ಅಜ್ಜಂಪುರ: ಬೊಲೆರೋ ಮತ್ತು ಸ್ಕೂಟಿ ಮಧ್ಯೆ ಒಂದು ರಸ್ತೆ ಅಪಘಾತ ಸಂಭವಿಸಿದ್ದು, ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ ದಂಪತಿಗಳು ಸ್ಥಳದಲ್ಲೇ ಸಾವನ್ನಪ್ಪಿರು ಘಟನೆ ತಾಲ್ಲೂಕಿನ ಹಿರೇಕಾನವಂಗಲ ಗ್ರಾಮದ ಬಳಿ ನಡೆದಿದೆ.
ಅಪಘಾತದಲ್ಲಿ ತಾಲ್ಲೂಕಿನ ಸಿದ್ಧಾಪುರ ಗ್ರಾಮದ
ಅರ್ಜುನ್ ಹಾಗೂ ಶ್ವೇತಾ ಮೃತಪಟ್ಟ ದುರ್ದೈವಿ ದಂಪತಿಗಳು ಎಂದು ತಿಳಿದು ಬಂದಿದೆ.
ಊರಿನಿಂದ ಅಜ್ಜಂಪುರಕ್ಕೆ ಸಂಬಂಧಿಕರ ಮನೆಗೆ ದಂಪತಿಗಳು ತೆರಳುತ್ತಿದ್ದರು ಎಂದು ತಿಳಿದುಬಂದಿದೆ. ಬೊಲೆರೋ ಡಿಕ್ಕಿ ಹೊಡೆದ ರಭಸಕ್ಕೆ ಸ್ಕೂಟಿ ಸಂಪೂರ್ಣ ನಜ್ಜುಗುಜ್ಜಾಗಿದೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ ಸ್ಕೂಟಿ ಸವಾರಿ ಮಾಡುತ್ತಿದ್ದ ಅರ್ಜುನ್ ಹೆಲ್ಮೆಟ್ ಧರಿಸಿರಲಿಲ್ಲ ಹಾಗೂ ಕಾರು ಚಾಲಕನ ಅತಿ ವೇಗ ಹಾಗೂ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.
ಬೊಲೆರೋ ಚಾಲಕ ದಾವಣಗೆರೆ ಮೂಲದವನು ಎನ್ನಲಾಗುತ್ತಿದ್ದು, ಚಾಲಕನನ್ನು ಬಂಧಿಸಿರುವ ಅಜ್ಜಂಪುರ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಅಪಘಾತದಲ್ಲಿ ಮೃತಪಟ್ಟ ದಂಪತಿಗಳು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದ್ದು, ಆಸ್ಪತ್ರೆ ಬಳಿ ಜನರು ಜಮಾಯಿಸಿದ ಕಾರಣ ಮುಖ್ಯ ರಸ್ತೆಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಈ ಸಂಬಂಧ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…