ಬರಗಾಲ ಪೀಡಿತ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸಚಿವ ಕೆ.ಜೆ. ಜಾರ್ಜ್ ಸೂಚನೆ

ಕೊಪ್ಪ: ಬರಗಾಲ (Droughts) ಪೀಡಿತ ಪ್ರದೇಶಗಳಲ್ಲಿ ಪ್ರಸ್ತುತ ಯಾವುದೇ ರೀತಿಯ ಮೂಲಭೂತ ಸೌಕರ್ಯಗಳ ಕೊರತೆಯಾಗದಂತೆ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುವಂತೆ ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ (K.J. George) ಅಧಿಕಾರಿಗಳಿಗೆ ಸೂಚಿಸಿದರು.

ಕೊಪ್ಪ (Koppa) ತಾಲ್ಲೂಕಿನ ಪುರಭವನದಲ್ಲಿ ಮಂಗಳವಾರ ಶೃಂಗೇರಿ (Sringeri) ವಿಧಾನಸಭಾ ಕ್ಷೇತ್ರ ಹಾಗೂ ಮೂಡಿಗೆರೆ (Mudigere) ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬರ ನಿರ್ವಹಣೆ ಕುರಿತು ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬರ ಪರಿಹಾರ ಕಾಮಗಾರಿ ಹಾಗೂ ಕಾರ್ಯಕ್ರಮಗಳನ್ನು ವಿಳಂಬ ಮಾಡದೆ ಅಧಿಕಾರಿಗಳು ಅನುಷ್ಠಾನಗೊಳಿಸಬೇಕು. ಪ್ರತಿ ಗ್ರಾಮ ಮತ್ತು ಪಟ್ಟಣಗಳಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮ ವಹಿಸಬೇಕು. ದನಕರುಗಳಿಗೆ ಅಗತ್ಯವಿರುವ ಮೇವು 21 ರಿಂದ 23 ವಾರಗಳಿಗೆ ಸಾಕಾಗುವಷ್ಟು ಇದ್ದು, ಮುಂದೆ ಮೇವಿಗೆ ಕೊರತೆಯಾಗದಂತೆ ರೈತರಿಗೆ ಮೇವು ಕಿಟ್‌ಗಳನ್ನು ವಿತರಿಸಿ ನಮ್ಮ ಜಿಲ್ಲೆಗೆ ಸಾಕಾಗುವಷ್ಟು ಮೇವನ್ನು ಬೆಳೆಯಬೇಕು. ಮಲೆನಾಡು ಪ್ರದೇಶದಲ್ಲಿ ಮೇವು ಬೆಳೆಯಲು ಉತ್ತಮ ವಾತಾವರಣವಿದ್ದು, ಪಕ್ಕದ ಜಿಲ್ಲೆಯಿಂದ ಮೇವು ಪೂರೈಕೆಗೆ ಬೇಡಿಕೆ ಬಂದ ಸಂದರ್ಭದಲ್ಲಿ ಮೇವು ಲಭ್ಯತೆಗನುಗುಣವಾಗಿ ಮೇವು ಬೆಳೆದು ಒದಗಿಸುವಂತೆ ತಿಳಿಸಿದ ಸಚಿವರು  ನಮ್ಮ ಜಿಲ್ಲೆಗೆ ಕೊರತೆಯಾಗದಂತೆ ಎಚ್ಚರವಹಿಸಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮಾತನಾಡಿ, ಜಿಲ್ಲೆಯಲ್ಲಿ ಬರ ನಿರ್ವಹಣೆಗೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇಲ್ಲಿಯವರೆಗೆ ಕುಡಿಯುವ ನೀರು, ಮೇವು ಹಾಗೂ ಇತರೆ ಸೌಲಭ್ಯಗಳ ಕೊರತೆ ಕಂಡು ಬಂದಿಲ್ಲ. ಕುಡಿಯುವ ನೀರಿಗೆ ಸಮಸ್ಯೆ ಕಂಡು ಬಂದರೆ ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡಲು ಹಾಗೂ ಖಾಸಗಿ ಬೋರ್‌ವೆಲ್ ಗಳನ್ನು ಗುರುತಿಸಲಾಗಿದೆ.

