ಶೃಂಗೇರಿ ಶ್ರೀಗಳು ಅಯೋಧ್ಯೆ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ

0 479

ಶೃಂಗೇರಿ : ಶೃಂಗೇರಿ ಶ್ರೀ ಮಠದ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಅವರು ಅಯೋಧ್ಯೆಯಲ್ಲಿ ನಡೆಯುವ ಶ್ರೀರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾರೆಂದು ಖಾಸಗಿ ಮಾಧ್ಯಮದಲ್ಲಿ ಸುದ್ದಿ ಬಿತ್ತರವಾದ ಹಿನ್ನೆಲೆಯಲ್ಲಿ ಶ್ರೀಮಠದಿಂದ ಪ್ರಕಟಣೆಯನ್ನು ಹೊರಡಿಸಲಾಗಿದೆ.

ಅಯೋಧ್ಯೆ ಶ್ರೀ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರು ತೆರಳುತ್ತಿಲ್ಲ. ಸ್ವಾಮೀಜಿಯವರ ಹಾಗೂ ಮಠದ ಪ್ರತಿನಿಧಿಯಾಗಿ ಶ್ರೀಮಠದ ಆಡಳಿತಾಧಿಕಾರಿ ವಿ.ಆರ್. ಗೌರಿ ಶಂಕರ್ ಅವರು ತೆರಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು, ಸ್ವಾಮೀಜಿ ಅವರು ಶ್ರೀರಾಮನ ಶ್ಲೋಕ ಪಠಿಸಿ ಶ್ರೀರಾಮ ಅನುಗ್ರಹ ದೊರೆಯುತ್ತದೆ ಎಂದು ಹೇಳಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿದಿದ್ದಾರೆ.

Leave A Reply

Your email address will not be published.

error: Content is protected !!