ಶೋಭಾ ಕರಂದ್ಲಾಜೆ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ಹಾಗೂ ಪಿತೂರಿ ನಡೆಯುತ್ತಿದೆ ; BSY

0 338

ಚಿಕ್ಕಮಗಳೂರು : ಇನ್ನು ಮೂರು ದಿನಗಳಲ್ಲಿ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ರಾಜ್ಯದ ಕೆಲ ಕ್ಷೇತ್ರಗಳಲ್ಲಿ ಅಭ್ಯರ್ಥಿ ಗೊಂದಲವಿದೆ ಎನ್ನುವ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇನ್ನೂ ಎರಡು ಮೂರು ದಿನಗಳಲ್ಲಿ ಎಲ್ಲಾ ಗೊಂದಲ ಬಗೆಹರಿಯಲಿದೆ. ಮೂರು ದಿನದಲ್ಲಿ ಮೊದಲ ಪಟ್ಟಿ ಬಿಡುಗಡೆಯಾಗುವ ಮೂಲಕ ಎಲ್ಲಾ ಗೊಂದಲಕ್ಕೂ ತೆರೆ ಬೀಳಲಿದೆ ಎಂದರು‌.

ಪ್ರಧಾನಿ ನರೇಂದ್ರ ಮೋದಿ ಅವರ ಕಾರಣಕ್ಕೆ ಇಡೀ ದೇಶ ಹಾಗೂ ರಾಜ್ಯದಲ್ಲಿ ಬಿಜೆಪಿ ಪರವಾಗಿ ವಾತಾವರಣವಿದೆ. ಹೀಗಾಗಿ ಕರ್ನಾಟಕದ 28 ಕ್ಷೇತ್ರಗಳಲ್ಲಿಯೂ ಬಿಜೆಪಿ ಪ್ರಯತ್ನ ಮಾಡುತ್ತಿದೆ ಜೊತೆಗೆ ಇದಕ್ಕೆ ಪೂರಕ ವಾತಾವರಣವು ಇದೆ ಎಂದರು‌.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ಹಾಗೂ ಪಿತೂರಿ ನಡೆಯುತ್ತಿದೆ. ಇದನ್ನು ಯಾರು ಮಾಡುತ್ತಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಇಂತಹ ಷಡ್ಯಂತ್ರಗಳಿಂದ ಶೋಭಾ ಕರಂದ್ಲಾಜೆ ದೃತಿಗೆಡುವುದಿಲ್ಲ. ಕಳೆದ ಚುನಾವಣೆಯಲ್ಲಿ ಶೋಭಾ ಕರಂದ್ಲಾಜೆ 3.50 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದರು. ಈ ಬಾರಿ ಚುನಾವಣೆಯಲ್ಲಿ ಇದಕ್ಕಿಂತಲೂ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ. ಹೀಗೆಂದು ಹೇಳುವ ಮೂಲಕ ಶೋಭಾ ಕರಂದ್ಲಾಜೆ ಅವರೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿ ಎನ್ನುವುದನ್ನು ಪರೋಕ್ಷವಾಗಿ ಘೋಷಿಸಿದರು‌.

Leave A Reply

Your email address will not be published.

error: Content is protected !!