ದನಕರುಗಳಿಗೆ ಜಿಲ್ಲೆಯಲ್ಲಿ ಮುಂದಿನ ೪೮ ವಾರಗಳಿಗೆ ಸಾಕಾಗುವಷ್ಟು ಮೇವು ಲಭ್ಯವಿದೆ. ನೀರಿನ ಸೌಲಭ್ಯವಿರುವ ರೈತರಿಗೆ ಪಶುಪಾಲನೆ ಇಲಾಖೆಯ ಮೂಲಕ ಉಚಿತವಾಗಿ ಮೇವು ಕಿಟ್‌ಗಳನ್ನು ವಿತರಿಸಲಾಗುತ್ತಿದೆ ಎಂದರು.

ಕುಡಿಯುವ ನೀರಿಗಾಗಿ ಕೊರೆಯುವ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಬದಲು ಸೋಲಾರ್ ವ್ಯವಸ್ಥೆ ಆಳವಡಿಸುವಂತೆ ತಿಳಿಸಿದ ಸಚಿವರು ಮಳೆಗಾಲ ಮುಗಿದ ನಂತರ ರಸ್ತೆಗಳ ದುರಸ್ತಿಗೆ ಕ್ರಮವಹಿಸಲಾಗುವುದು. ಅಧಿಕಾರಿಗಳು ತಮ್ಮ ಕ್ಷೇತ್ರದಲ್ಲಿ ಯಾವುದೇ ಸಮಸ್ಯೆಗಳು ಕಂಡು ಬಂದರೆ ಕೂಡಲೇ ಅದನ್ನು ಬಗೆಹರಿಸಲು ಕ್ರಮವಹಿಸಬೇಕು. ಒಂದು ವೇಳೆ ಜಟಿಲ ಸಮಸ್ಯೆಗಳಿದ್ದರೆ ಅದನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಪರಿಹರಿಸಲು ಕ್ರಮವಹಿಸಬೇಕು ಒಟ್ಟಿನಲ್ಲಿ ಜನರಿಗೆ ಯಾವುದೇ ಸಮಸ್ಯೆಯಾಗದಂತೆ ಕರ್ತವ್ಯ ನಿರ್ವಹಿಸುವಂತೆ ಸೂಚಿಸಿದರು.

ಶೃಂಗೇರಿ ಕ್ಷೇತ್ರ ಶಾಸಕ ಟಿ.ಡಿ. ರಾಜೇಗೌಡ ಮಾತನಾಡಿ, ಕ್ಷೇತ್ರದಲ್ಲಿ ಯಾವುದೇ ಸಂದರ್ಭದಲ್ಲಿ ಏನೇ ಸಮಸ್ಯೆಗಳು ಕಂಡು ಬಂದರು. ಅವುಗಳನ್ನು ಶೀಘ್ರವಾಗಿ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಗೋಪಾಲಕೃಷ್ಣ ಬಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಟೆ, ಕೊಪ್ಪ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ನಂದೀಶ್, ಜಿಲ್ಲಾ ಮಟ್ಟದ ಹಾಗೂ ಶೃಂಗೇರಿ, ಮೂಡಿಗೆರೆ ತಾಲ್ಲೂಕುಗಳ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

Malnad Times

Share
Published by
Malnad Times

Recent Posts

BIG BREAKING NEWS ; ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ರಿಪ್ಪನ್‌ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ. ತಿಮ್ಮಪ್ಪ ಬಿನ್…

1 hour ago

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

14 hours ago

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

17 hours ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

17 hours ago

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

22 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

24 hours ago