ಮಕ್ಕಳು ದೇಶದ ಅಮೂಲ್ಯ ಸಂಪತ್ತು ; ರಂಭಾಪುರಿ ಶ್ರೀಗಳು

ಎನ್.ಆರ್.ಪುರ: ಮಕ್ಕಳ ಮನಸ್ಸು ಪರಿಶುದ್ಧವಾದುದು ಮತ್ತು ಪವಿತ್ರವಾದುದು. ಬೆಳೆಯುವ ಮಕ್ಕಳಿಗೆ ಯೋಗ್ಯ ಸಂಸ್ಕಾರ ಮತ್ತು ಉತ್ತಮ ಮಾರ್ಗದರ್ಶನ ಕೊಟ್ಟರೆ ಆದರ್ಶ ವ್ಯಕ್ತಿಗಳಾಗಿ ಬಾಳಲು ಸಾಧ್ಯ. ಮಕ್ಕಳು ದೇಶದ ಅಮೂಲ್ಯ ಸಂಪತ್ತು ಎಂದು
ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.

ಅವರು ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಮಹಾರಥೋತ್ಸವದ ಅಂಗವಾಗಿ ಜರುಗಿದ ಎನ್.ಆರ್.ಪುರ ತಾಲೂಕ ಪ್ರಥಮ ಮಕ್ಕಳ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.

ಜನ್ಮ ಕೊಟ್ಟ ತಂದೆ ತಾಯಿಗಳು ಮಕ್ಕಳಿಗಾಗಿ ಆಸ್ತಿ ಮಾಡುವುದರ ಬದಲಾಗಿ ಹುಟ್ಟಿದ ಮಕ್ಕಳಿಗೆ ಯೋಗ್ಯ ಶಿಕ್ಷಣ ಸಂಸ್ಕಾರ ಕೊಡುವುದರ ಮೂಲಕ ಬೆಳೆಸಬೇಕು. ಐದು ವರುಷದ ವರೆಗೆ ಮಕ್ಕಳನ್ನು ಹೂವಿನಂತೆ ಜೋಪಾನ ಮಾಡಬೇಕು. ಹತ್ತು ತುಂಬುವ ಸಂದರ್ಭದಲ್ಲಿ ಮಕ್ಕಳು ತಪ್ಪು ಮಾಡಿದರೆ ಒಂದು ಪೆಟ್ಟು ಕೊಟ್ಟು ತಿದ್ದುವ ಕೆಲಸ ಮಾಡಬೇಕು. ಹದಿನಾರು ಮೀರಿದ ಸಂದರ್ಭದಲ್ಲಿ ಮಕ್ಕಳನ್ನು ಸಹೋದರರಂತೆ ಕಂಡು ಪ್ರೋತ್ಸಾಹಿಸಬೇಕು. ಯಾವ ಯಾವ ಮಕ್ಕಳಲ್ಲಿ ಎಂಥ ಅದ್ಭುತ ಶಕ್ತಿಯಿದೆಯೋ ಅದನ್ನು ಗುರುತಿಸಿ ಸ್ಫೂರ್ತಿ ತುಂಬುವ ಕಾರ್ಯ ಮಾಡಬೇಕು. ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ ಎಂಬ ಗಾದೆ ಮಾತೊಂದಿದೆ. ಕಿರಿ ವಯಸ್ಸಿನಲ್ಲಿ ಕೊಟ್ಟ ಸಂಸ್ಕಾರ ಜೀವನ ಕೊನೆ ವರೆಗೆ ಇರುತ್ತವೆ. ಅವರ ಉಜ್ವಲ ಭವಿಷ್ಯಕ್ಕೆ ಕಾರಣವಾಗುತ್ತವೆ. ಉತ್ತಮ ಶಿಕ್ಷಣದೊಂದಿಗೆ ಮಕ್ಕಳು ದೇಶದ ಭಾವೀ ಪ್ರಜೆಗಳಾಗಿ ಬಾಳಲಿ. ಶ್ರೀ ಪೀಠದ ಜಾತ್ರಾ ಮಹೋತ್ಸವದ ಸುಸಂದರ್ಭದಲ್ಲಿ ನರಸಿಂಹರಾಜಪುರ ತಾಲ್ಲೂಕ ಪ್ರಥಮ ಮಕ್ಕಳ ಸಾಹಿತ್ಯ ಸಮ್ಮೇಳನ ಜರುಗುತ್ತಿರುವುದು ತಮಗೆ ಅತೀವ ಸಂತೋಷವನ್ನು ಉಂಟು ಮಾಡಿದೆ. ಶ್ರೀ ಜಗದ್ಗುರು ರಂಭಾಪುರಿ ಪೀಠ ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವನ್ನು ನಿರಂತರವಾಗಿ ಮಾಡಿಕೊಂಡು ಬಂದಿದೆ. ಇಂದಿನ ಮಕ್ಕಳ ಸಮ್ಮೇಳನದ ಅಧ್ಯಕ್ಷೆ ಕು.ಬಿ.ಎ.ವರ್ಷಿಣಿ, ಸಹ ಅಧ್ಯಕ್ಷ ಕು, ಮನೋಜ್ ಎಫ್.ಎ., ಕು.ರಕ್ಷಿತ ಹಾಗೂ ಕಲಾ ಇವರಲ್ಲಿರುವ ಪ್ರತಿಭೆಯನ್ನು ಕಂಡು ಶ್ರೀ ಜಗದ್ಗುರುಗಳು ಸಂತೋಷವಾಗಿದೆ. ಈ ನಾಲ್ಕೂ ಮಕ್ಕಳಿಗೆ ಈ ವರ್ಷದ ಅಬ್ಬಿಗೇರಿ ದಸರಾ ಮಹೋತ್ಸವದಲ್ಲಿ ಖಂಡಿತವಾಗಿ ಮಾತನಾಡಲು ಅವಕಾಶ ಕಲ್ಪಿಸಿಕೊಡಲಾಗುವುದು. ಅಲ್ಲದೇ ಈ ನಾಲ್ಕೂ ಮಕ್ಕಳ ಮುಂದಿನ ವಿದ್ಯಾಭ್ಯಾಸಕ್ಕಾಗಿ ಶ್ರೀ ಪೀಠದಿಂದ ಆರ್ಥಿಕ ಸಹಾಯವನ್ನು ಕಲ್ಪಿಸಿಕೊಡುತ್ತೇವೆ ಎಂದರು.

