ಮಾ. 22ರಂದು ಶ್ರೀರೇಣುಕಾಚಾರ್ಯ ಜಯಂತಿ | ಯುಗಮಾನೋತ್ಸವ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಮಹಾರಥೋತ್ಸವ ಹಾಗೂ ಶ್ರೀ ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿ ಪ್ರದಾನ ಸಮಾರಂಭ

ಎನ್.ಆರ್.ಪುರ : ಬಾಳೆಹೊನ್ನೂರು ಶ್ರೀ ಜಗದ್ಗುರು ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠದಲ್ಲಿ ಮಾರ್ಚ 20ರಿಂದ 26ರ ವರೆಗೆ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಜಾತ್ರಾ ಮಹೋತ್ಸವ ಜರುಗಲಿದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮಾ. 20ರ ಬೆಳಿಗ್ಗೆ 11.30ಕ್ಕೆ ಎನ್.ಆರ್.ಪುರ ತಾಲೂಕ ಪ್ರಥಮ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ರಾಜ್ಯಾಧ್ಯಕ್ಷ ಸಿ.ಎನ್.ಅಶೋಕ ಉದ್ಘಾಟಿಸುವರು. ಚಿಕ್ಕಮಗಳೂರು ಜಿಲ್ಲಾ ಅಧ್ಯಕ್ಷ ಮಲ್ಲಿಗೆ ಸುದೀರ್, ಹಾಸನ ಜಿಲ್ಲಾ ಅಧ್ಯಕ್ಷ ಅಧ್ಯಕ್ಷ ಗಂಗಾಧರ್, ಗ್ರಾ.ಪಂ.ಅಧ್ಯಕ್ಷ ಸದಾಶಿವ ಆಚಾರಿ, ಕೆ.ಟಿ.ವೆಂಕಟೇಶ್, ನವದೆಹಲಿಯ ಕು.ರಕ್ಷಿತ ಮುಖ್ಯ ಅತಿಥಿಗಳಾಗಿರುವರು.

ಸುಳ್ಳದ ಶಿವಸಿದ್ಧರಾಮೇಶ್ವರ ಶ್ರೀಗಳು, ಬೇರುಗಂಡಿ ರೇಣುಕ ಮಹಂತ ಶ್ರೀಗಳು ಉಪಸ್ಥಿತರಿರುವರು. ಸಂಜೆ 6.30ಕ್ಕೆ ಎನ್.ಆರ್.ಪುರ ತಾಲೂಕ ಪ್ರಥಮ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ಚಿಕ್ಕಮಗಳೂರು ಕ.ಸಾ.ಪ.ಅಧ್ಯಕ್ಷ ಸೂರಿ ಶ್ರೀನಿವಾಸ ಉದ್ಘಾಟಿಸುವರು. ಎಡೆಯೂರು ರೇಣುಕ ಶ್ರೀಗಳು ಸ್ಟೇಷನ್ ಬಬಲಾದ್ ಶಿವಮೂರ್ತಿ ಶ್ರೀಗಳು ಉಪದೇಶಾಮೃತ ನೀಡುವರು.

ಕ.ರಾ.ಮ.ಸಾ.ಪರಿಷತ್ತು ಕಾರ್ಯಾಧ್ಯಕ್ಷ ಸಿ.ಮಹದೇವ, ಜಿಲ್ಲಾ ಅಧ್ಯಕ್ಷ ಮಲ್ಲಿಗೆ ಸುದೀರ್, ಜಿ.ಪಂ.ಮಾಜಿ ಉಪಾಧ್ಯಕ್ಷ ಎಂ.ಎಸ್. ಚನ್ನಕೇಶವ ಮುಖ್ಯ ಅತಿಥಿಗಳಾಗಿರುವರು. ದಿನಾಂಕ 21ರಂದು ಸಂಜೆ ಸಾವಯವ ಕೃಷಿ-ಒಂದು ಚಿಂತನಗೋಷ್ಠಿಯನ್ನು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಉದ್ಘಾಟಿಸಲಿದ್ದು ಮುಖ್ಯ ಅತಿಥಿಗಳಾಗಿ ರಾಜ್ಯ ಬಿ.ಜೆ.ಪಿ.ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕ ಜಗದೀಶ ಗುಡಗುಂಟಿ, ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಮಾಜಿ ಶಾಸಕ ಕೆ.ಎಸ್.ಲಿಂಗೇಶ್, ರೈತ ಮುಖಂಡ ಹೆಚ್.ಆರ್.ಬಸವರಾಜ್, ನಂದಗೋಕುಲದ ಆನಂದ ಆಷೀಷರ್, ಶಿವಮೊಗ್ಗದ ಎಸ್.ಎಸ್.ಜ್ಯೋತಿಪ್ರಕಾಶ್, ಎನ್.ಜೆ. ರಾಜಶೇಖರ ಭಾಗವಹಿಸುವರು. ಬಂಕಾಪುರ ರೇವಣಸಿದ್ಧೇಶ್ವರ ಶ್ರೀಗಳು, ಹುಕ್ಕೇರಿ ಚಂದ್ರಶೇಖರ ಶ್ರೀಗಳು, ನೆಗಳೂರು ಗುರುಶಾಂತೇಶ್ವರ ಶ್ರೀಗಳು ಪಾಲ್ಗೊಳ್ಳುವರು.

