ಪೋಷಕರು ಬುದ್ಧಿವಾದ ಹೇಳಿದಕ್ಕೆ ವಿಷ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ !

ಶೃಂಗೇರಿ : ಮನೆಯಲ್ಲಿ ಬುದ್ದಿವಾದ ಹೇಳಿದ್ದಕ್ಕೆ ಪದವಿ ವಿದ್ಯಾರ್ಥಿನಿಯೋರ್ವಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಬೇಗಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರಾವರಿ ಎಂಬ ಗ್ರಾಮದಲ್ಲಿ ನಡೆದಿದೆ.

ಮೃತ ಯುವತಿಯನ್ನು ಶೃಂಗೇರಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಸುರಕ್ಷಾ (19) ಎಂದು ಗುರುತಿಸಲಾಗಿದೆ.

ಸುರಕ್ಷಾ ಗಣೇಶ ಹಬ್ಬಕ್ಕೆಂದು ಮನೆಗೆ ತೆರಳಿದ್ದಾಗ, ಪೋಷಕರು ಹಲವು ವಿಷಯದಲ್ಲಿ ಬುದ್ದಿವಾದ ಹೇಳಿದ್ದರು. ಇದರಿಂದ ಮನನೊಂದು ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಶೃಂಗೇರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ಬಿ.ಎ. ವ್ಯಾಸಂಗ ಮಾಡುತ್ತಿದ್ದ ಸುರಕ್ಷಾ ಸಚ್ಚಿದಾನಂದಪುರದ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಉಳಿದು ಕಾಲೇಜಿಗೆ ತೆರಳುತ್ತಿದ್ದಳು. ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋದಾಗ ಪೋಷಕರು ಹಲವು ವಿಚಾರಗಳಲ್ಲಿ ಬುದ್ಧಿವಾದ ಹೇಳಿದ್ದರು. ಇದರಿಂದ ಮನನೊಂದ ಸುರಕ್ಷಾ ಮನೆಯಲ್ಲಿ ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದಳು. ಕೂಡಲೇ ಆಕೆಯನ್ನು ಕೊಪ್ಪ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಆಸ್ಪತ್ರೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

3 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

7 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

7 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

9 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

10 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

17 hours ago