ಸಮಾರಂಭವನ್ನು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು(ರಿ)ಬೆಂಗಳೂರು ಇದರ ರಾಜ್ಯಾಧ್ಯಕ್ಷ ಸಿ.ಎನ್.ಅಶೋಕ ಉದ್ಘಾಟಿಸಿ ಮಾತನಾಡಿ ಜಾತಿ ಮತ ಪಂಥಗಳ ಭೇದ ಅರಿಯದೇ ಜನಿಸುವ ಮಗು ಮುಂದಿನ ದಿನಗಳಲ್ಲಿ ವಿಶ್ವ ಮಾನವನಾಗಿ ಬೆಳೆಯಬೇಕೆಂಬುದು ನಮ್ಮ ಉದ್ದೇಶವಾಗಿದೆ. ಮಕ್ಕಳಲ್ಲಿ ಸಾಹಿತ್ಯದ ಅಭಿರುಚಿ ಬೆಳೆಯಬೇಕು. ಉತ್ತಮ ಸಂಸ್ಕಾರದೊAದಿಗೆ ಉನ್ನತ ಶಿಕ್ಷಣ ಪಡೆದ ಮಕ್ಕಳು ದೇಶವನ್ನು ಕಟ್ಟುವವರಾಗಬೇಕು ಎಂದರು.

