ಮೂಲಸೌಕರ್ಯದ ಕೊರತೆ, ಪರಿಹಾರಕ್ಕೆ ಎಎಪಿ ಒತ್ತಾಯ

ಚಿಕ್ಕಮಗಳೂರು : ನಗರ ವ್ಯಾಪ್ತಿಯಲ್ಲಿ ಮೂಲಸೌಕರ್ಯದ ಕೊರತೆ ಪರಿಹರಿಸುವುದು ಹಾಗೂ ನಿವಾಸಿಗಳಿಗೆ ಆರೋಗ್ಯ ಪೂರ್ಣ ವಾತಾವರಣ ನಿರ್ಮಿಸಲು ನಗರಸಭಾ ಆಡಳಿತವು ತ್ವರಿತವಾಗಿ ಕಾರ್ಯ ಚಟುವಟಿಕೆ ರೂಪಿಸಬೇಕು ಎಂದು ಜಿಲ್ಲಾ ಆಮ್‌ಆದ್ಮಿ ಮಾಧ್ಯಮ ಪ್ರತಿನಿಧಿ ಡಾ|| ಕೆ.ಸುಂದರಗೌಡ ಹೇಳಿದ್ದಾರೆ.

ಈ ಕುರಿತು ಮಂಗಳವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ನಗರದ ಎಬಿಸಿ ಕಾಫಿ ಕ್ಯೂರಿಂಗ್‌ನಿಂದ ರಾಂಪುರ ಮಾರ್ಗದವರೆಗೂ ಬೀದಿ ದೀಪಗಳಿಲ್ಲದ ಕಾರಣ, ನಿವಾಸಿಗಳು ರಸ್ತೆ ದಾಟುವ ವೇಳೆಯಲ್ಲಿ ವಾಹನಗಳನ್ನು ತಡೆವೊಡ್ಡಿ ತೆರಳುವ ಪರಿಸ್ಥಿತಿ ಪ್ರತಿದಿನವು ಎದುರಿಸಲಾಗುತ್ತಿದೆ ಎಂದಿದ್ದಾರೆ.

ಟಿಪ್ಪುನಗರ, ಶಂಕರಪುರ ಸೇರಿದಂತೆ ನಗರದ ಕೆಲವು ಭಾಗಗಳು ಕೊಳಚೆ ಪ್ರದೇಶವಾಗಿವೆ. ಹಗಲಿನಲ್ಲೇ ಸೊಳ್ಳೆಗಳ ಹಾವಳಿಯಿಂದ ಡೆಂಗ್ಯೂ, ಜ್ವರ ಯಥೆಚ್ಚವಾಗಿ ಎಲ್ಲೆಡೆ ಹರಡಿಕೊಂಡು ನಿವಾಸಿಗಳು ಕಾಯಿಲೆಗೆ ತುತ್ತಾ ಗಿದ್ದಾರೆ. ಆ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ನಗರ ಪ್ರದೇಶವನ್ನು ಸ್ವಚ್ಚವಾಗಿಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

ನಗರದ ಚರಂಡಿ, ಯುಜಿಡಿ ನೀರು ಉಪ್ಪಳ್ಳಿ ಚಾನಲ್‌ನ ಮೂಲಕ ನೇರವಾಗಿ ಯಗಚಿ ಡ್ಯಾಂಗೆ ಹರಿದು ಮಲೀನಗೊಳ್ಳುತ್ತಿದೆ. ಇದರಿಂದ ಜನತೆಯ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಆತಂಕ ನಿರ್ಮಾಣವಾಗಿದೆ ಎಂದ ಅವರು, ಅನಾವಶ್ಯಕವಾಗಿ ನಗರದ ಜನತೆ ಆಸ್ಪತ್ರೆಗಳಿಗೆ ವೆಚ್ಚ ಭರಿಸುವಂತಾಗಿದೆ ಎಂದು ಹೇಳಿದ್ದಾರೆ.

ಇತ್ತೀಚೆಗೆ ನಗರಸಭೆಗೆ ನೂತನ ಆಯುಕ್ತರು ನೇಮಕಗೊಂಡ ಹಿನ್ನೆಲೆಯಲ್ಲಿ ನಗರದ ಸುವ್ಯವಸ್ಥಿತವಾದ ಬೀದಿದೀಪ ಅಳವಡಿಸುವುದು. ಸ್ವಚ್ಚ ಮತ್ತು ಸುಂದರ ನಗರವಾಗಿಸುವ ನಿಟ್ಟಿನಲ್ಲಿ ತಮ್ಮ ವ್ಯಾಪ್ತಿಯಲ್ಲಿ ಕಾರ್ಯ ಪ್ರವೃತ್ತರಾಗಿ ಸಾರ್ವಜನಿಕರ ಸೇವೆಗೆ ಇಚ್ಚಾಶಕ್ತಿಯನ್ನು ತೋರಿ ಆರೋಗ್ಯ ಪೂರ್ಣ ಸಮಾಜ ನಿರ್ಮಾಣ ಮಾಡ ಬೇಕು ಎಂದು ತಿಳಿಸಿದ್ದಾರೆ.

ಬಿಸಿಲಿನ ತಾಪಮಾನದಿಂದ ನಗರದ ಕೆಲವು ವಾರ್ಡ್ಗಳಲ್ಲಿ ಕುಡಿಯುವ ನೀರಿಗೂ ಅಭಾವ ಸೃಷ್ಟಿಯಾಗಿದೆ. ಇಡೀ ನಗರದ ಕಸದ ರಾಶಿಯನ್ನು ಸುಡುತ್ತಿರುವುದರಿಂದ ತಾಪಮಾನ ಏರಿಕೆಗೊಂಡು ಹವಾಮಾನ ವೈಪರೀತ್ಯಕ್ಕೆ ದಾರಿ ಮಾಡುವ ಸಂಕೇತವಾಗಿದೆ. ಹೀಗಾಗಿ ಪೌರಕಾರ್ಮಿಕರಿಗೆ ಮತ್ತು ನಿವಾಸಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಕೈಗೆತ್ತಿಕೊಳ್ಳಬೇಕಿದೆ ಎಂದು ಹೇಳಿದ್ದಾರೆ.

ನಗರವನ್ನು ಸ್ವಚ್ಚ ಹಾಗೂ ಸುಭೀಕ್ಷವಾಗಿಡುವ ನಿಟ್ಟಿನಲ್ಲಿ ನಗರಸಭಾ ಹಾಗೂ ಮೆಸ್ಕಾಂ ಇಲಾಖೆ ಅಧಿಕಾರಿ ವೃಂದದವರು ಮುತುವರ್ಜಿಸಬೇಕು. ನಮ್ಮ ರಕ್ಷಣೆ, ನಮ್ಮ ನಗರಕ್ಕೆ ಎಂಬ ಧ್ಯೇಯೋದ್ದೇಶವನ್ನು ಇಟ್ಟುಕೊಂಡು ಮುಂದಿನ ಪೀಳಿಗೆಗೆ ಭೂಮಿ ಉಳಿದರೆ ನಾವು ಉಳಿದೇವು ಎಂಬ ನಾಲ್ನುಡಿಯಂತೆ ಕಾರ್ಯಚಟುವಟಿಕೆ ರೂಪಿಸಬೇಕು ಎಂದು ಒತ್ತಾಯಿಸಿದ್ದಾರೆ.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

2 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

2 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

2 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

2 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

2 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

3 days ago