು ಸಮರ್ಥಿಸಿಕೊಂಡರು. ಮೇಲ್ಮನವಿದಾರರಾದ ಸುಶೀಲಮ್ಮ ಅವರಿಗೆ ಪಿತ್ರಾರ್ಜಿತ ಆಸ್ತಿಯಲ್ಲಿ ಪಾಲು ಹಂಚಿಕೆ ಮಾಡುವ ವೇಳೆಗಾಗಲೇ ಅವರು ನಿಧನರಾಗಿದ್ದರು. ಹಾಗಾಗಿ ಸೆಷನ್ಸ್ ನ್ಯಾಯಾಲಯದ ಆದೇಶದಲ್ಲಿ ಮಾರ್ಪಾಡು ಮಾಡುವ ಅಗತ್ಯವಿಲ್ಲ, ಸೆಷನ್ಸ್ ನ್ಯಾಯಾಲಯದ ತೀರ್ಪನ್ನು ಪುರಸ್ಕರಿಸಬೇಕು ಎಂದು ಮನವಿ ಮಾಡಿದರು.

ಆದರೆ, ಪ್ರತಿವಾದಿಗಳ ವಾದವನ್ನು ತಳ್ಳಿ ಹಾಕಿದ ಹೈಕೋರ್ಟ್, ಅರ್ಜಿಯಲ್ಲಿ ಸುಶೀಲಮ್ಮ ಅವರನ್ನು ಒಮ್ಮೆ ಪಕ್ಷಕಾರರನ್ನಾಗಿ ಮಾಡಿದ ಮೇಲೆ ಅವರೂ ಪುತ್ರ ಸಂತೋಷ್ ಅವರ ಮೊದಲನೇ ವರ್ಗದ ವಾರಸುದಾರರು ಎನಿಸಲಿದ್ದಾರೆ. ಸಂತೋಷ್ ಅವರು ತಾಯಿ, ಪತ್ನಿ ಮತ್ತು ಪುತ್ರನನ್ನು ಅಗಲಿದ್ದು, ಹಿಂದೂ ಅವಿಭಾಜ್ಯ ಕುಟುಂಬದಲ್ಲಿ ಸುಶೀಲಮ್ಮ ಮೊದಲನೇ ವರ್ಗದ ವಾರಸುದಾರರಾಗುತ್ತಾರೆ. ಹೀಗಾಗಿ, ಸಂತೋಷ್ ಅವರ ಆಸ್ತಿಯಲ್ಲಿ ಪಾಲು ಪಡೆಯಲು ಮೂಲ ಮೇಲ್ಮನವಿದಾರರಾದ ಸುಶೀಲಮ್ಮ ಅರ್ಹರಾಗಿದ್ದಾರೆ. ಹಾಗಾಗಿ ಸೆಷನ್ಸ್ ನ್ಯಾಯಾಲಯದ ನಡೆ ದೋಷಪೂರಿತವಾಗಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.

ಅಂತೆಯೇ, ಸೆಷನ್ಸ್ ನ್ಯಾಯಾಲಯದ ಆದೇಶದಲ್ಲಿ ಮಾರ್ಪಾಡು ಮಾಡಿ ಮೃತ ಪುತ್ರ ಸಂತೋಷ್ ಅವರ ಪಿತ್ರಾರ್ಜಿತ ಆಸ್ತಿಯಲ್ಲಿ ತಾಯಿ ಸುಶೀಲಮ್ಮ ಅವರಿಗೂ ಪಾಲು ಇದೆ, ಅವರು ಕೂಡ ಮೊದಲನೇ ವರ್ಗದ ವಾರಸುದಾರರಾಗುತ್ತಾರೆ ಎಂದು ತೀರ್ಪು ನೀಡಿ ಮೇಲ್ಮನವಿದಾರರ ಮನವಿಯನ್ನು ಪುರಸ್ಕರಿಸಿ ಆದೇಶ ನೀಡಿತು.

ಹಿಂದೂ ಉತ್ತರಾಧಿಕಾರಿ ಕಾಯ್ದೆಯಂತೆ, ಅರ್ಜಿದಾರರಿಗೆ ಪತಿ ಇದ್ದರೂ ಕೂಡ ಮೃತ ಪುತ್ರನ ಆಸ್ತಿಗೆ ಅವರೇ ಮೊದಲ ವಾರಸುದಾರರು. ಟ್ರಯಲ್ ಕೋರ್ಟ್ ಪರಿಗಣಿಸಿಲ್ಲ. ತಾಯಿ ಕೂಡ ಆಸ್ತಿಯಲ್ಲಿ ಸಮಾನ ಪಾಲುದಾರರಾಗಿದ್ದಾರೆ ಎಂದು ಕೋರ್ಟ್ ತಿಳಿಸಿದೆ.

Malnad Times

Recent Posts

Rain Alert | ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…

6 days ago

Shivamogga Loksabha Constituency | ಮತದಾನಕ್ಕೆ ಸಕಲ ಸಿದ್ಧತೆ, ಮತಗಟ್ಟೆ ತಲುಪಿದ ಮತಯಂತ್ರಗಳು

ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…

7 days ago

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು !

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

7 days ago

ಮತದಾನಕ್ಕೆ ಕೌಂಟ್‌ಡೌನ್ | ಮತಗಟ್ಟೆಗಳಿಗೆ ಮತಯಂತ್ರ ಇತರ ಪರಿಕರಗಳೊಂದಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…

7 days ago

Arecanut Today Price | ಮೇ 5ರ ಅಡಿಕೆ ರೇಟ್

ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

1 week ago

ಕಾಂಗ್ರೆಸ್ ಮೀಸಲಾತಿ ಜಾರಿಗೊಳಿಸಿದ್ದರಿಂದ ಕೆಳ ವರ್ಗದವರಿಗೂ ಸರ್ಕಾರಿ ಉದ್ಯೋಗ ಲಭಿಸಿದೆ ; ಬೇಳೂರು ಗೋಪಾಲಕೃಷ್ಣ

ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…

1 week ago