ಮಕ್ಕಳ ಸಾಹಿತ್ಯ ಪರಿಷತ್ತು(ರಿ) ಚಿಕ್ಕಮಗಳೂರು ಕಾರ್ಯದರ್ಶಿ ಹೂ.ವೀ.ಸಿದ್ಧೇಶ ಪ್ರಾಸ್ತಾವಿಕ ಮಾತನಾಡಿದರು. ಸಮ್ಮೇಳನದ ಅಧ್ಯಕ್ಷೆ ಬಾಳೆಹೊನ್ನೂರು ನಿರ್ಮಲ ಕಾನ್ವೆಂಟಿನ ಕು.ಬಿ.ಎ.ವರ್ಷಿಣಿ ಅಧ್ಯಕ್ಷೀಯ ಭಾಷಣ ಮಾಡಿದರು. ಸಹ ಅಧ್ಯಕ್ಷ ಶ್ರೀ ರಂಭಾಪುರಿ ಪೀಠದ ಶ್ರೀ ಜ.ರುದ್ರಮುನೀಶ್ವರ ವಸತಿ ಪ್ರೌಢ ಶಾಲೆಯ ಕು, ಮನೋಜ್ ಎಫ್.ಎ. ಉಪಸ್ಥಿತರಿದ್ದರು.

ಸುಳ್ಳ ಪಂಚಗೃಹ ಹಿರೇಮಠದ ಶಿವಸಿದ್ಧರಾಮೇಶ್ವರ ಶಿವಾಚಾರ್ಯ ಸ್ವಾಮಿಗಳು ನೇತೃತ್ವ ವಹಿಸಿದ್ದರು. ಬೇರುಗಂಡಿ ಬೃಹನ್ಮಠದ ರೇಣುಕ ಮಹಂತ ಶಿವಾಚಾರ್ಯ ಸ್ವಾಮಿಗಳು ಉಪದೇಶಾಮೃತ ನೀಡಿದರು.

ಚಿಕ್ಕಮಗಳೂರು ಕ.ರಾ.ಮಕ್ಕಳ ಸಾ.ಪ. ಅಧ್ಯಕ್ಷ ಮಲ್ಲಿಗೆ ಸುದೀರ್, ಹಾಸನ ಅಧ್ಯಕ್ಷ ಅಧ್ಯಕ್ಷ ಗಂಗಾಧರ್, ಬಿ.ಕಣಬೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸದಾಶಿವ ಆಚಾರಿ, ಕೆ.ಟಿ. ವೆಂಕಟೇಶ್, ಮುಖ್ಯ ಅತಿಥಿಗಳಾಗಿದ್ದರು.

ನವದೆಹಲಿಯ ಪ್ರಥಮ ರಾಷ್ಟ್ರೀಯ ಹೊರನಾಡು ಮಕ್ಕಳ ಸಮ್ಮೇಳನದ ಸಹ-ಅಧ್ಯಕ್ಷೆ ಕು.ರಕ್ಷಿತ ಹಾಗೂ ಕಲಾ ಇವರಿಗೆ ಶ್ರೀ ರಂಭಾಪುರಿ ಜಗದ್ಗುರುಗಳು ಗುರುರಕ್ಷೆ ನೀಡಿ ಆಶೀರ್ವದಿಸಿದರು. ಚಿಕ್ಕಮಗಳೂರು ಮಾಧ್ಯಮ ಸಂಸ್ಕೃತಿ ಪ್ರತಿಷ್ಠಾನದ ಅಧ್ಯಕ್ಷ ಚಿ.ಸ.ಪ್ರಭುಲಿಂಗಶಾಸ್ತ್ರಿ ಸರ್ವರನ್ನು ಸ್ವಾಗತಿಸಿದರು.

ವಿಠಲಾಪುರದ ಗಂಗಾಧರಸ್ವಾಮಿ ಹಿರೇಮಠ ಭಕ್ತಿ ಗೀತೆ ಹಾಡಿದರು. ಶಿಕ್ಷಕ ವೀರೇಶ ಕುಲಕರ್ಣಿ ನಿರೂಪಿಸಿದರು.
ಇದಕ್ಕೂ ಪೂರ್ವದಲ್ಲಿ ಧ್ವಜಾರೋಹಣ ಮತ್ತು ಹರಿದ್ರಾಲೇಪನ ಕಾರ್ಯಗಳು ಜರುಗಿದವು.

Malnad Times

Share
Published by
Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

18 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

22 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

22 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

1 day ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

1 day ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

1 day ago