ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ | ತಾಯಿ ಸೇರಿ ನಾಲ್ವರು ಆರೋಪಿಗಳಿಗೆ ₹ 25 ಸಾವಿರ ದಂಡದ ಜೊತೆಗೆ 20 ವರ್ಷ ಜೈಲು ಶಿಕ್ಷೆ !

ಶೃಂಗೇರಿ: ಹೆತ್ತ ತಾಯಿಯೇ ತನ್ನ ಅಪ್ರಾಪ್ತ ಮಗಳನ್ನ ವೇಶ್ಯಾವಾಟಿಕೆಗೆ ದೂಡಿದ ಪ್ರಕರಣಕ್ಕೆ ಸಂಬಂಧಿಸಿ ಅಪ್ರಾಪ್ತೆಯ ತಾಯಿ ಸೇರಿದಂತೆ ನಾಲ್ವರು ಆರೋಪಿಗಳಿಗೆ ಜಿಲ್ಲಾ ಹೆಚ್ಚುವರಿ ಸತ್ರ ನ್ಯಾಯಾಲಯ ಶಿಕ್ಷೆಯನ್ನು ಪ್ರಕಟಿಸಿದೆ.

ಏನಿದು ಪ್ರಕರಣ ?
ಹೆತ್ತ ತಾಯಿಯೇ ತನ್ನ ಮಗಳನ್ನು ವೇಶ್ಯಾವಾಟಿಕೆಗೆ ದೂಡಿ 2020ರ ಸೆಪ್ಟೆಂಬರ್ ನಿಂದ 2021ರ ಜನವರಿವರೆಗೆ ಬ್ಲಾಕ್ ಮೇಲೆ ಮಾಡಿ ಅತ್ಯಾಚಾರ ಎಸಗಲಾಗಿತ್ತು, ಈ ಪ್ರಕರಣಕ್ಕೆ ಸಂಬಂಧಿಸಿ 2021ರ ಜನವರಿ 27ರಂದು ಪ್ರಕರಣ ದಾಖಲಾಗಿತ್ತು, ಅದರಂತೆ ಒಂದೇ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು 39 ಎಫ್.ಐ.ಆರ್ ದಾಖಲಿಸಿ 53 ಜನರ ವಿರುದ್ದ ಪ್ರಕರಣ ದಾಖಲಿಸಿದ್ದರು.

ವಿಚಾರಣೆ ನಡೆಸಿದ ಜಿಲ್ಲಾ ಹೆಚ್ಚುವರಿ ಸತ್ರ ನ್ಯಾಯಾಲಯ 53 ಮಂದಿಯಲ್ಲಿ ನಾಲ್ಕು ಜನರ ಮೇಲಿನ ಅಪರಾಧವನ್ನ ಸಾಬೀತು ಮಾಡಿದ್ದ ಕೋರ್ಟ್ ಉಳಿದ 49 ಮಂದಿಯನ್ನು ಪ್ರಕರಣದಿಂದ ಖುಲಾಸೆ‌ಗೊಳಿಸಿದೆ.

ನ್ಯಾಯಮೂರ್ತಿ ಶಾಂತಣ್ಣ ಆಳ್ವ ಅವರು ತೀರ್ಪು ನೀಡಿದ್ದು ಅದರಂತೆ ಬಾಲಕಿ ತಾಯಿ ಗೀತಾ, ಗಿರೀಶ್, ದೇವಿಶರಣ್ ಗೆ ತಲಾ 25 ಸಾವಿರ ದಂಡ ಮತ್ತು 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ್ದು ಇನ್ನೋರ್ವ ಆರೋಪಿ ಅಭಿನಂದನ್ ಅಲಿಯಾಸ್ ಸ್ಮಾಲ್ ಅಭಿಗೆ 25 ಸಾವಿರ ದಂಡ ಮತ್ತು 22 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

16 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

20 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

20 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

22 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

23 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

1 day ago