ಸತ್ಕಾರ್ಯಗಳಿಂದ ಬದುಕು ಬಲಾಢ್ಯ ; ಶ್ರೀ ರಂಭಾಪುರಿ ಶ್ರೀಗಳು

ಎನ್.ಆರ್.ಪುರ: ಯಾವ ಸಂಪತ್ತಿಗಾಗಿ ಜೀವ ಜಗತ್ತು ಬದುಕುತ್ತಿದೆಯೋ ಆ ಸಂಪತ್ತಿನ ಪ್ರಾಪ್ತಿಗಾಗಿ ಶ್ರಮಿಸಬೇಕಾಗುತ್ತದೆ. ಸತ್ಕಾರ್ಯಗಳ ಮೂಲಕ ನಮ್ಮ ಬಾಳ ಬದುಕನ್ನು ಬೆಳೆಸಿಕೊಳ್ಳಬೇಕಾಗಿದೆ ಎಂದು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.


ಅವರು ಶನಿವಾರ ಶ್ರೀ ಜಗದ್ಗುರು ರಂಭಾಪುರಿ ಪೀಠದಲ್ಲಿ ಜರುಗಿದ ಪೂರ್ಣಿಮಾ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ, ಮಾತು ಒಂದುಗೂಡಿಸಬೇಕೇ ಹೊರತು ಒಡೆಯಬಾರದು. ಒಡೆದ ಮನಸ್ಸುಗಳನ್ನು ಬೆಸೆಯುವುದೇ ಧರ್ಮದ ಕೆಲಸವಾಗಬೇಕಾಗಿದೆ. ಹುಟ್ಟು ಸಾವು ನಮ್ಮ ಕೈಯಲ್ಲಿ ಇಲ್ಲದಿದ್ದರೂ ಬದುಕು ನಮ್ಮ ಕೈಯಲ್ಲಿದೆ. ಅಂತರಂಗ ಬಹಿರಂಗ ಶುದ್ಧಿಗೆ ಮನುಷ್ಯ ಪ್ರಾಮಾಣಿಕ ಪ್ರಯತ್ನ ಮಾಡಬೇಕಾಗಿದೆ. ಮನದ ಮಧ್ಯೆ ನಿರ್ಮಾಣಗೊಂಡ ಸ್ವಾರ್ಥದ ಗೋಡೆಯನ್ನು ದಾಟುವುದು ಕಷ್ಟವೆಂದು ಮಹಾತ್ಮರು ಎಚ್ಚರಿಸಿದ್ದಾರೆ. ಒಳ್ಳೆಯದಕ್ಕಿಂತ ಕೆಟ್ಟದ್ದು ಬಹುಬೇಗ ಬೆಳೆಯುತ್ತದೆ. ಅಷ್ಟೇ ಬೇಗ ನಾಶವಾಗುತ್ತದೆ. ಬಹಳಷ್ಟು ಜನ ಬಹಳಷ್ಟು ಗ್ರಂಥಗಳನ್ನು ಓದಬಹುದು. ಓದಿ ಎಷ್ಟೋ ಒಳ್ಳೆಯ ಮಾತುಗಳನ್ನು ಆಡಬಹುದು. ಆದರೆ ಬದುಕಿನಲ್ಲಿ ಅದರಂತೆ ನಡೆದುಕೊಳ್ಳದಿದ್ದರೆ ಯಾವ ಪ್ರಯೋಜನವು ಇಲ್ಲವೆಂದು ಶ್ರೀ ಜಗದ್ಗುರು ರೇಣುಕಾಚಾರ್ಯರು ಸಿದ್ಧಾಂತ ಶಿಖಾಮಣಿ ಧರ್ಮ ಗ್ರಂಥದಲ್ಲಿ ಪ್ರತಿಪಾದಿಸಿದ್ದಾರೆ ಎಂದರು.


ಇದೇ ಸಂದರ್ಭದಲ್ಲಿ ದೇವಮಲ್ಲಮ್ಮನ ತ್ಯಾಗ ಕೃತಿಯನ್ನು ಶ್ರೀ ರಂಭಾಪುರಿ ಜಗದ್ಗುರುಗಳು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಚಂದ್ರಶೇಖರ ನಾಗರಾಳಮಠ, ಹಾನಗಲ್ಲಿನ ಡಾ.ವಿಶ್ವನಾಥ ಪುರಾಣಿಕಮಠ, ಶ್ರೀ ಪೀಠದ ಆಡಳಿತಾಧಿಕಾರಿ ಎಸ್.ಬಿ.ಹಿರೇಮಠ, ಶ್ರೀ ಪೀಠದ ಲೆಕ್ಕಾಧಿಕಾರಿ ಸಂಕಪ್ಪನವರ, ಹರಪನಹಳ್ಳಿ ಕೊಟ್ರೇಶಪ್ಪ, ಗುರುಕುಲದ ಪ್ರಾಚಾರ್ಯ ಸಿದ್ಧಲಿಂಗಯ್ಯ, ಗುರುಕುಲದ ಎಲ್ಲ ಸಾಧಕರು ಉಪಸ್ಥಿತರಿದ್ದರು.ಗಂಗಾಧರಸ್ವಾಮಿ ಅವರಿಂದ ಭಕ್ತಿಗೀತೆ ಜರುಗಿತು. ದಾನಯ್ಯ ದೇವರು ನಿರೂಪಣೆ ಮಾಡಿದರು.


ಪ್ರಾತಃಕಾಲದಲ್ಲಿ ಸೀಗೆ ಹುಣ್ಣಿಮೆ ನಿಮಿತ್ಯ ಭೂಮಿ ತಾಯಿಗೆ ಹಾಲು ತುಪ್ಪವನೆರೆದು ಪೂಜೆ ಸಲ್ಲಿಸಿ ನಂತರ ಶ್ರೀ ಪೀಠದ ಎಲ್ಲ ದೈವಗಳಿಗೆ ವಿಶೇಷ ಪೂಜೆ ಸಲ್ಲಿಸಿದರು. ಆಗಮಿಸಿದ ಸಕಲ ಸದ್ಭಕ್ತರಿಗೆ ಅನ್ನ ದಾಸೋಹ ಜರುಗಿತು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

2 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

2 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

2 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

2 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

2 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

3 days ago