ಯುವಕನನ್ನು ಮರಕ್ಕೆ ಕಟ್ಟಿ ಹಾಕಿ ಮದ್ಯಪಾನ ಮಾಡುತ್ತಲೇ ಮನಬಂದಂತೆ ಥಳಿಸಿದ ಗುಂಪು

ಕೊಪ್ಪ : ಐದು ಸಾವಿರ ಸಾಲ ಪಡೆದಿದ್ದ ಯುವಕ ಸಾಲ ಹಿಂದಿರುಗಿಸಿಲ್ಲ ಎಂದು ಆರೋಪಿಸಿ ಯುವಕರ ಗುಂಪೊಂದು ಮದ್ಯಪಾನ ಮಾಡುತ್ತಾ ಸಾಲ ಪಡೆದವನ ಕೈ ಕಾಲು ಕಟ್ಟಿ, ಹಲ್ಲೆ ನಡೆಸಿರುವ ಅಮಾನವೀಯ ಘಟನೆಯೊಂದು ವರದಿಯಾಗಿದೆ.

ಕೊಪ್ಪ ತಾಲೂಕಿನ ಕರ್ಕೇಶ್ವರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗ್ರಾಮದ ಸೋಮ್ಲಾಪುರ ರಸ್ತೆಯ ಪ್ಲಾಂಟೇಶನ್ ನಲ್ಲಿ ಐವರು ಯುವಕರ ಗುಂಪು ಕೆಲ ದಿನಗಳ ಹಿಂದೆ ಐದು ಸಾವಿರ ಸಾಲ ಪಡೆದ ಯುವಕನನ್ನು ಮರಕ್ಕೆ ಕಟ್ಟಿ ಹಾಕಿದ್ದಲ್ಲದೆ ಮದ್ಯಪಾನ ಮಾಡುತ್ತಲೇ ಮನಬಂದಂತೆ ಥಳಿಸಿದ್ದಾರೆ. ಹಲ್ಲೆ ಮಾಡುವುದನ್ನು ವಿಡಿಯೋ ಕೂಡಾ ಮಾಡಿಕೊಂಡಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಸತೀಶ್ ಎಂಬಾತ ಯುವಕನೊಬ್ಬನಿಂದ ಐದು ಸಾವಿರ ಹಣ ಪಡೆದಿದ್ದ. ಸಾಲ ಹಿಂದಿರುಗಿಸಲು ಸತಾಯಿಸಿದ್ದ ಎನ್ನಲಾಗಿದ್ದು ಇದರಿಂದ ಕೋಪಗೊಂಡ ಯುವಕ ತನ್ನ ಸಹಚರರೊಂದಿಗೆ ಸೇರಿಕೊಂಡು ಇತ್ತೀಚೆಗೆ ಸತೀಶ್ ನನ್ನು ಪ್ಲಾಂಟೇಶನ್ ಗೆ ಕರೆತಂದು ಆತನನ್ನು ಮರಕ್ಕೆ ಕಟ್ಟಿ ಹಾಕಿದ್ದಾರೆ. ಈ ವೇಳೆ ಯುವಕರು ಮದ್ಯಪಾನ ಮಾಡುತ್ತಾ ಸತೀಶ್ ಮೇಲೆ ಮನಸೋ ಇಚ್ಚೆ ಹಲ್ಲೆ ಮಾಡಿದ್ದಾರೆ.

ಹಲ್ಲೆಯಿಂದ ಸತೀಶ್ ಮೈ ಮೇಲೆ ರಕ್ತ ಸಿಕ್ತ ಬಾಸುಂಡೆ, ಗಾಯವಾಗಿದ್ದು ಕೊಪ್ಪ ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಈ ಘಟನೆ ಸಂಬಂಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಮಹೇಶ್, ವಿಠಲ, ಸಿರಿಲ್, ಮಂಜು, ಸುನಿಲ್, ಕಟ್ಟೆಹಕ್ಲು ಮಂಜು ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.

Malnad Times

Share
Published by
Malnad Times

Recent Posts

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ…

6 hours ago

Arecanut Today Price | ಏಪ್ರಿಲ್ 26ರ ಅಡಿಕೆ ರೇಟ್

ಹೊಸನಗರ : ಏ. 26 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

17 hours ago

ಮೇ 02 ರಂದು ಶಿವಮೊಗ್ಗಕ್ಕೆ ರಾಹುಲ್ ಗಾಂಧಿ ಆಗಮನ

ಶಿವಮೊಗ್ಗ : ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಗೀತಾಶಿವರಾಜ್‍ಕುಮಾರ್ ಬಹಿರಂಗ ಪ್ರಚಾರ ಮಾಡಲಿದ್ದಾರೆ ಎಂದು…

17 hours ago

ಲಕ್ಷಾಂತರ ಮತಗಳ ಅಂತರದಲ್ಲಿ ಗೆಲುವು ನನ್ನದೇ, 2ನೇ ಸ್ಥಾನಕ್ಕಾಗಿ ಬಿಜೆಪಿ, ಕಾಂಗ್ರೆಸ್ ಪೈಪೋಟಿ ಅಂದ್ರು ಈಶ್ವರಪ್ಪ

ರಿಪ್ಪನ್‌ಪೇಟೆ: ನನ್ನ ಪರವಾಗಿ ಹೋದ ಕಡೆಯಲೆಲ್ಲ ಬಿಜೆಪಿ ಮತ್ತು ಜೆಡಿಎಸ್ ಕಾಂಗ್ರೆಸ್ ಪಕ್ಷದ ಸಾಕಷ್ಟು ಕಾರ್ಯಕರ್ತರು ಹೆಚ್ಚು ಬೆಂಬಲ ವ್ಯಕ್ತಪಡಿಸುತ್ತಿದ್ದು…

17 hours ago

ಹಸೆಮಣೆ ಏರುವ‌ ಮುನ್ನ ಹಕ್ಕು ಚಲಾಯಿಸಿದ ವಧು

ಶೃಂಗೇರಿ : ಇಂದು ನಡೆದ ಮತದಾನದಲ್ಲಿ ತಾಲೂಕಿನ ಕೂತಗೋಡಿನಲ್ಲಿ ಹಸೆಮಣೆ ಏರುವ ಮುನ್ನ ಯುವತಿಯೊಬ್ಬಳು ಮತ ಚಲಾಯಿಸಲು ಅಲಂಕಾರಗೊಂಡೆ ಮತಗಟ್ಟೆಗೆ…

18 hours ago

ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ !

ಮತದಾನದ ವೇಳೆ ಬಿಜೆಪಿ ಕಾರ್ಯಕರ್ತರ ನಡುವೆಯೇ ಮಾರಾಮಾರಿ ನಡೆದ ಬಗ್ಗೆ ವರದಿಯಾಗಿದೆ. ಚಿಕ್ಕಮಗಳೂರು : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು…

19 hours ago