ಮಾ. 22 ರಂದು ಬೆಳಿಗ್ಗೆ 11.30ಕ್ಕೆ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ- ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಮಹಾರಥೋತ್ಸವ ಹಾಗೂ ಶ್ರೀ ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಉದ್ಘಾಟಿಸುವರು. ಬಾಗಲಕೋಟೆಯ ಡಾ|| ಮಹಾಜಬೀನ ಎಸ್.ಮಧುರಕರ ಇವರಿಗೆ 2024ನೇ ಸಾಲಿನ ಶ್ರೀ ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಮುಖ್ಯ ಅತಿಥಿಗಳಾಗಿ ಸಚಿವರಾದ ಕೆ.ಜೆ.ಜಾರ್ಜ್, ಈಶ್ವರ ಖಂಡ್ರೆ, ಲಕ್ಷ್ಮಿ ಹೆಬ್ಬಾಳಕರ, ಎನ್.ಎಸ್.ಬೋಸರಾಜ್, ಡಾ|| ಶರಣ ಪ್ರಕಾಶ ಪಾಟೀಲ, ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಟಿ.ಡಿ. ರಾಜೇಗೌಡರು, ಎ.ಬಿ.ಸುದರ್ಶನ್, ಹೆಚ್.ಬಿ. ರಾಜಗೋಪಾಲ, ಸುಧೀರ ಕುಮಾರ್ ಮುರೋಳಿ ಭಾಗವಹಿಸುವರು.

ಎಮ್ಮಿಗನೂರು ವಾಮದೇವ ಮಹಂತ ಶ್ರೀಗಳು, ಅಮ್ಮಿನಭಾವಿ ಅಭಿನವ ಶಾಂತಲಿಂಗ ಶ್ರೀಗಳು, ಸಿದ್ಧರಬೆಟ್ಟದ ವೀರಭದ್ರ ಶ್ರೀಗಳು, ಗೌರಿಗದ್ದೆ ಅವಧೂತ ಆಶ್ರಮದ ವಿನಯ ಗುರೂಜಿ ಉಪಸ್ಥಿತರಿರುವರು.

ಮಾ. 23ರಂದು ಸಂಜೆ ಯುವ ಜನಾಂಗದಲ್ಲಿ ಧರ್ಮ ಪ್ರಜ್ಞೆ-ರಾಷ್ಟ್ರ ಪ್ರಜ್ಞೆ ಸಮಾರಂಭವನ್ನು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವೆ ಕು.ಶೋಭಾ ಕರಂದ್ಲಾಜೆ, ಸಂಸದ ಪ್ರಜ್ವಲ ರೇವಣ್ಣ, ಮಾಜಿ ಸಚಿವ ಸಿ.ಸಿ.ಪಾಟೀಲ, ಶಾಸಕ ಹೆಚ್.ಕೆ.ಸುರೇಶ್, ಮಾಜಿ ಸಚಿವರಾದ ಸಿ.ಟಿ.ರವಿ, ಡಿ.ಎನ್.ಜೀವರಾಜ್, ಮಾಜಿ ಶಾಸಕರಾದ ಬೆಳ್ಳಿ ಪ್ರಕಾಶ, ಡಿ.ಎಸ್. ಸುರೇಶ ಆಗಮಿಸುವರು. ಸೂಡಿ ಡಾ|| ಕೊಟ್ಟೂರು ಬಸವೇಶ್ವರ ಶ್ರೀಗಳು, ಹರಪನಹಳ್ಳಿ ವರಸದ್ಯೋಜಾತ ಶ್ರೀಗಳು ಪಾಲ್ಗೊಳ್ಳುವರು.

