ಪ್ರವಾಸಕ್ಕೆ ಬಂದಿದ್ದ ಯುವಕ ನಾಪತ್ತೆ ಪ್ರಕರಣ ಸುಖಾಂತ್ಯ

ಮೂಡಿಗೆರೆ: ತಾಲೂಕಿನ ಐತಿಹಾಸಿಕ ಹಾಗೂ ಪ್ರವಾಸಿ ತಾಣ ದೇವರಮನೆ ಪ್ರವಾಸಕ್ಕೆ ಬಂದಿದ್ದ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ದೀಕ್ಷಿತ್ (27) ಅಕ್ಟೋಬರ್ 10 ರಂದು ಮಂಗಳವಾರ ಸಂಜೆ ನಾಪತ್ತೆಯಾಗಿದ್ದ. ಇದೀಗ ಇಂದು ಬೆಳಗ್ಗೆ ಮನೆಯ ಹತ್ತಿರದ ಮೋರಿ ಬಳಿ ಕುಳಿತಿದ್ದನ್ನು ಊರವರು ಪತ್ತೆ ಹಚ್ಚಿ ಮನೆಗೆ ಸೇರಿಸಿದ್ದಾರೆ.

ಪ್ರಕರಣ ಸಂಬಂಧಿಸಿದಂತೆ ಸ್ಥಳೀಯರು ಹಾಗೂ ಬಣಕಲ್ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಹುಡುಕಾಟ ನಡೆಸಿದ್ದರು.

ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಅರಂತೊಟ್ಟು ದೀಕ್ಷಿತ್ ಪೂಜಾರಿ, ಸಂಪಾಜೆ ನಿವಾಸಿ ದೀಕ್ಷಿತ್ ಗೌಡ, ಜಾರ್ಲೋಟ್ಟು ನಿವಾಸಿ ಕಿರೋತ್ ಪೂಜಾರಿ, ಅಡೆಂಕಿಲೊಟ್ಟು‌ ನಿವಾಸಿ ಸುದರ್ಶನ್ ಗೌಡ ಒಂದೇ ಊರಿನವರಾಗಿದ್ದು ಇವರೆಲ್ಲ ದೇವರ ಮನೆ ಕಾರಿನಲ್ಲಿ ಹೋಗಿದ್ದರು. ದೇವರಮನೆಗೆ ಪ್ರವಾಸಕ್ಕೆ ಬಂದಿದ್ದು ಪ್ರವಾಸ ಮುಗಿಸಿ ಹಿಂದಿರುಗುವಾಗ ಯುವಕರ ನಡುವೆ ಯಾವುದೋ ವಿಚಾರದಲ್ಲಿ ಗಲಾಟೆ ನಡೆದು ಹೊಡೆದಾಟ ಮಾಡಿಕೊಂಡಿದ್ದರು. ನಂತರ‌ ಕೋಪದಿಂದ ದೀಕ್ಷಿತ್ ಪೂಜಾರಿ ಬೇರೆಯಾಗಿ ಹೋಗಿದ್ದ. ದೇವರ ಮನೆ ಸುತ್ತಮುತ್ತ ಮಂಜು ಕವಿದಿದ್ದರಿಂದ ಹುಡುಕಾಟಕ್ಕೆ ಅಡಚಣೆಯಾಗಿದ್ದು ಇಂದು ಕಾರ್ಯಾಚರಣೆ ಮುಂದುವರೆಸಿದ್ದರು.

ಇದೀಗ ಯುವಕ ಬೇರೆ ವಾಹನದ ಮೂಲಕ ಊರಿಗೆ ಮರಳಿ ಪತ್ತೆಯಾಗಿರುವ ಬಗ್ಗೆ ಬಣಕಲ್ ಪೊಲೀಸರಿಗೆ ಮನೆ ಮಂದಿ ಮಾಹಿತಿ ನೀಡಿದ್ದಾರೆ. ಇದರೊಂದಿಗೆ ಯುವಕನ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದೆ.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

4 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

4 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

5 days ago