ಶಿಸ್ತು, ಸಂಘಟನಾ ಶಕ್ತಿ ಧರ್ಮಸ್ಥಳ ಸಂಘದ ಸದಸ್ಯರಲ್ಲಿದೆ ; ಗುರುಸಜ್ಜನ್

ಚಿಕ್ಕಮಗಳೂರು : ಧರ್ಮಸ್ಥಳ ಯೋಜನೆಯ ಸಂಘದ ಸದಸ್ಯರಲ್ಲಿ ಶಿಸ್ತು, ವ್ಯವಹಾರ ಜ್ಞಾನ, ಸಂಘಟನಾ ಶಕ್ತಿ ಹಾಗೂ ವೈಯಕ್ತಿಕ ಜೀವನದಲ್ಲಿ ಬದಲಾವಣೆಯಾಗಿ ಕುಟುಂಬಗಳು ಸರ್ವತೋಮುಖ ಅಭಿವೃದ್ಧಿಯತ್ತ ಸಾಗಿವೆ ಎಂದು ಪೊಲೀಸ್ ಉಪನಿರೀಕ್ಷಕ ಗುರುಸಜ್ಜನ್ ಹೇಳಿದರು.

ತಾಲ್ಲೂಕಿನ ಮಲ್ಲಂದೂರು ಸಮೀಪದ ಮಳಲೂರಮ್ಮ ದೇವಾಲಯ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ತಾಲ್ಲೂಕು ಟ್ರಸ್ಟ್, ಶ್ರೀ ಸತ್ಯನಾರಾಯಣ ಪೂಜಾ ಸಮಿತಿ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ಸಹಯೋಗದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿ, ಬದಲಾಗುತ್ತಿರುವ ಇಂದಿನ ಸಮಾಜದಲ್ಲಿನ ಜನರಲ್ಲಿ ಧಾರ್ಮಿಕ ಪ್ರಜ್ಞೆ ಮೂಡಿಸುವಂತಹ ಧಾರ್ಮಿಕ ಕಾರ್ಯಕ್ರಮದಿಂದ ಹೊಸ ಬದಲಾವಣೆಯಾಗುತ್ತದೆ ಮತ್ತು ಗ್ರಾಮದ ಶ್ರೇಯಸ್ಸಾಗುತ್ತದೆ. ಎಲ್ಲರೂ ಹೊಂದಾಣಿಕೆಯಿಂದ ಬಾಳುವಂತೆ ಪ್ರೇರೇಪಣೆ ನೀಡಿದಂತಾಗಿರುತ್ತದೆ ಎಂದರು.

ಒಗ್ಗಟ್ಟಿಗೆ, ಯಶಸ್ಸಿಗೆ, ಸಮಾನತೆಗೆ ಈ ಕಾರ್ಯಕ್ರಮ ಸಹಕಾರಿ. ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಧಾರ್ಮಿಕ ಸಭಾ ಕಾರ್ಯಕ್ರಮ ಉತ್ತಮ ರೀತಿಯಲ್ಲಿ ಒಂದೇ ವೇದಿಕೆಯಲ್ಲಿ ಮೂಡಿ ಬಂದಿದೆ. ಈ ಕಾರ್ಯಕ್ರಮದಲ್ಲಿ ಇಷ್ಟು ಜನ ಸೇರಿರುವುದಕ್ಕೆ ಸಂಘಟನಾಶಕ್ತಿ ಹೊಂದಾಣಿಕೆ ಮುಖ್ಯ ಎಂದು ತಿಳಿಸಿದರು.

ಜೋಳ್ದಾಳ್ ನಿವೃತ್ತ ಪ್ರಾಂಶುಪಾಲೆ ಚಾಂದಿನಿ ಧಾರ್ಮಿಕ ಉಪನ್ಯಾಸ ಮಾತನಾಡಿ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಇದರಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಕೂಡ ಒಂದು ಈ ಕಾರ್ಯಕ್ರಮದಿಂದ ಜನರಲ್ಲಿ ಧಾರ್ಮಿಕತೆಯ ಬಗ್ಗೆ ಉತ್ತಮ ಸಂದೇಶವನ್ನು ತಿಳಿಸಲಾಗುತ್ತಿದೆ ಎಂದು ತಿಳಿಸಿದರು.

ತಾಲೂಕು ಯೋಜನಾಧಿಕಾರಿ ಕೊರಗಪ್ಪ ಪೂಜಾರಿ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನರಲ್ಲಿ ಆತ್ಮವಿಶ್ವಾಸ ಮೂಡಿಸುವಂತಹ ಹಲವಾರು ಕಾರ್ಯಕ್ರಮಗಳನ್ನು ನಡೆಸಿಕೊಳ್ಳುತ್ತಾ ಬರುತ್ತಿದೆ ಇದರ ಸದುಪಯೋಗವನ್ನು ಫಲಾನುಭವಿಗಳು ಪಡೆದುಕೊಳ್ಳಬೇಕು ಎಂದು ಸಲಹೆ ಮಾಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಜೆ.ಸಂದೀಪ್, ಧಾರ್ಮಿಕ ಚಿಂತಕ ಚಂದ್ರಮೌಳಿ, ದೇವಾಲಯ ಅರ್ಚಕ ರಾಜಣ್ಣಗೌಡ, ಮೇಲ್ವಿಚಾರಕ ಮರುಳೇಶ್, ಶೌರ್ಯ ಸಂಯೋಜಕ ಸುಗುದೇವ್, ಆವತಿ ಬಿ. ಒಕ್ಕೂಟದ ಅಧ್ಯಕ್ಷೆ ಶೋಭಾ, ಬ್ಯಾರವಳ್ಳಿ ಒಕ್ಕೂಟದ ಅಧ್ಯಕ್ಷ ಜಿ.ಎನ್.ಉಮೇಶ್ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ದೇವರಾಜ್ ಸ್ವಾಗತಿಸಿದರು. ಶಿವಕುಮಾರ್ ನಿರೂಪಿಸಿದರು. ಪ್ರದೀಪ್ ವಂದಿಸಿದರು

Malnad Times

Recent Posts

Rain Alert | ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…

6 days ago

Shivamogga Loksabha Constituency | ಮತದಾನಕ್ಕೆ ಸಕಲ ಸಿದ್ಧತೆ, ಮತಗಟ್ಟೆ ತಲುಪಿದ ಮತಯಂತ್ರಗಳು

ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…

7 days ago

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು !

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

7 days ago

ಮತದಾನಕ್ಕೆ ಕೌಂಟ್‌ಡೌನ್ | ಮತಗಟ್ಟೆಗಳಿಗೆ ಮತಯಂತ್ರ ಇತರ ಪರಿಕರಗಳೊಂದಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…

7 days ago

Arecanut Today Price | ಮೇ 5ರ ಅಡಿಕೆ ರೇಟ್

ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

1 week ago

ಕಾಂಗ್ರೆಸ್ ಮೀಸಲಾತಿ ಜಾರಿಗೊಳಿಸಿದ್ದರಿಂದ ಕೆಳ ವರ್ಗದವರಿಗೂ ಸರ್ಕಾರಿ ಉದ್ಯೋಗ ಲಭಿಸಿದೆ ; ಬೇಳೂರು ಗೋಪಾಲಕೃಷ್ಣ

ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…

1 week ago