ಮಾ. 24ರಂದು ಸಂಜೆ ಜಾನಪದ ಹಬ್ಬವನ್ನು ಜಾನಪದ ತಜ್ಞ ಡಾ.ರಾಮು ಮೂಲಗಿ ಉದ್ಘಾಟಿಸಲಿದ್ದು ಶಾಸಕರಾದ ಹೆಚ್.ಡಿ.ತಮ್ಮಯ್ಯ, ಡಿ.ಹೆಚ್.ಶ್ರೀನಿವಾಸ, ಮಾಜಿ ವಿ.ಪ.ಸದಸ್ಯೆ ಗಾಯತ್ರಿ ಶಾಂತೇಗೌಡರು, ಲಿಂಗಸುಗೂರು ಮಾತಾ ನಂದಿಕೇಶ್ವರಿ ಅಮ್ಮನವರು, ರೋಟರಿ ಸಂಸ್ಥೆ ಗವರ್ನರ್ ಕು.ಬಿ.ಸಿ.ಗೀತಾ, ಬೆಂಗಳೂರಿನ ಬೀರೂರು ಶಿವಸ್ವಾಮಿ ಮುಖ್ಯ ಅತಿಥಿಗಳಾಗಿರುವರು. ಮುಕ್ತಿಮಂದಿರದ ವಿಮಲ ರೇಣುಕ ಮುಕ್ತಿಮುನಿ ಶ್ರೀಗಳು, ಶಿರಕೋಳ ಗುರುಸಿದ್ದೇಶ್ವರ ಶ್ರೀಗಳು ಪಾಲ್ಗೊಳ್ಳುವರು.

ಮಾ.25ರಂದು ಸಂಜೆ ನೈತಿಕ ಮೌಲ್ಯಗಳ ಸಂರಕ್ಷಣೆ ಸಮಾರಂಭವನ್ನು ಮೈಸೂರು ಡಾ|| ಮುಮ್ಮಡಿ ಚಂದ್ರಶೇಖರ ಶ್ರೀಗಳು ಉದ್ಘಾಟಿಸುವರು. ಕವಲೇದುರ್ಗ ಮರುಳಸಿದ್ಧ ಶ್ರೀಗಳು, ಬೀರೂರು ರುದ್ರಮುನಿ ಶ್ರೀಗಳು, ಚಿಕ್ಕಮಗಳೂರು ಚಂದ್ರಶೇಖರ ಶ್ರೀಗಳು, ರಾಯಚೂರು ಶಾಂತಮಲ್ಲ ಶ್ರೀಗಳು, ಶ್ರೀನಿವಾಸ ಸರಡಗಿ ರೇವಣಸಿದ್ಧೇಶ್ವರ ಶ್ರೀಗಳು, ರಾಯಚೂರು ಅಭಿನವ ರಾಚೋಟೇಶ್ವರ ಶ್ರೀಗಳು ಉಪಸ್ಥಿತರಿರುವರು.

ಮಾ. 26ರಂದು ಭದ್ರಾ ನದಿ ತೀರದಲ್ಲಿ ಸುರಗಿ ಸಮಾರಾಧನೆಯೊಂದಿಗೆ ಸಮಾರಂಭ ಮಂಗಲಗೊಳ್ಳುವುದಾಗಿ ಶ್ರೀ ರಂಭಾಪುರಿ ಜಗದ್ಗುರುಗಳು ತಿಳಿಸಿದ್ದಾರೆ.

Malnad Times

Share
Published by
Malnad Times

Recent Posts

Rain Alert | ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…

1 week ago

Shivamogga Loksabha Constituency | ಮತದಾನಕ್ಕೆ ಸಕಲ ಸಿದ್ಧತೆ, ಮತಗಟ್ಟೆ ತಲುಪಿದ ಮತಯಂತ್ರಗಳು

ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…

1 week ago

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು !

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

1 week ago

ಮತದಾನಕ್ಕೆ ಕೌಂಟ್‌ಡೌನ್ | ಮತಗಟ್ಟೆಗಳಿಗೆ ಮತಯಂತ್ರ ಇತರ ಪರಿಕರಗಳೊಂದಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…

1 week ago

Arecanut Today Price | ಮೇ 5ರ ಅಡಿಕೆ ರೇಟ್

ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

1 week ago

ಕಾಂಗ್ರೆಸ್ ಮೀಸಲಾತಿ ಜಾರಿಗೊಳಿಸಿದ್ದರಿಂದ ಕೆಳ ವರ್ಗದವರಿಗೂ ಸರ್ಕಾರಿ ಉದ್ಯೋಗ ಲಭಿಸಿದೆ ; ಬೇಳೂರು ಗೋಪಾಲಕೃಷ್ಣ

ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…

1 week ago