ಮಾಜಿ ಸಚಿವ ಡಿ.ಬಿ. ಚಂದ್ರೇಗೌಡ ಇನ್ನಿಲ್ಲ !

ಮೂಡಿಗೆರೆ : ಹಿರಿಯ ರಾಜಕಾರಣಿ, ಮಾಜಿ ಸಚಿವ ಡಿ.ಬಿ ಚಂದ್ರೇಗೌಡ (87) ಸೋಮವಾರ ಮಧ್ಯರಾತ್ರಿ ದಾರದಹಳ್ಳಿಯ ತಮ್ಮ ನಿವಾಸ ‘ಪೂರ್ಣಚಂದ್ರ’ದಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು. ಪತ್ನಿ ‍ಪೂರ್ಣಿಮಾ, ನಾಲ್ವರು ಪುತ್ರಿಯರಿದ್ದಾರೆ. ಚಂದ್ರೇಗೌಡ ಅವರ ಪಾರ್ಥೀವ ಶರೀರವನ್ನು ಮಂಗಳವಾರ ಮಧ್ಯಾಹ್ನ 2 ರಿಂದ ಸಂಜೆ 6 ರವರೆಗೆ ಮೂಡಿಗೆರೆ ಅಡ್ಯಂತಾಯ ರಂಗದಮಂದಿರದಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುವುದು. ಬುಧವಾರ ದಾರದಹಳ್ಳಿಯ ಅವರ ಪೂರ್ಣಚಂದ್ರ ಎಸ್ಟೇಟ್‌ನಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ. ತಾಲ್ಲೂಕಿನ ದಾರದಹಳ್ಳಿ ಗ್ರಾಮದ ಪಟೇಲ್ ಭೈರೇಗೌಡ … Continue reading ಮಾಜಿ ಸಚಿವ ಡಿ.ಬಿ. ಚಂದ್ರೇಗೌಡ ಇನ್ನಿಲ್ಲ !